ಗಂಗೊಳ್ಳಿ( ಆ ,08) : ಕರಕುಶಲ ಕಲೆಗಳು ಮಾನಸಿಕ ಒತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ ಆರ್ಥಿಕವಾಗಿಯು ನಮ್ಮನ್ನು ಸಬಲರನ್ನಾಗಿಸಲು ಸಹಾಯ ಮಾಡುತ್ತದೆ. ಎಂದು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಭಿಪ್ರಾಯಪಟ್ಟರು. ಅವರು ಇಲ್ಲಿನ ಎಸ್.ವಿ ಕಾಮರ್ಸ್ ಕ್ಲಬ್ ಆಶ್ರಯದಲ್ಲಿ ನಡೆದ ಕ್ರೋಷೆ ತರಬೇತಿ ಶಿಬಿರದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯ ಶಿಕ್ಷಕಿ ಜುನಿತಾ ಮಚಾದೋ ಮಾತನಾಡಿ ಈ […]
Tag: narendra gangolli
ಗಂಗೊಳ್ಳಿ: ಬಿಲ್ಲವರ ಹಿತ ರಕ್ಷಣಾ ವೇದಿಕೆಯ ಉಚಿತ ಪುಸ್ತಕ ವಿತರಣಾ ಸಮಾರಂಭ
ಗಂಗೊಳ್ಳಿ(ಜು ,15) : ಉತ್ತಮ ಕೆಲಸಗಳನ್ನು ಪ್ರೋತ್ಸಾಹಿಸುವ ಮನೋಭಾವ ನಮ್ಮಲ್ಲಿ ಹೆಚ್ಚಾಗಬೇಕು. ಆ ಮೂಲಕ ಒಂದು ಸಮಾಜದ ಅಭಿವೃದ್ಧಿಯಲ್ಲಿ ನಮ್ಮನ್ನು ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಗಂಗೊಳ್ಳಿಯ ಬಿಲ್ಲವರ ಹಿತ ರಕ್ಷಣಾ ವೇದಿಕೆಯ ಅಧ್ಯಕ್ಷ ಜಿ ಗೋಪಾಲ ಪೂಜಾರಿ ಹೇಳಿದರು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಬಿಲ್ಲವರ ಹಿತರಕ್ಷಣಾ ವೇದಿಕೆಯ ಆರನೇ ವರ್ಷದ ಬಿಲ್ಲವ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಶ್ರೀ […]
ಚಿತ್ರಕಲಾ ಸ್ಪರ್ಧೆ : ಸಂಜಿತ್ ಎಂ ದೇವಾಡಿಗ ಪ್ರಥಮ
ಬೈಂದೂರು( ಜು ,12): ಸುರಭಿ (ರಿ.) ಬೈಂದೂರು ಮತ್ತು ಚಿತ್ತಾರ ಹಳ್ಳಿಹೊಳೆ ಇವರ ಸಂಯುಕ್ತ ಆಶಯದಲ್ಲಿ ಬೈಂದೂರು ಜಾತ್ರೆಯ ಪ್ರಯುಕ್ತ ಇತ್ತೀಚಿಗೆ ನಡೆದ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸಂಜಿತ್ ಎಂ ದೇವಾಡಿಗ ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ. ಈತ ಗಂಗೊಳ್ಳಿಯ ಚಿತ್ರ ಕಲಾವಿದ ಮಾಧವ ದೇವಾಡಿಗ ಹಾಗೂ ಉಪನ್ಯಾಸಕಿ ಸಾವಿತ್ರಿ ಎಸ್ ದಂಪತಿ ಯವರ ಪುತ್ರ .
ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಅಭಿಮುಖೀಕರಣ ಕಾರ್ಯಕ್ರಮ
ಗಂಗೊಳ್ಳಿ(ಮೇ 28) : ಮಕ್ಕಳ ಸಾಧನೆಯಿಂದ ಹೆತ್ತವರಿಗೆ ಗೌರವ ಸಿಗುವಂತಾದರೆ ಅದು ನಿಜಕ್ಕೂ ಮಕ್ಕಳು ಹೆತ್ತವರಿಗೆ ನೀಡುವಂತಹ ಅತಿ ದೊಡ್ಡ ಉಡುಗೊರೆಯಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯು ತನ್ನ ಜೀವನದಲ್ಲಿ ಪರಿಶ್ರಮ ಮತ್ತು ಶ್ರದ್ಧೆಯಿಂದ ಸಾಧನೆಗಳನ್ನು ಮಾಡಬೇಕು ಮತ್ತು ಗುರಿಯನ್ನು ತಲುಪಬೇಕು ಎಂದು ಗಂಗೊಳ್ಳಿಯ ಉದ್ಯಮಿ ವಾಮನ ಎಸ್ .ಪೈ ಹೇಳಿದರು ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿಯ ಆರಂಭೋತ್ಸವ ಮತ್ತು ಅಭಿಮುಖೀಕರಣ […]
ಗಂಗೊಳ್ಳಿ: ‘ಅವಳ ನಿಟ್ಟುಸಿರು’ ಕೃತಿ ಬಿಡುಗಡೆ
ಗಂಗೊಳ್ಳಿ( ಫೆ,2) : ಓದು ವ್ಯಸನವಾಗಬೇಕು ,ಪಠ್ಯೇತರ ಪುಸ್ತಕಗಳ ಓದು ನಮ್ಮ ಜ್ಞಾನದ ಪರಿಧಿಯನ್ನು ಹೆಚ್ಚಿಸುವುದರ ಜೊತೆಗೆ ಆತ್ಮವಿಶ್ವಾಸವನ್ನು ಕೂಡ ನೀಡುತ್ತದೆ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರಾದ ನಾರಾಯಣ ಈ . ನಾಯ್ಕ್ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರೋಟರಿ ಸಭಾಂಗಣದಲ್ಲಿ ಎಸ್. ವಿ ಕಾಮರ್ಸ್ ಕ್ಲಬ್ ಮತ್ತು ಗಂಗೊಳ್ಳಿಯ ಸಂಜೀವ ಪಾರ್ವತಿ ಪ್ರಕಾಶನದ ಜಂಟಿ ಆಶ್ರಯದಲ್ಲಿ […]
ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ವಕೀಲಿಕೆ ಮತ್ತು ಜನಸಾಮಾನ್ಯರು ಕಾರ್ಯಕ್ರಮ
ಗಂಗೊಳ್ಳಿ( ಜ ,15) : ಜನಸಾಮಾನ್ಯರ ಪ್ರತೀ ಸಮಸ್ಯೆಯೂ ವಕೀಲರನ್ನು ಸ್ಪಂದಿಸುವಂತೆ ಮಾಡುತ್ತದೆ. ದೈನಂದಿನ ಬದುಕಿನಲ್ಲಿ ವಕೀಲರ ಮೂಲಕ ತಮ್ಮ ಕ್ಲಿಷ್ಟ್ಟ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳುವುದರೊಂದಿಗೆ ಜನ ಸಾಮಾನ್ಯ ಮತ್ತು ವಕೀಲರ ಸಂಬಂಧ ಗಟ್ಟಿಯಾಗಿದೆ ಎಂದು ನ್ಯಾಯವಾದಿ ಮತ್ತು ಪತ್ರಕರ್ತರಾಗಿರುವ ರವಿಕುಮಾರ್ ಗಂಗೊಳ್ಳಿ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇಲ್ಲಿನ ಎಸ್.ವಿ. ಕಾಮರ್ಸ್ ಕ್ಲಬ್ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ […]
ಕೊಂಕಣಿ ಕಂಠಪಾಠ ಸ್ಪರ್ಧೆ : ಸನ್ನಿಧಿ ಖಾರ್ವಿ ದ್ವಿತೀಯ ಸ್ಥಾನ
ಉಡುಪಿ ( ಜ ,03): ಹೆಬ್ರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಪ್ರಾಥಮಿಕ ವಿಭಾಗದ ಕೊಂಕಣಿ ಕಂಠಪಾಠ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ ಸನ್ನಿಧಿ ಖಾರ್ವಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈಕೆ ಅರುಣ್ ಖಾರ್ವಿ ಹಾಗೂ ಭವಾನಿ ಖಾರ್ವಿ ದಂಪತಿಯ ಪುತ್ರಿ.
ಗಂಗೊಳ್ಳಿಯಲ್ಲಿ ಸಂಪನ್ನಗೊಂಡ ಶ್ರೀ ನಾರಾಯಣ ಗುರು ಜನ ಸೇವಾ ಬಳಗದ “ಮಾತೃ ದೇವೋಭವ” ಕಾರ್ಯಕ್ರಮ
ಗಂಗೊಳ್ಳಿ(ನ,27) : ದಿನವೂ ಹತ್ತಾರು ಮಕ್ಕಳನ್ನು ತಮ್ಮ ಸ್ವಂತ ಮನೆಯ ಮಕ್ಕಳಂತೆ ಕಾಳಜಿಯಿಂದ ಆರೈಕೆ ಮಾಡುವ, ಅಕ್ಷರದ ಅರಿವು ಮೂಡಿಸುವ, ಸಂಸ್ಕೃತಿಯನ್ನು ಕಲಿಸುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಕಾರ್ಯ ಅತ್ಯಂತ ಶ್ರೇಷ್ಠವಾದದ್ದು ಮತ್ತು ಅಭಿನಂದನನೀಯವಾದದ್ದು ಎಂದು ಗಂಗೊಳ್ಳಿಯ ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಮಡಿವಾಳ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಶ್ರೀ ನಾರಾಯಣ ಗುರು ಜನಸೇವಾ ಬಳಗ (ರಿ.)ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ರೋಟರಿ ಸಭಾಂಗಣದಲ್ಲಿ ಕಳೆದ […]
ಗಂಗೊಳ್ಳಿಯಲ್ಲಿ ನ .16 ರಂದು ಮಾತೃ ದೇವೋ ಭವ ಕಾರ್ಯಕ್ರಮ
ಗಂಗೊಳ್ಳಿ( ನ .12): ಇಲ್ಲಿನ ಶ್ರೀ ನಾರಾಯಣ ಗುರು ಜನಸೇವಾ ಬಳಗ(ರಿ.), ವತಿಯಿಂದ ಗಂಗೊಳ್ಳಿ ವಲಯದ ಅಂಗನವಾಡಿ ಮತ್ತು ಶಿಶುಮಂದಿರದ 18 ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಗೌರವಿಸುವ ಅಭಿನಂದನಾ ಸಮಾರಂಭ ಮಾತೃ ದೇವೋಭವ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ್ ನಾಯಕ್ ರೋಟರಿ ಸಭಾಂಗಣದಲ್ಲಿ ನವೆಂಬರ್ 16ರ ಭಾನುವಾರ ಸಂಜೆ 4:00 ಗಂಟೆಗೆ ನಡೆಯಲಿದೆ. ಗಂಗೊಳ್ಳಿಯ ಉದ್ಯಮಿ ವಿಠಲ ಬಿ ಶೆಣೈ ಸಮಾರಂಭವನ್ನು ಉದ್ಘಾಟಿಸಲಿದ್ದು, ಗಂಗೊಳ್ಳಿಯ ಪರ್ಸಿನ್ ಮೀನುಗಾರರ ಸ್ವಸಹಾಯ ಸಂಘದ ಅಧ್ಯಕ್ಷರಾದ […]
ಪರಿಸರ ಚಿತ್ರಕಲೆ ಸಂಜಿತ್ ಎಂ. ದೇವಾಡಿಗ ದ್ವಿತೀಯ ಸ್ಥಾನ
ಗಂಗೊಳ್ಳಿ ( ನ ,01): ವಿಜಯ ಕರ್ನಾಟಕ ದಿನಪತ್ರಿಕೆಯು ವಿಶ್ವ ಪರಿಸರ ದಿನದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಚಿತ್ರಕಲೆ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೆಯ ತರಗತಿ ವಿದ್ಯಾರ್ಥಿ ಸಂಜಿತ್ ಎಂ ದೇವಾಡಿಗ ದ್ವಿತೀಯ ಸ್ಥಾನ ಗಳಿಸಿರುತ್ತಾನೆ. ಇವನು ಗಂಗೊಳ್ಳಿಯ ಚಿತ್ರಕಲಾ ಶಿಕ್ಷಕ ಮಾಧವ ಎಮ್ ದೇವಾಡಿಗ ಮತ್ತು ಉಪನ್ಯಾಸಕಿ ಸಾವಿತ್ರಿ ಎಸ್ ದಂಪತಿ ಪುತ್ರ. ವಿದ್ಯಾರ್ಥಿಯ ಸಾಧನೆಗೆ […]










