ಗಂಗೊಳ್ಳಿ(ಸೆ,28): ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿಪೂರ್ವ ಕಾಲೇಜು ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲಕರ ನೆಟ್ ಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಬಾಲಕರ ತಂಡದಲ್ಲಿ ವೀರೇಶ್, ಚರಣ್, ನಾಗರಾಜ್, ಆದಿತ್ಯ, ಶಮಿತ್, ಯುವರಾಜ್, ರಿತೇಶ್, ನವೀನ್ ಶರಣ್ ಮತ್ತು […]
Tag: narendra gangolli
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಹಿಂದಿ ದಿನಾಚರಣೆ
ಗಂಗೊಳ್ಳಿ( ಸೆ.16): ಭಾರತದಲ್ಲಿ ಅತಿ ಹೆಚ್ಚು ಜನರು ಮಾತನಾಡುವ ಭಾಷೆ ಹಿಂದಿ ಯಾಗಿದೆ. ಅದನ್ನು ನಮ್ಮ ರಾಷ್ಟ್ರಭಾಷೆ ಎನ್ನಲು ನಾವು ಹೆಮ್ಮೆ ಪಡಬೇಕು. ಹೊಸ ಭಾಷೆಗಳನ್ನು ಕಲಿಯುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಹಿರಿಯಡಕ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿಂದಿ ಭಾಷಾ ಉಪನ್ಯಾಸಕರಾದ ಅನಂತರಾಮ ನಾಯಕ್ ಅಭಿಪ್ರಾಯ ಪಟ್ಟರು. ಅವರು ಕಳೆದ ಗುರುವಾರ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ […]
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಸಂವಿಧಾನ ಪೀಠಿಕೆ ಓದು
ಗಂಗೊಳ್ಳಿ(ಸೆ.15): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು, ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆ ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿನಿ ನಿಶಾ ಬಿ ಪೂಜಾರಿ ಪೀಠಿಕೆಯನ್ನು ವಾಚಿಸಿದರು. ಪ್ರಾಂಶುಪಾಲರು ಮುಖ್ಯೋಪಾ ದ್ಯಾಯರು ಉಪನ್ಯಾಸಕರು ಶಿಕ್ಷಕರು ಮತ್ತು ವಿದ್ಯಾರ್ಥಿ ವೃಂದ ಮತ್ತು ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸುನಿಧಿ ಜಿಲ್ಲಾಮಟ್ಟಕ್ಕೆ ಆಯ್ಕೆ
ಗಂಗೊಳ್ಳಿ(ಸೆ,14): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುನಿಧಿ ಇವರು ಕುಂದಾಪುರ ತಾಲೂಕು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರ ಕಬಡ್ಡಿ ತಂಡವನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಲು ಆಯ್ಕೆಯಾಗಿರುತ್ತಾರೆ. ಈಕೆ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ಉಮೇಶ್ ಕರಣಿಕ್ ಮತ್ತು ಸುಮನ ದಂಪತಿಯ ಪುತ್ರಿ .
ಶ್ರೇಯಾ ಮೇಸ್ತ ಜಿಲ್ಲಾಮಟ್ಟಕ್ಕೆ ಆಯ್ಕೆ
ಗಂಗೊಳ್ಳಿ( ಸೆ,14): ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಶ್ರೇಯಾ ಮೇಸ್ತ ಇವರು ಕುಂದಾಪುರ ತಾಲೂಕು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರ ತ್ರೋಬಾಲ್ ತಂಡವನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಲು ಆಯ್ಕೆಯಾಗಿರುತ್ತಾರೆ. ಈಕೆ ನಾಗರಾಜ ಮೇಸ್ತ ಮತ್ತು ನಯನ ದಂಪತಿಯ ಪುತ್ರಿ.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ನರೇಂದ್ರ ಎಸ್ ಗಂಗೊಳ್ಳಿಗೆ ಸನ್ಮಾನ
ಕುಂದಾಪುರ(ಸೆ.14): ತಮ್ಮ ಒಳಗಡೆ ಎಷ್ಟೇ ನೋವುಗಳಿದ್ದರೂ ಅದನ್ನು ತೋರಿಸಿಕೊಳ್ಳದೆ ಸದಾ ಜನರಲ್ಲಿ ನಗು ತುಂಬುವ ಛಾಯಾಚಿತ್ರಗ್ರಾಹಕರು ನಿಜವಾದ ಬದುಕಿನ ಸಾರ್ಥಕತೆಯ ಸಂದೇಶವನ್ನು ಜಗತ್ತಿಗೆ ತಿಳಿಸುವಂಥವರು. ಈ ಸ್ಪರ್ಧಾತ್ಮಕ ಯುಗದಲ್ಲಿಯೂ ಪರಿಣತಿ ಮತ್ತು ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಂಡು ಗ್ರಾಹಕರ ಮನ ಗೆಲ್ಲುವ ಮೂಲಕ ಅಡೆತಡೆಗಳನ್ನು ಮೀರಿ ಬೆಳೆದು ನಿಲ್ಲುವ ಸಾಮರ್ಥ್ಯವನ್ನು ತೋರಿರುವ ಛಾಯಾಗ್ರಾಹಕರ ನಡೆ ಅಭಿನಂದನೀಯ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು ಯುವ ಬರಹಗಾರ […]
ತ್ರೋಬಾಲ್ ಪಂದ್ಯಾಟದಲ್ಲಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ
ಕುಂದಾಪುರ(ಸೆ.10):ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ) ಮತ್ತು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನವನ್ನು ಗಳಿಸಿದೆ. ಸರಸ್ವತಿ ವಿದ್ಯಾಲಯದ ನವೀನ್, ಧರ್ಮೇಶ್,ಆರ್ಯನ್ ಚರಣ್, ಶರತ್, ಯತೀಶ್, ಸುಜನ್ ವೀರೇಶ್, ಶಮಿತ್ ,ನಾಗರಾಜ್, ಆದಿತ್ಯ ಮತ್ತು ಯುವರಾಜ್ ತಂಡದಲ್ಲಿ ಭಾಗವಹಿಸಿದ್ದರು. ಈ ತಂಡದ […]
ಉಡುಪಿ ಜಿಲ್ಲಾ ಪದವಿಪೂರ್ವ ವಾಣಿಜ್ಯ ಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಎಂ.ರಾಘವೇಂದ್ರ ಭಟ್ ಆಯ್ಕೆ
ಗಂಗೊಳ್ಳಿ(ಸೆ,03): ಉಡುಪಿ ಜಿಲ್ಲಾ ಪದವಿಪೂರ್ವ ವಾಣಿಜ್ಯ ಶಾಸ್ತ್ರ ಉಪನ್ಯಾಸಕರ ಸಂಘದ 2023-24ನೇ ಸಾಲಿನ ಅಧ್ಯಕ್ಷರಾಗಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ .ಎಂ.ರಾಘವೇಂದ್ರ ಭಟ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಹರೀಶ್ ಕುಮಾರ್ ಎಸ್.ಎಮ್.ಎಸ್.ಪ.ಪೂ.ಕಾಲೇಜು. ಬ್ರಹ್ಮಾವರ ಜೊತೆ ಕಾರ್ಯದರ್ಶಿಗಳಾಗಿ ಬಲರಾಮ ವೈದ್ಯ ಸರ್ಕಾರಿ ಪ.ಪೂ.ಕಾಲೇಜು ಹೆಬ್ರಿ ಮತ್ತು ಹೇಮಲತಾ. ಸರ್ಕಾರಿ ಪ.ಪೂ.ಕಾಲೇಜು ಮಲ್ಪೆ ಹಾಗೂ ಕೋಶಾಧಿಕಾರಿಯಾಗಿ ಪ್ರಮೀಳಾ.ಡಿ.ಅಂಚನ್ ಸ. ಪ. ಪೂ. ಕಾಲೇಜು ತೆಂಕನಿಡಿಯೂರು ಇವರು ಆಯ್ಕೆಯಾದರು.
ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ : ನಾರಾಯಣ ಗುರುಗಳ ಜನ್ಮ ದಿನಾಚರಣೆ
ಗಂಗೊಳ್ಳಿ (ಸೆ,03): ಗಂಗೊಳ್ಳಿಯ ಬಿಲ್ಲವರ ಹಿತ ರಕ್ಷಣಾ ವೇದಿಕೆಯ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆಯನ್ನು ಸಂಘದ ಕಚೇರಿಯಲ್ಲಿ ಆಚರಿಸಲಾಯಿತು. ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಜಿ ಗೋಪಾಲ ಪೂಜಾರಿ ಮಾತನಾಡಿ ನಾರಾಯಣ ಗುರುಗಳು ಪ್ರತಿಪಾದಿಸಿದ ಸಿದ್ದಾಂತ ಮತ್ತು ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಟ್ಟು ಸಮಾಜದ ಹಿತರಕ್ಷಣೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು. ಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನವನ್ನು […]
ಸರಸ್ವತಿ ವಿದ್ಯಾಲಯ ಗಂಗೊಳ್ಳಿ:ಉಪನ್ಯಾಸಕ ಕೃಷ್ಣ ಗುಜ್ಜಾಡಿಯವರಿಗೆ ಬೀಳ್ಕೊಡುಗೆ
ಗಂಗೊಳ್ಳಿ(ಸೆ,03): ವಿದ್ಯಾರ್ಥಿಗಳ ಬೆಳವಣಿಗೆಯನ್ನು ಪ್ರೋತ್ಸಾಹಿಸುವುದರ ಜೊತೆಗೆ ತಾನು ಕೂಡ ಬೆಳೆಯುವುದು ಓರ್ವ ನಿಜವಾದ ಶಿಕ್ಷಕನ ಸಾಮರ್ಥ್ಯವಾಗಿರುತ್ತದೆ. ಬದುಕಿನಲ್ಲಿ ಕಲಿಕೆ ನಿರಂತರವಾಗಿರಬೇಕು ಎಂದು ಜಿ. ಎಸ್ ವಿ. ಎಸ್ ಅಸೋಸಿಯೇಷನ್ ಕಾರ್ಯದರ್ಶಿ ಎಚ್ ಗಣೇಶ್ ಕಾಮತ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಕಳೆದ10 ವರ್ಷಗಳಿಗೂ ಅಧಿಕ ಕಾಲ ಸೇವೆ ಸಲ್ಲಿಸಿ ಇದೀಗ ಸರಕಾರಿ ಶಾಲಾ ಶಿಕ್ಷಕರಾಗಿ ನೇಮಕಗೊಂಡು ಬೇರೆಡೆಗೆ ತೆರಳುತ್ತಿರುವ ಭೌತಶಾಸ್ತ್ರ ಉಪನ್ಯಾಸಕ ಕೃಷ್ಣ ಗುಜ್ಜಾಡಿ […]










