ಗುಜ್ಜಾಡಿ(ಮಾ.5): ಇಲ್ಲಿನ ಗುಹೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ರಾಜು ಮೆಂಡನ್ ತ್ರಾಸಿ ಆಯ್ಕೆಯಾಗಿದ್ದಾರೆ. ಹಲವಾರು ಸಂಘ ಸಂಸ್ಥೆ ಗಳಲ್ಲಿ ,ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರ ದಲ್ಲಿ ಅಪಾರ ಸೇವೆ ಸಲ್ಲಿಸಿರುವ ಇವರು ತ್ರಾಸಿ ಗ್ರಾಮ ಪಂಚಾಯತ್ ನ ಸದಸ್ಯರಾಗಿ ರಾಜಕೀಯ ಕ್ಷೇತ್ರದಲ್ಲೂ ಗುರುತಿಸಿಕೊಂಡಿದ್ದಾರೆ. ಮೊಗವೀರ ಮಹಾಜನ ಸೇವಾ ಸಂಘ (ರಿ,) ಮುಂಬೈ ,ಬಗ್ವಾಡಿ ಹೋಬಳಿ ಕುಂದಾಪುರ ಶಾಖಾ ಸದಸ್ಯರಾಗಿ, ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ […]
Tag: mogaveera society
ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ: ಅಧ್ಯಕ್ಷರಾಗಿ ರಾಜೀವ ಎನ್.ಶ್ರೀಯಾನ್ ಆಯ್ಕೆ
ಹೆಮ್ಮಾಡಿ(ಫೆ. 05): ಇಲ್ಲಿನ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಶ್ರೀ ರಾಜೀವ ಎನ್.ಶ್ರೀಯಾನ್ ಗುಜ್ಜಾಡಿ ಹಾಗೂ ಉಪಾಧ್ಯಕ್ಷರಾಗಿ ಸುಮತಿ ಬಿ.ಮೊಗವೀರ ಆಯ್ಕೆಯಾಗಿದ್ದಾರೆ. ಫೆ.5ರಂದು ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ನೂತನ ನಿರ್ದೇಶಕರಾದ ಲೋಹಿತಾಶ್ವ ಆರ್. ಕುಂದರ್ ಬಾಳಿಕೆರೆ, ರವೀಂದ್ರ ಜಿ. ಮೆಂಡನ್ ಗುಡ್ಡಮ್ಮಾಡಿ, ಶ್ಯಾಮಲ ಜಿ.ಚಂದನ್, ರಾಮ ಮೊಗವೀರ ಕೊಡ್ಲಾಡಿ, ರಾಮ ಮೊಗವೀರ ಬೈಂದೂರು, ವನಿತಾ ಎಸ್. ಮೊಗವೀರ […]
ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ, ಹೆಮ್ಮಾಡಿ : ನಿರ್ದೇಶಕರಾಗಿ ಲೋಹಿತಾಶ್ವ ಆರ್. ಕುಂದರ್ ಆಯ್ಕೆ
ಹೆಮ್ಮಾಡಿ (ಜ. 27): ಇಲ್ಲಿನ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಸಾಮಾನ್ಯ ಸ್ಥಾನಕ್ಕೆ ಜ.26ರಂದು ನಡೆದ ಚುನಾವಣೆಯಲ್ಲಿ ಲೋಹಿತಾಶ್ವ ಆರ್ ಕುಂದರ್ ಬಾಳಿಕೆರೆ ಗೆಲುವು ಸಾಧಿಸಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಸಮಾಜ ಸೇವೆ, ಸಹಕಾರ ಹಾಗೂ ಧಾರ್ಮಿಕ ಕ್ಷೇತ್ರದಲ್ಲೂ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಗೌರವಾಧ್ಯಕ್ಷರಾಗಿದ್ದಾರೆ. ಹಾಗೆಯೇ ಮೊಗವೀರ […]
ನಾಡ ಶ್ರೀ ಹಾಡಿಗರಡಿ ದೈವಸ್ಥಾನ: ಜಾತ್ರಾ ಮಹೋತ್ಸವ ಸಂಪನ್ನ
ಕುಂದಾಪುರ(ಜ. 18): ಇಲ್ಲಿನ ನಾಡದ ಶ್ರೀ ಹಾಡಿಗರಡಿ ದೈವಸ್ಥಾನದಲ್ಲಿ ವಾರ್ಷಿಕ ಹಾಲು ಹಬ್ಬ- ಗೆಂಡಸೇವೆ, ಮಹಾ ಅನ್ನಸಂತರ್ಪಣೆ ಜನವರಿ 14 ಮತ್ತು 15ರಂದು ಬಹಳ ವಿಜೃಂಭಣೆಯಿಂದ ಜರುಗಿತು. ಜ.14 ರ ಬೆಳಿಗ್ಗೆ ಮಂಗಳಾರತಿ, ಮಹಾಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ಕೊಡಗುಂಜಿ ಕಳುವಿನ ಬಾಗಿಲುವಿನಲ್ಲಿ ಮೂಲಸ್ಥಾನ ಸ್ವಾಮಿ ಪೂಜೆ. ನಾಗ ಸನ್ನಿಧಿಯಲ್ಲಿ ಪೂಜೆ, ನಾಗದರ್ಶನ, ಮಹಾಮಂಗಳಾರತಿ, ದೈವದರ್ಶನ, ಗೆಂಡಸೇವೆ, ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ ನಡೆಯಿತು. ಸಂಜೆ ಸಾಂಸ್ಕೃತಿಕ […]
ರಾಷ್ಟ್ರಮಟ್ಟದ ಅಬಾಕಸ್ ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆಯಲ್ಲಿ ಅರಾಟೆ ಲಕ್ಶ್ ರಾಜೇಶ್ ಪ್ರಥಮ
ಕುಂದಾಪುರ (ಜ. 17): ಚಿತ್ರದುರ್ಗದಲ್ಲಿ ಇತ್ತೀಚೆಗೆ ಜರುಗಿದ 9ನೇ “ರಾಜ್ಯಮಟ್ಟ’ದ ಐಡಿಯಲ್ ಪ್ಲೇ ಅಬಾಕಸ್ ಮೆಂಟಲ್ ಅರಿಥ್ಮೆಟಿಕ್ ಸ್ಪರ್ಧೆಯಲ್ಲಿ ಅರಾಟೆ ಲಕ್ಶ್ ರಾಜೇಶ್ ಪ್ರಥಮ ಸ್ಥಾನ” ಪಡೆದು ಬೆಂಗಳೂರಿನಲ್ಲಿ ಜನವರಿ 12 ರಂದು ನಡೆದ 20ನೇ “ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿಯೂ ಕೂಡ “ಪ್ರಥಮ ಸ್ಥಾನ” ಪಡೆದಿದ್ದಾನೆ. ಕುಂದಾಪುರದ ಸೆಂಟರ್ ಮುಖ್ಯಸ್ಥರಾದ ಶ್ರೀ ಪ್ರಸನ್ನ ಕೆ. ಬಿ. ಮತ್ತು ಶ್ರೀಮತಿ ಮಹಾಲಕ್ಷ್ಮಿ ಇವರುಗಳಿಂದ ತರಬೇತಿ ಪಡೆಯುತ್ತಿರುವ ಲಕ್ಶ್ ರಾಜೇಶ್ ಪ್ರಸ್ತುತ ಕುಂದಾಪುರದ ಹೆಸರಾಂತ […]
ಜ.14 ಮತ್ತು 15 ರಂದು ಶ್ರೀ ಹಾಡಿಗರಡಿ ದೈವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ
ಕುಂದಾಪುರ (ಜ. 03): ತಾಲೂಕಿನ ನಾಡದ ಶ್ರೀ ಹಾಡಿಗರಡಿ ದೈವಸ್ಥಾನದ ವಾರ್ಷಿಕ ವಾರ್ಷಿಕ ಜಾತ್ರಾ ಮಹೋತ್ಸವವು 2025 ರ ಜನವರಿ 14 ಮತ್ತು 15ರಂದು ನಡೆಯಲಿದೆ. ಜ.14 ಮಂಗಳವಾರ ಬೆಳಿಗ್ಗೆ 12ಕ್ಕೆ ಮಂಗಳಾರತಿ, ಮಹಾಪೂಜೆ, ಮಧ್ಯಾಹ್ನ 12.30ಕ್ಕೆ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ , 7.30ಕ್ಕೆ ದೈವದರ್ಶನ, ಗೆಂಡಸೇವೆ, 8 ಗಂಟೆಗೆ ಪ್ರಸಾದ ವಿತರಣೆ, ಮಹಾಅನ್ನಸಂತರ್ಪಣೆ, 9.30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಪ್ರತಿಭಾವಂತ […]
ಹೆಮ್ಮಾಡಿ: ವೆಲಾಸಿಟಿ ಅಕಾಡೆಮಿ ಇಂಡಿಯಾ ವತಿಯಿಂದ ಶ್ರೀ ಉದಯ್ ಕುಮಾರ್ ಹಟ್ಟಿಯಂಗಡಿಯವರಿಗೆ ಸನ್ಮಾನ
ಹೆಮ್ಮಾಡಿ( ಡಿ.19): ಹೆಮ್ಮಾಡಿ ಮೀನುಗಾರರ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸಹಕಾರ ರತ್ನ ರಾಜ್ಯ ಪ್ರಶಸ್ತಿ ಪುರಸ್ಕ್ರತ ಶ್ರೀ ಉದಯ್ ಕುಮಾರ್ ಹಟ್ಟಿಯಂಗಡಿಯವರನ್ನು ವೆಲಾಸಿಟಿ ಅಕಾಡೆಮಿ ಇಂಡಿಯಾ ಕರಾಟೆ ತರಭೇತಿ ಸಂಸ್ಥೆಯ ಮುಖ್ಯಸ್ಥರಾದ ಅಕ್ಷಯ ಹೆಮ್ಮಾಡಿಯವರು ತಮ್ಮ ಸಂಸ್ಥೆಯ ವತಿಯಿಂದ ಡಿಸೆಂಬರ್ 15 ರಂದು ಹೆಮ್ಮಾಡಿಯ ಮತ್ಸ್ಯ ಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯೋಗೀಶ್ ಗುಡ್ರಿ […]
ಹೆಮ್ಮಾಡಿ: ವೆಲಾಸಿಟಿ ಅಕಾಡೆಮಿ ಇಂಡಿಯಾ ಬ್ಲಾಕ್ ಬೆಲ್ಟ್ ಪ್ರಧಾನ ಹಾಗೂ ಸಾಧಕರಿಗೆ ಸನ್ಮಾನ
ಹೆಮ್ಮಾಡಿ(ಡಿ.19): ವೆಲಾಸಿಟಿ ಅಕಾಡೆಮಿ ಇಂಡಿಯಾ ಇದರ ಮುಖ್ಯಸ್ಥರಾದ ಅಕ್ಷಯ್ ಹೆಮ್ಮಾಡಿ ಇವರಲ್ಲಿ ತರಬೇತಿ ಪಡೆದು ಕರಾಟೆ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಗೈದ ವಿದ್ಯಾರ್ಥಿಗಳಿಗೆ ಬ್ಲಾಕ್ ಬೆಲ್ಟ್ ಪ್ರಧಾನ ಕಾರ್ಯಕ್ರಮವು ಡಿಸೆಂಬರ್ 15 ರಂದು ಹೆಮ್ಮಾಡಿಯ ಮತ್ಸ್ಯ ಜ್ಯೋತಿ ಸಭಾಂಗಣದಲ್ಲಿ ನೆರವೇರಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯೋಗೀಶ್ ಗುಡ್ರಿ ವಹಿಸಿಕೊಂಡರು. ಕಾರ್ಯಕ್ರಮದ ಪ್ರಾರಂಭದಲ್ಲಿ ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡು ಹಲವಾರು ಪ್ರಶಸ್ತಿ ಪುರಸ್ಕಾರವನ್ನು ಮುಡಿಗೇರಿಸಿಕೊಂಡಂತಹ ಕೊಳಲುವಾದಕರಾದ ಮಾಸ್ಟರ್ ಶ್ಯಾಮ್ ಇವರಿಂದ ಕೊಳಲುವಾದನ ನಡೆಯಿತು. […]
ಹೆಮ್ಮಾಡಿಯಲ್ಲಿ ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್ ನವೀಕರಣ ಹಾಗೂ ನೋಂದಾವಣೆ ಅಭಿಯಾನ
ಹೆಮ್ಮಾಡಿ (ಡಿ,016): ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ [ರಿ.] ಅಂಬಲಪಾಡಿ, ಉಡುಪಿ ಮತ್ತು ಮೊಗವೀರ ಯುವ ಸಂಘಟನೆ [ರಿ.] ಉಡುಪಿ ಜಿಲ್ಲೆ ಸಂಯುಕ್ತ ಆಶ್ರಯದಲ್ಲಿ ಮಾಹೆ- ಮಣಿಪಾಲ ಇವರ ಸಹಯೋಗದೊಂದಿಗೆ ಅತ್ಯುತ್ತಮ ಸೌಲಭ್ಯಗಳನ್ನು ಹೊಂದಿರುವ ಆಕರ್ಷಕ ಯೋಜನೆಯಾದ ಜಿ. ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಯೋಜನೆಯ ನವೀಕರಣ ಹಾಗೂ ನೋಂದಾವಣೆ ಅಭಿಯಾನ ಡಿಸೆಂಬರ್ 17 ರಿಂದ ಜನವರಿ 10 ರ ತನಕ ಹೆಮ್ಮಾಡಿಯ ಬಸ್ ನಿಲ್ದಾಣ ದ ಸಮೀಪದ ಮೀನುಗಾರರ […]
ಡಿ. 07 ರಂದು ಕುಂದಾಪುರದಲ್ಲಿ ಮೊಗವೀರರ ಸಾಂಸ್ಕೃತಿಕ ಸಿಂಚನ -“ಹೆಜ್ಜೆ ಗೆಜ್ಜೆ ” ಸಾಂಸ್ಕೃತಿಕ ಸ್ವರ್ಧೆ
ಕುಂದಾಪುರ (ಡಿ. 03): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ.) ಅಂಬಲಪಾಡಿ, ಉಡುಪಿ ಹಾಗೂ ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯ ಅಂತರ್ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ “ಹೆಜ್ಜೆ -ಗೆಜ್ಜೆ” -ಮೊಗವೀರ ಸಾಂಸ್ಕೃತಿಕ ಸಿಂಚನವು ಡಿಸೆಂಬರ್ 07 ರಂದು ಕುಂದಾಪುರದ ಮೊಗವೀರ ಭವನದಲ್ಲಿ ನಡೆಯಲಿದೆ. ನಾಡೋಜ ಡಾ. ಜಿ ಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮೊಗವೀರ ಯುವ […]










