ಕಾರ್ಕಳ ( ಆ ,14): ಕಾರ್ಕಳದ ಪ್ರಸಿದ್ಧ ಲೆಕ್ಕಪರಿಶೋಧಕ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿಯಾಗಿರುವ ಸಿ.ಎ ನಿತ್ಯಾನಂದ ಪ್ರಭುರವರ ತಾಯಿ ಸುಮಿತ್ರಾ ಪ್ರಭು (87) ಅವರು ಆದಿತ್ಯವಾರದಂದು ದೈವಾಧೀನರಾದರು. ಕೆರ್ವಾಶೆಯಲ್ಲಿ ಜನಿಸಿದ ಇವರು ಅಜೆಕಾರ್ ಗುಂಡುರಾಯ ಪ್ರಭುರವನ್ನು ವರಿಸಿ ಅಂಗಡಿ ವ್ಯಾಪಾರದಲ್ಲಿ 40ವರ್ಷಗಳಿಂದ ತೊಡಗಿಸಿಕೊಂಡ ಇವರಿಗೆ ಓರ್ವ ಪುತ್ರನನ್ನು ಹಾಗೂ ಮೂವರು ಪುತ್ರಿಯರನ್ನು, 9 ಮೊಮ್ಮಕ್ಕಳನ್ನು ಹಾಗೂ ಒಂದು ಮರಿಮೊಮ್ಮಗುವನ್ನು ಅಗಲಿದ್ದಾರೆ. ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿ ಅಧ್ಯಕ್ಷರಾದ […]
Tag: jnana sudha
ಮಣಿಪಾಲ ಜ್ಞಾನಸುಧಾ: ಎನ್.ಎಸ್.ಎಸ್. ಘಟಕ ಉದ್ಘಾಟನೆ
ಮಣಿಪಾಲ ( ಆ .05): ಶ್ರಮಯೇವ ಜಯತೆ ಎನ್ನುವ ಧ್ಯೇಯ ದೊಂದಿಗೆ ದೇಶದಲ್ಲಿ ಅತೀ ಹೆಚ್ಚು ಸದಸ್ಯರ ಸಂಘಟನೆ ಎನ್. ಎಸ್. ಎಸ್.. ಅಂತಹ ಸುಭದ್ರ ತಳಹದಿಯ ಸಂಘಟನೆ ಸದಸ್ಯರಾಗಿರುವುದೇ ಹೆಮ್ಮೆಯ ವಿಷಯ. ಯುವಜನತೆಗೆ ವಿಧ್ಯಾಭ್ಯಾಸದ ಜೊತೆಗೆ ಸಾಮಾಜಿಕ ಜವಾಬ್ದಾರಿ ಸೇವಮಾನೋಭಾವನೆ ರೂಢಿಸಲು ಸೃಷ್ಟಿಯಾದ ಎನ್.ಎಸ್.ಎಸ್. ಕ್ರಾಂತಿಕಾರಿ ಸಾಧನಾ ಪಥದಲ್ಲಿ ಸಾಗುತ್ತಾ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸುತ್ತಿದೆ ಎಂದು ಕರ್ನಾಟಕ ಸರಕಾರ(ಎನ್.ಎಸ್.ಎಸ್ ಕೋಶ)ದ ನಿಕಟಪೂರ್ವ ರಾಜ್ಯ ಎನ್.ಎಸ್.ಎಸ್ ಅಧಿಕಾರಿ ಡಾ. […]
ಬಾಸ್ಕೆಟ್ಬಾಲ್ : ಕಾರ್ಕಳ ಜ್ಞಾನಸುಧಾದ ಭುವನ್ ರಾಜ್ಯ ತಂಡಮಟ್ಟಕ್ಕೆ
ಕಾರ್ಕಳ( ಸೆ.23) : ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜು ನಿಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಸ್ಕೆಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ಭುವನ್ ಎಸ್ ನಾಯಕ್ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಸಾಧಕ ವಿದ್ಯಾರ್ಥಿಯನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಲಯನ್ಸ್ ಕ್ಲಬ್ ಕೋಸ್ಟಲ್ ವತಿಯಿಂದ ಇಂಜಿನಿಯರ್ಸ್ ಡೇ
ಕುಂದಾಪುರ(ಸೆ,15): ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮದಿನಾಚರಣೆ ಪ್ರಯುಕ್ತ ದೇಶದಾದ್ಯಂತ ಆಚರಿಸುತ್ತಿರುವ ಇಂಜಿನಿಯರ್ಸ್ ಡೇ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನವರು ಸೆಪ್ಟೆಂಬರ್ 15 ರಂದು ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಕುಂದಾಪುರದ ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಶ್ರೀ ಯಶವಂತ ಅವರನ್ನು ಲಯನ್ಸ್ ಕ್ಲಬ್ ನ ಹಿರಿಯ ಸದಸ್ಯರು, ನಿವೃತ್ತ ಬ್ಯಾಂಕ್ ಉದ್ಯೋಗಿ ಹಳ್ನಾಡು ಬಿ.ಜಯರಾಮ ಶೆಟ್ಟಿ ಫಲ ಪುಷ್ಪ ನೀಡಿ ಸನ್ಮಾನಿಸಿ ಗೌರವಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಕೋಸ್ಟಲ್ […]
ಫುಟ್ಬಾಲ್ : ಕಾರ್ಕಳ ಜ್ಞಾನಸುಧಾದ ಮೂವರು ರಾಜ್ಯ ತಂಡಮಟ್ಟಕ್ಕೆ
ಕಾರ್ಕಳ( ಸೆ.15): ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸೈಂಟ್ಮೇರಿಸ್ ಪದವಿ ಪೂರ್ವ ಕಾಲೇಜು ಶಿರ್ವದಲ್ಲಿ ಜರುಗಿದ ಜಿಲ್ಲಾ ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು, ಸಂಸ್ಥೆಯ ಅನ್ಸಿತ್ ಎ ಭಂಡಾರಿ, ಮನ್ವಿಶ್ ರಾವ್ ಮತ್ತು ಅಖಿಲ್ ಸಾಯಿ ಕೋಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಜ್ಞಾನಸುಧಾ : ಮೌಲ್ಯಸುಧಾ-40
ಗಣಿತನಗರ( ಸೆ .15): ಒಬ್ಬ ವ್ಯಕ್ತಿಯ ಯಶಸ್ಸಿಗೆ, ಕನಸನ್ನು ನನಸು ಮಾಡಲು ಪರಿಸ್ಥಿತಿ ಮುಖ್ಯವಲ್ಲ ಮನಸ್ಥಿತಿ ಮುಖ್ಯ. ಸಕಾರಾತ್ಮ ಆಲೋಚನೆಗಳಿಗೆ ಸೋಲಿಲ್ಲ. ಯಾರಿಗೆ ಹೆತ್ತವರ ಆಲೋಚನೆಗಳು ಅರ್ಥವಾಗುತ್ತವೆಯೋ ಅಂತವರು ಎಂದೂ ಹಾದಿ ತಪ್ಪಲು ಸಾದ್ಯವಿಲ್ಲ ಎಂದು ಸ.ಪ.ಪೂ.ಕಾಲೇಜು ಸದಲಗ, ಚಿಕ್ಕೋಡಿ ಇಲ್ಲಿನ ಉಪನ್ಯಾಸಕ ಶ್ರೀ ವೀರೇಶ್ ಗದಿಗೆಪ್ಪಗೌಡ ಪಾಟೀಲ್ ಹೇಳಿದರು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಸಹಯೋಗದಲ್ಲಿ […]
ಥ್ರೋಬಾಲ್ ಪಂದ್ಯಾಟ: ಜ್ಞಾನಸುಧಾ ಬಾಲಕಿಯರ ಹಾಗೂ ಭುವನೇಂದ್ರ ಬಾಲಕರ ತಂಡ ಜಿಲ್ಲಾಮಟ್ಟಕ್ಕೆ
ಉಡುಪಿ ( ಸೆ.13): ಗೆಲುವಿಗಾಗಿ ಆಡಿದವ ಸೋಲುತ್ತಾನೆ. ಉತ್ತಮ ಪ್ರದರ್ಶನ ನೀಡುವೆನೆಂದವ ಗೆಲ್ಲುತ್ತಾನೆ. ಕ್ರೀಡೆಯು ವ್ಯಕ್ತಿಯ ವಿಕಾಸದಲ್ಲಿ ಮಹತ್ವದ ಪಾತ್ರವಹಿಸುತ್ತಿದೆ ಎಂದು ಕಾರ್ಕಳ ಗ್ರಾಮಾಂತರ ಪೋಲಿಸ್ ಠಾಣೆಯ ಎಸ್.ಐ ಶ್ರೀ ಪ್ರಸನ್ನ ಎಂ. ಎಸ್ ಹೇಳಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಹಾಗೂ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ಗಣಿತನಗರದಲ್ಲಿ ಜಂಟಿಯಾಗಿ ಆಯೋಜಿಸಿದ ತಾಲೂಕು ಮಟ್ಟದ ಥ್ರೋಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.ಪಂದ್ಯಾಟವನ್ನು […]
ದಾವಣಗೆರೆಯಲ್ಲಿ ರಾಜ್ಯಮಟ್ಟದ “ಕುಪ್ಮಾ” ಸಮಾವೇಶ
ಕಾರ್ಕಳ (ಸೆ. 9): ಕರ್ನಾಟಕ ಅನುದಾನರಹಿತ ಪದವಿಪೂರ್ವ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘ (ಕುಪ್ಮಾ) ಶಿಕ್ಷಣ ವ್ಯವಸ್ಥೆಯಲ್ಲಿ ಹಲವಾರು ಮಾರ್ಪಾಡುಗಳು ಮತ್ತು ಬದಲಾವಣೆಗಳನ್ನು ಸರಕಾರದೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸುತ್ತಿದೆ. ಈ ಸಂಘಟನೆಯು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರಂಭಗೊoಡು ಇದೀಗ ರಾಜ್ಯವ್ಯಾಪಿ ತನ್ನ ಸದಸ್ಯತ್ವವನ್ನು ವಿಸ್ತರಿಸಿಕೊಂಡಿದೆ. ಅಂತೆಯೇ ಬೇರೆ ಬೇರೆ ಕಾಲೇಜುಗಳ ಸಾರ್ವತ್ರಿಕ ಸಮಸ್ಯೆಗಳು ಎದುರಾದಾಗ ಕುಪ್ಮಾವು ಸರಕಾರದೊಂದಿಗೆ ಆರೋಗ್ಯಕರವಾದ ಚರ್ಚೆ, ಸಲಹೆ, ಸೂಚನೆಗಳೊಂದಿಗೆ ಆ ಸಮಸ್ಯೆಯನ್ನು ಬಗೆಹರಿಸುವಲ್ಲಿ […]
ಜ್ಞಾನಸುಧಾ : ಸಂಸ್ಥಾಪಕರ ಜನ್ಮ ದಿನಾಚರಣೆ-ರಕ್ತದಾನ ಶಿಬಿರ ಹಾಗೂ ಸಾಮಾಜಿಕ ನೆರವಿನ ಕಾರ್ಯಕ್ರಮ
ಕಾರ್ಕಳ (ಆ.19) : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ದಿ.ಗೋಪ ಶೆಟ್ಟಿಯವರ 104ನೇ ಜನ್ಮದಿನದ ಅಂಗವಾಗಿ ಆಗಸ್ಟ್ 21ರಂದು ಸಾಮಾಜಿಕ ನೆರವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಆ ದಿನ ಬೆಳಗ್ಗೆ ಕೆ.ಎಂ.ಸಿ. ಬ್ಲಡ್ ಸೆಂಟರ್ನ ನೆರವಿನೊಂದಿಗೆ ರಕ್ತದಾನ ಶಿಬಿರ ನೆರವೇರಲಿರುದೆ. ಇದೇ ಸಂದರ್ಭ ಖ್ಯಾತ ಸಮಾಜ ಸೇವಕ ಶ್ರೀ ವಿಶು ಶೆಟ್ಟಿ, ಸ್ವಚ್ಛ ಕಾರ್ಕಳ ಬ್ರಿಗೇಡ್ನ ಶ್ರೀ […]
ಕಾರ್ಕಳ ಜ್ಞಾನಸುಧಾ : 79 ನೇ ಸ್ವಾತಂತ್ರ್ಯ ದಿನಾಚರಣೆ
ಗಣಿತನಗರ(ಆ ,15): ಲಕ್ಷಾಂತರ ದೇಶಪ್ರೇಮಿಗಳ ತ್ಯಾಗ, ಬಲಿದಾನಗಳಿಗೆ ನಾವು ಧನ್ಯವಾದ ಹೇಳುವ ಹಾಗೂ ಚಿರಸ್ಮರಣೆಗೈಯ್ಯುವ ಶುಭದಿನ. ಸ್ವಾತಂತ್ರ್ಯ ಎನ್ನುವುದು ಉಚಿತವಾಗಿ ದೊರೆತುದಲ್ಲ. ಅದೊಂದು ಜವಾಬ್ದಾರಿಯ ಸಂಕೇತ ಎಂದು ಪದ್ಮಶ್ರೀ ಡಾ.ಎಂ.ಎo .ಜೋಷಿ ಸೇವಾಪ್ರಶಸ್ತಿ ಪುರಸ್ಕೃತ ನೇತ್ರತಜ್ಞ ಡಾ.ಶ್ರೀನಿವಾಸ್ ದೇಶಪಾಂಡೆ ಹೇಳಿದರು. ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜರುಗಿದ 79ನೇ ಸ್ವಾತಂತ್ರö್ಯದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪಿ.ಆರ್.ಒ ಜ್ಯೋತಿಪದ್ಮನಾಭ್ ಭಂಡಿ. ಪಿ.ಯು. ಉಪಪ್ರಾಂಶುಪಾಲರುಗಳಾದ ಶ್ರೀ ಸಾಹಿತ್ಯ, ಶ್ರೀಮತಿ […]










