ಗಣಿತ ನಗರ(ಜು ,25) : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ-38ನ್ನು ಕಾರ್ಗಿಲ್ ವಿಜಯದಿವಸದ ಶುಭಸಂದರ್ಭದಲ್ಲಿ ಆಯೋಜಿಸಲಾಗಿದ್ದು, ಜುಲೈ 26ರ ಶನಿವಾರದಂದು ಅಪರಾಹ್ನ 3.30ಕ್ಕೆ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ವಾಗ್ಮಿ ಕು.ಅಕ್ಷಯ ಗೋಖಲೆ “ಬಹುರತ್ನ ಪ್ರಸವೀ ಭಾರತೀ” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಆಸಕ್ತರು […]
Tag: jnana foundation
ಕೆ.ಸಿ.ಇಟಿ ಫಲಿತಾಂಶ: ಜ್ಞಾನಸುಧಾದ ತರುಣ್.ಎ.ಸುರಾನಾಗೆ ಇಂಜಿನಿಯರಿಂಗ್ ನಲ್ಲಿ ರಾಜ್ಯಕ್ಕೆ 6ನೇ ರ್ಯಾಂಕ್
ಗಣಿತನಗರ(ಮೇ ,24): : ಇಂಜಿನಿಯರಿಂಗ್ ಹಾಗೂ ಇತರ ವೃತ್ತಿಪರ ಕೋರ್ಸುಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ತರುಣ್ ಎ. ಸುರಾನ ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ 6ನೇ ರ್ಯಾಂಕನ್ನು ಪಡೆದಿರುತ್ತಾರೆ, ಸಂಸ್ಥೆಯ 40 ವಿದ್ಯಾರ್ಥಿಗಳು ಇಂಜಿನಿಯರಿಂಗ್ ವಿಭಾಗದಲ್ಲಿ ಸಾವಿರದೊಳಗಿನ ರ್ಯಾಂಕ್ ಪಡೆದಿದ್ದಾರೆ. ತರುಣ್ ಎ. ಸುರಾನ 6ನೇ ರ್ಯಾಂಕ್ (ಬಿ.ಫಾರ್ಮದಲ್ಲಿ 30ನೇ ರ್ಯಾಂಕ್, ಅಗ್ರಿಯಲ್ಲಿ 54ನೇ ರ್ಯಾಂಕ್), ವಿಷ್ಣು ಧರ್ಮ ಪ್ರಕಾಶ್ […]
ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಜ್ಞಾನಸುಧಾದ ಸ್ವಸ್ತಿ ಕಾಮತ್ ರಾಜ್ಯಕ್ಕೆ ಪ್ರಥಮ
ಕಾರ್ಕಳ ( ಮೇ ,03): 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಣಿತನಗರದ ಸ್ವಸ್ತಿ ಕಾಮತ್ 625 ರಲ್ಲಿ 625 ಅಂಕಗಳೊoದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ. ಲಿಖಿತ್ ಡಿ ಶೆಟ್ಟಿ 621 ಅಂಕಗಳೊoದಿಗೆ ಶಾಲೆಗೆ ದ್ವಿತೀಯ ಸ್ಥಾನ ಹಾಗೂ ರಾಜ್ಯಕ್ಕೆ ಐದನೇ ಸ್ಥಾನ, ಮಿಶಾಲ್ ಅಸ್ಸಾದಿ ಮತ್ತು ವೇದಿಕಾ 620 ಅಂಕಗಳೊoದಿಗೆ ಶಾಲೆಗೆ ತೃತೀಯ ಹಾಗೂ ರಾಜ್ಯಕ್ಕೆ ಆರನೇ ಸ್ಥಾನ ಪಡೆದುಕೊಂಡಿದ್ದಾರೆ. ರಾಜ್ಯಮಟ್ಟದ ಮೊದಲ […]
ಜೆಇಇ ಮೈನ್ (ಬಿ.ಆರ್ಕ್) ಫಲಿತಾಂಶ : ಜ್ಞಾನಸುಧಾದ ಮೂವರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್ ,22 ವಿದ್ಯಾರ್ಥಿಗಳಿಗೆ 95ಕ್ಕಿಂತ ಅಧಿಕ ಪರ್ಸಂಟೈಲ್
ಕಾರ್ಕಳ(ಫೆ,24):ರಾಷ್ಟ್ರಮಟ್ಟದಲ್ಲಿ ಎನ್.ಟಿ.ಎ ನಡೆಸುವ ಜೆಇಇ ಮೈನ್.ಬಿ.ಆರ್ಕ್ನ ಮೊದಲ ಹಂತದ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್ ಹಾಗೂ 22 ವಿದ್ಯಾರ್ಥಿಗಳಿಗೆ 95ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಕೆ.ಮನೋಜ್ ಕಾಮತ್ 99.8233055 ಪರ್ಸಂಟೈಲ್, ದರ್ಶನ್ ಡಿ ಬಾಯಾರ್ 99.6466111 ಪರ್ಸಂಟೈಲ್, ಚಿಂತನ ಜೆ. ಮೆಘವತ್ 99.2615078 ಪರ್ಸಂಟೈಲ್, ಆಕಾಶ್ ಎಚ್ ಪ್ರಭು 98.9987314 ಪರ್ಸಂಟೈಲ್, ಪ್ರಜ್ವಲ್ ನಾಯಕ್ 98.6430772 […]
ಕಾರ್ಕಳ ಜ್ಞಾನಸುಧಾ : 76ನೇ ಗಣರಾಜ್ಯೋತ್ಸವ ಸಂಭ್ರಮ
ಕಾರ್ಕಳ(ಜ,26) : ಧರ್ಮವನ್ನು ಮೀರಿದ ರಾಷ್ಟ್ರೀಯ ಹಬ್ಬಗಳಲ್ಲಿ ಗಣರಾಜ್ಯೋತ್ಸವವು ಒಂದು. ನಮ್ಮ ಜವಾಬ್ದಾರಿಯನ್ನು ನೆನಪಿಕೊಂಡು ಪ್ರಜಾಪ್ರಭುತ್ವದ ಘನತೆ-ಗೌರವವನ್ನು ಎತ್ತಿಹಿಡಿಯುವತ್ತ ವಿದ್ಯಾರ್ಥಿಗಳು ಚಿತ್ತಹರಿಸಬೇಕು. ಭವ್ಯ ಭಾರತವನ್ನು ಕಟ್ಟುವಲ್ಲಿ ಪ್ರಾಮಾಣಿಕವಾಗಿ ದುಡಿದು ದೇಶ ಸೇವೆಯ ಧನ್ಯತೆಯನ್ನು ಪಡೆಯಬೇಕು ಎಂದು ಸೌತ್ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ನ ಅಧ್ಯಕ್ಷರಾದ ಶ್ರೀ ಪದ್ಮಪ್ರಸಾದ್ ಜೈನ್ ನೆಲ್ಲಿಕಾರು ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆದ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಇದೇ ಸಂದರ್ಭ ಕಾರ್ಕಳ […]
ಕಾರ್ಕಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿಗಳ ಸಾಧನೆ
ಕಾರ್ಕಳ ( ಆ .03): ಶಾಲಾ ಶಿಕ್ಷಣ ಇಲಾಖೆ , ಕರ್ನಾಟಕ ಸರ್ಕಾರ ಮತ್ತು ಮರಿಯಾ ಗೊರಟ್ಟಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಿರ್ಗಾನ ಇವರ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ವಲಯ ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿಗಳಾದ ಪ್ರತ್ಯುಶ್ ಶೆಟ್ಟಿ 200 ಮೀ. ಓಟದಲ್ಲಿ ಪ್ರಥಮ ಸ್ಥಾನ, 100ಮೀ.ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಶ್ರವಣ್ 200 ಮೀ. […]
ಬಾಸ್ಕೆಟ್ ಬಾಲ್ : ಕಾರ್ಕಳ ಜ್ಞಾನಸುಧಾದ ನಾಲ್ವರು ರಾಜ್ಯಮಟ್ಟಕ್ಕೆ
ಗಣಿತ ನಗರ ( ಸೆ .29): ಶಾಲಾ ಶಿಕ್ಷಣ ಇಲಾಖೆ(ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ-ಬಾಲಕಿಯರ ಬಾಸ್ಕೆಟ್ ಬಾಲ್ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗವು ದ್ವಿತೀಯ ಪಡೆದು ಮೂವರು ವಿದ್ಯಾರ್ಥಿನಿಯರಾದ ದ್ವಿತೀಯ ವಿಜ್ಞಾನ ವಿಭಾಗದ ಗುಣಶ್ರೀ ಆರ್, ಮನಸ್ವಿ.ಎಚ್.ಟಿ, ಪ್ರಥಮ ವಿಜ್ಞಾನ ವಿಭಾಗದ ಪೂರ್ಣಶ್ರೀ.ವಿ.ಎಸ್. ಹಾಗೂ ಬಾಲಕರ ವಿಭಾಗದಲ್ಲಿ ದಿಗಂತ್.ಎಚ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರ ಸಾಧನೆಗೆ ಜ್ಞಾನಸುಧಾ ಶಿಕ್ಷಣ […]
ಕಾರ್ಕಳ ಜ್ಞಾನಸುಧಾ ಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಉಡುಪಿ( ಸೆ.18): ಶಾಲಾ ಶಿಕ್ಷಣ ಇಲಾಖೆ ಮತ್ತು ಉಡುಪಿಯ ಎಂ.ಜಿ.ಎಂ ಕಾಲೇಜಿನಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ವಿಶ್ವ ವಿನಾಯಕ ಹಾಗೂ ಅನನ್ಯ ವಿ. ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಇವರ ಸಾಧನೆಗೆ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು, ಸಿ.ಇ.ಒ ಮತ್ತು ಪ್ರಾಂಶುಪಾಲ ದಿನೇಶ್ ಎಂ. ಕೊಡವೂರುರವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ನೈಕಂಬ್ಳಿ : ಜ್ಞಾನ ಫೌಂಡೇಶನ್ ಬೆಂಗಳೂರು ವತಿಯಿಂದ ಉಚಿತ ಸಮ ವಸ್ತ್ರ ವಿತರಣೆ
ವಂಡ್ಸೆ (ಆ, 29) : ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ನೈಕಂಬ್ಳಿಯ ವಿದ್ಯಾರ್ಥಿಗಳಿಗೆ ಆರ್ಡಿಯ ಸಿ. ಎ. ಸುದೀಪ್ ಶೆಟ್ಟಿ ನಾಯಕತ್ವದ ಜ್ಞಾನ ಫೌಂಡೇಶನ್ ಬೆಂಗಳೂರು ಕೊಡಮಾಡಿದ ಉಚಿತ ಸಮವಸ್ತ್ರವನ್ನು ನೈಕಂಬ್ಳಿಯ ಪ್ರೇರಣಾ ಯುವ ವೇದಿಕೆಯವರು ವಿತರಿಸಿದರು. ಗ್ರಾಮೀಣ ಭಾಗದ ನಮ್ಮ ಶಾಲೆಗೆ ಕಟ್ಟಡಗಳ ಕೊರತೆಯಿದೆ. ಅಗತ್ಯ ಸೌಲಭ್ಯಗಳ ಪೂರೈಕೆಗೆ ದಾನಿಗಳ ಸಹಕಾರ ಅಗತ್ಯವಿದೆ. ಆ ನಿಟ್ಟಿನಲ್ಲಿ ಪ್ರೇರಣಾ ಮತ್ತು ಜ್ಞಾನ ಪೌಂಢೇಶನ್ ಈ ರೀತಿಯ ಸಹಕಾರಕ್ಕೆ ಧನ್ಯವಾದ ಎಂದು […]










