ಗಂಗೊಳ್ಳಿ (ಜೂ,22): ಯೋಗವನ್ನು ನಾವು ಕಲಿಯುವುದರ ಜೊತೆಜೊತೆಗೆ ಮುಂದಿನ ಪೀಳಿಗೆಯವರಿಗೆ ಕೊಂಡೊಯ್ಯುವ ಜವಾಬ್ದಾರಿ ನಮ್ಮ ಮೇಲಿದೆ. ಹಾಗಾಗಿ ಈ ಬಗ್ಗೆ ಹೆಚ್ಚು ಹೆಚ್ಚು ತಿಳಿದುಕೊಳ್ಳುವ ಪ್ರಯತ್ನವನ್ನು ಮಾಡಬೇಕು ಎಂದು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀನಿವಾಸ ಖಾರ್ವಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಮತ್ತು ಇಲ್ಲಿನ ರಾಷ್ಟ್ರೀಯ ಸ್ವಯಂ ಸೇವಾ ಯೋಜನೆಯ ಆಶ್ರಯದಲ್ಲಿ ನಡೆದ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ನೆಲೆಯಲ್ಲಿ ಮಾತನಾಡಿದರು. ಕಾರ್ಯಕ್ರಮದ […]
Tag: narendra gangolli
ನ್ಯಾಷನಲ್ ಕರಾಟೆ ಗ್ರಾಂಡ್ ಚಾಂಪಿಯನ್ ಶಿಪ್:ನಿತಾ ಬಿಲ್ಲವ ಪ್ರಥಮ ಸ್ಥಾನ
ಕುಂದಾಪುರ ( ಜೂ ,19): ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸೂಪರ್ ಸ್ಪೋರ್ಟ್ಸ್ ಶೋಟೋಕನ್ ಕರಾಟೆ ಅಕಾಡೆಮಿ ಆಯೋಜಿಸಿದ್ದ ಫಸ್ಟ್ ನ್ಯಾಷನಲ್ ಕರಾಟೆ ಗ್ರಾಂಡ್ ಚಾಂಪಿಯನ್ ಶಿಪ್ 2022 ರ ಕಟಾ ಮತ್ತು ಕುಮಿಟೆ ಎರಡು ವಿಭಾಗಗಳಲ್ಲಿ ನಿತಾ ಬಿಲ್ಲವ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ. ಈಕೆ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು ಉಪ್ರಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಗಣಪ ಬಿಲ್ಲವ ಮತ್ತು ಕೇಶವತಿ ದಂಪತಿ ಪುತ್ರಿ […]
ಗಂಗೊಳ್ಳಿ: ಬಿಲ್ಲವ ಹಿತರಕ್ಷಣಾ ವೇದಿಕೆಯಿಂದ ಪುಸ್ತಕ ವಿತರಣಾ ಕಾರ್ಯಕ್ರಮ
ಗಂಗೊಳ್ಳಿ (ಜೂ,11):ಶೈಕ್ಷಣಿಕ ಬೆಳವಣಿಗೆಯಿಂದ ಒಂದು ಸಮುದಾಯದ ಅಭಿವೃದ್ಧಿ ಸಾಧ್ಯವಾಗುತ್ತದೆ ಆ ನಿಟ್ಟಿನಲ್ಲಿ ಪೂರಕವಾಗಿ ಸಂಘಟನೆಗಳು ಶ್ರಮಿಸುತ್ತಿರುವುದು ಅಭಿನಂದನೀಯ ಸಂಗತಿ ಎಂದು ನಿವೃತ್ತ ಬಿಎಸ್ಎನ್ಎಲ್ ಇಂಜಿನಿಯರ್ ಅಣ್ಣಪ್ಪ ಬಿಲ್ಲವ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ಶ್ರೀ ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ವಠಾರದಲ್ಲಿ ನಡೆದ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸೀತಾಳಿ ನವದುರ್ಗೆ ಅಮ್ಮನವರ ದೇವಸ್ಥಾನದ ಪಾತ್ರಿ ಗಳಾದ ರಘು ಪೂಜಾರಿ, […]
ಸರಸ್ವತಿ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಆರಂಭೋತ್ಸವ
ಗಂಗೊಳ್ಳಿ (ಜೂ,11) : ಜ್ಞಾನಾರ್ಜನೆ ವಿದ್ಯಾರ್ಥಿಗಳ ಪ್ರಮುಖ ಗುರಿಯಾಗಬೇಕು. ಆ ನಿಟ್ಟಿನಲ್ಲಿ ಶ್ರದ್ಧೆ ಪ್ರಮಾಣಿಕತೆ ಛಲದೊಂದಿಗೆ ಸಾಗಿದಾಗ ಜೀವನದಲ್ಲಿ ಅದ್ಭುತ ಯಶಸ್ಸನ್ನು ಕಾಣಲು ಸಾಧ್ಯ ಎಂದು ಗಂಗೊಳ್ಳಿಯ ಜಿ.ಎಸ್.ವಿ.ಎಸ್ ಅಸೋಷಿಯೆಷನ್ ಕಾರ್ಯದರ್ಶಿ ಹೆಚ್.ಗಣೇಶ್ ಕಾಮತ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಸಂಸ್ಕøತ ಉಪನ್ಯಾಸಕ ವೆಂಕಟೇಶ ಮೂರ್ತಿ ಎನ್.ಸಿ. ಕಾಲೇಜಿನ ಶಿಸ್ತು ನೀತಿ ನಿಯಮಗಳ […]
ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ಶಿಪ್: ಟಿ. ಶಶಾಂಕ್ ಶೆಣೈ ಗೆ ಚಿನ್ನದ ಪದಕ
ಉಡುಪಿ(ಜೂ,5): ಬೊಡೋಕಾನ್ ಕರಾಟೆ& ಸ್ಪೋರ್ಟ್ಸ್ ಅಸೋಸಿಯೇಷನ್ ಉಡುಪಿ ಇವರು ಅಂಬಲಪಾಡಿಯಲ್ಲಿ ಆಯೋಜಿಸಿದ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಕಿರಣ್ಸ್ ಡ್ರಾಗನ್ ಫಿಸ್ಟ್ ಮಾರ್ಷಲ್ ಆರ್ಟ್ ವಿದ್ಯಾರ್ಥಿ ಹಾಗೂ ತರಬೇತುದಾರರಾದ ಟಿ. ಶಶಾಂಕ್ ಶೆಣೈ ಸೀನಿಯರ್ ಕಟಾ ವಿಭಾಗದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ. ಇವರು ಕಿಯೋಶಿ ಕಿರಣ್ ಕುಂದಾಪುರ ಇವರ ಶಿಷ್ಯ ಹಾಗೂ ಗಂಗೊಳ್ಳಿ ನಿವಾಸಿ ಟಿ.ದಿನಕರ ಶ್ಯಾನುಭಾಗ್ ಮತ್ತು ಉಷಾ ದಿನಕರ್ ರವರ ಪುತ್ರ .
ವೈಷ್ಣವಿ ಗೋಪಾಲ್ ಗೆ 5ನೇ ರ್ಯಾಂಕ್
ಗಂಗೊಳ್ಳಿ ( ಏ.20): ಮಂಗಳೂರು ವಿಶ್ವವಿದ್ಯಾನಿಲಯದ 20020-21 ನೇ ಸಾಲಿನ ಪರೀಕ್ಷೆಯಲ್ಲಿ ಮೂಡಬಿದರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಗಂಗೊಳ್ಳಿಯ ವೈಷ್ಣವಿ ಗೋಪಾಲ ಚಂದನ್ ಬಿಎ ಪದವಿ ಪರೀಕ್ಷೆಯಲ್ಲಿ ಐದನೇ ರ್ಯಾಂಕ್ ಗಳಿಸಿದ್ದಾರೆ. ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿ ಗುರುತಿಸಿಕೊಂಡಿರುವ ಇವರು ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಸಂಚಲನ ಫೌಂಡೇಶನ್ ಕುಂದಾಪುರ ಇದರ ಉಪಾಧ್ಯಕ್ಷೆ. ಗಂಗೊಳ್ಳಿಯ ಗೋಪಾಲ ಚಂದನ್ ಮತ್ತು ಖ್ಯಾತ ಆಯುರ್ವೇದ ವೈದ್ಯೆ ಡಾ. ವೀಣಾ ಕಾರಂತ್ ದಂಪತಿಯ ಪುತ್ರಿ.
ಶ್ವೇತಾ ಪೂಜಾರಿಗೆ ಚಿನ್ನದ ಪದಕ
ಕುಂದಾಪುರ( ಏ.18): ಬೆಂಗಳೂರಿನ ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಬಿಸಿನೆಸ್ ಅಂಡ್ ರಿಸರ್ಚ್ ನ ವಿದ್ಯಾರ್ಥಿನಿ ಶ್ವೇತಾ ಪೂಜಾರಿ ಬೆಂಗಳೂರು ವಿಶ್ವವಿದ್ಯಾನಿಲಯದ 2019- 21 ರ ಎಂಬಿಎ ಪರೀಕ್ಷೆಯ ಮಾರ್ಕೆಟಿಂಗ್ ಮತ್ತು ಫೈನಾನ್ಸ್ ವಿಭಾಗದ ಪರೀಕ್ಷೆಯಲ್ಲಿ ಕಾಲೇಜಿಗೆ ಅತ್ಯಧಿಕ ಅಂಕ ಗಳಿಸುವ ಮೂಲಕ ಚಿನ್ನದ ಪದಕವನ್ನು ಗಳಿಸಿರುತ್ತಾರೆ. ಪಠ್ಯಕ್ರಮದ ಹೊರತಾಗಿ ಸಮಾಜಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿರುವ ವಿದ್ಯಾರ್ಥಿಗಳಿಗೆ ನೀಡಲಾಗುವ ಐ ಎಸ್ ಬಿ ಆರ್ ಕಾಲೇಜಿನ ಜೆಮ್ಸ್ ಮತ್ತು […]
ಸಮುದಾಯದತ್ತ ಶಾಲೆಯಲ್ಲಿ ಸಂಜಿತ್ ಸ್ಯಾಕ್ಸೋಫೋನ್ ವಾದನ
ಗಂಗೊಳ್ಳಿ( ಏ.13): ಇಲ್ಲಿನ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಖಾರ್ವಿಕೇರಿಯಲ್ಲಿ ಕಳೆದ ಶನಿವಾರ ನಡೆದ ಸಮುದಾಯದತ್ತ ಶಾಲೆ ಕಾರ್ಯಕ್ರಮದಲ್ಲಿ ಈ ಶಾಲೆಯ ಮೂರನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ ದೇವಾಡಿಗನಿಂದ ಸ್ಯಾಕ್ಸೋಪೋನ್ ವಾದನದ ಕರ್ಯಕ್ರಮ ನಡೆಯಿತು. ಭಕ್ತಿಗೀತೆ, ದೇಶಭಕ್ತಿ ಗೀತೆ, ಭಾವಗೀತೆ, ಚಲನಚಿತ್ರ ಗೀತೆಯ ಜೊತೆಗೆ ರಾಷ್ಟ್ರಗೀತೆಯನ್ನು ನುಡಿಸಿ ಮೆಚ್ಚುಗೆ ಗಳಿಸಿದ ಸಂಜಿತ್ ಎಂ ದೇವಾಡಿಗನನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಎಸ್. […]
ಮೇಲ್ ಗಂಗೊಳ್ಳಿ: ಏ.20 ರಂದು ವಿಶೇಷ ಕಾರ್ಯಕ್ರಮ
ಗಂಗೊಳ್ಳಿ (ಏ .11): ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಲ ಮೇಲ್ ಗಂಗೊಳ್ಳಿ ಇದರ 35 ನೇ ವಾರ್ಷಿಕೋತ್ಸವ ಮತ್ತು ಅಮೃತ ಯುವತಿ ಮಂಡಲ ಹಾಗೂ ಅರ್ಚನಾ ಮಹಿಳಾ ಮಂಡಲ ಮೇಲ್ ಗಂಗೊಳ್ಳಿಯ 29 ನೇ ವಾರ್ಷಿಕೋತ್ಸವ ಹಾಗೂ ಡಾ. ಬಿ ಆರ್. ಅಂಬೇಡ್ಕರ್ ಅವರ 131ನೇ ಜನ್ಮದಿನಾಚರಣೆಯ ಕಾರ್ಯಕ್ರಮವು ಮೇಲ್ ಗಂಗೊಳ್ಳಿಯ ಪೋರ್ಟ್ ಬಂಗ್ಲೆ ಮೈದಾನದಲ್ಲಿ ಏ.20 ರ ಬುಧವಾರದಂದು ಜರಗಲಿರುವುದು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀನಿವಾಸ […]
ಯುವ ಲೇಖಕ -ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಗೆ ಸನ್ಮಾನ
ಗಂಗೊಳ್ಳಿ( ಮಾ.29) : ನಾಯಕವಾಡಿ ಗುಜ್ಜಾಡಿಯ ಶ್ರೀ ಸಂಗಮೇಶ್ವರ ದೇವಸ್ಥಾನ, ಶ್ರೀ ಚೆನ್ನಬಸವೇಶ್ವರ ಭಜನಾ ಮಂಡಳಿ ಮತ್ತು ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ಇವರ ವತಿಯಿಂದ ಕಳೆದ ಸೋಮವಾರ ಯುವ ಬರಹಗಾರ ವಾಗ್ಮಿ ನರೇಂದ್ರ ಎಸ್ ಗಂಗೊಳ್ಳಿ ಇವರನ್ನು ಶ್ರೀ ಸಂಗಮೇಶ್ವರ ದೇವಸ್ಥಾನದಲ್ಲಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ರಾಜು ಎನ್ ಮಾಸ್ತರ್, ಪ್ರಧಾನ ಕಾರ್ಯದರ್ಶಿ ಜಿ.ಸುಬ್ಬ, ಉಪಾಧ್ಯಕ್ಷರಾದ ಜಿ ಕೆ ಸುರೇಶ್, ಕೋಶಾಧಿಕಾರಿ […]