ಗಂಗೊಳ್ಳಿ(ಮಾ.03): ಅಂತರಾಷ್ಟ್ರೀಯ ಲಯನ್ಸ್ ಕ್ಲಬ್ ಮತ್ತು ಲಯನ್ಸ್ ಕ್ಲಬ್ ಬೈಲಹೊಂಗಲ ಇವರ ವತಿಯಿಂದ ಕಳೆದ ನವೆಂಬರ್ ನಲ್ಲಿ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ಪ್ರಥಮ ಮಹಿಳಾ ಸೈನ್ಯವನ್ನು ಕಟ್ಟಿದ ಬೆಳವಡಿ ರಾಣಿ ಮಲ್ಲಮ್ಮ ಕುರಿತಾದ ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಅವರ ‘ವೀರರಾಣಿ ಬೆಳವಡಿ ಮಲ್ಲಮ್ಮ’ ಹೆಸರಿನ ಕವಿತೆಗೆ […]
Tag: narendra gangolli
ಗಂಗೊಳ್ಳಿ: ಪರೀಕ್ಷೆ ಎದುರಿಸುವ ಒತ್ತಡಗಳ ನಿವಾರಣೆ ಕುರಿತು ಕಾರ್ಯಗಾರ
ಗಂಗೊಳ್ಳಿ( ಜ,24): ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಇಂಟರಾಕ್ಟ್ ಕ್ಲಬ್ ಸಹಯೋಗದೊಂದಿಗೆ ” ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಪರೀಕ್ಷೆಯನ್ನುಎದುರಿಸುವಾಗ ಬರುವ ಒತ್ತಡಗಳ ನಿವಾರಣೆ ಕುರಿತಾದ ಕಾರ್ಯಗಾರವನ್ನು ಇತ್ತೀಚೆಗೆ ಏರ್ಪಡಿಸಲಾಗಿತ್ತು. ರೊಟೇರಿಯನ್ ಕುಮಾರ್ ಕಾಂಚನ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ನಿರ್ಭಯವಾಗಿ ಪರೀಕ್ಷೆಯನ್ನು ಎದುರಿಸುವ ಬಗೆ ತಿಳಿಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋ ಸುಗುಣ ಆರ್ ಕೆ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಕೆ ರಾಮನಾಥ ನಾಯಕ್ ಕ್ಲಬ್ಬಿನ ಇಂಟರಾಕ್ಟ್ […]
ಗಂಗೊಳ್ಳಿ: ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ
ಗಂಗೊಳ್ಳಿ (ಜ.02): ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ಮತ್ತು ಸಾಹಿತ್ಯ ತಂಗುದಾಣ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ಕರ್ನಾಟಕ ರಾಜ್ಯದ ಪದವಿಪೂರ್ವ ಮತ್ತು ಪದವಿ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ‘ಮಹಿಳಾ ದೌರ್ಜನ್ಯವನ್ನು ತಡೆಗಟ್ಟುವಲ್ಲಿ ನಮ್ಮ ಅರಿವು’ ಎನ್ನುವ ವಿಷಯದ ಕುರಿತಂತೆ ನಡೆಸಿದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಪಡೆದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪವಿತ್ರ ಎನ್ ಮೊಗೇರಿ ಮತ್ತು ನಿಶಾ ಬಿ ಪೂಜಾರಿ […]
ಡಾ. ಶಿವರಾಮ ಕಾರಂತ್ ಬಾಲ ಪುರಸ್ಕಾರಕ್ಕೆ ಸಂಜಿತ್ ಎಂ ದೇವಾಡಿಗ ಆಯ್ಕೆ
ಕೋಟ (ಡಿ.18): ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ( ರಿ)ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ಕೊಡ ಮಾಡುವ 2022ನೇ ಸಾಲಿನ ಡಾ. ಶಿವರಾಮ ಕಾರಂತ್ ಬಾಲ ಪುರಸ್ಕಾರಕ್ಕೆ ಸಂಜಿತ್ ಎಂ ದೇವಾಡಿಗ ಆಯ್ಕೆಯಾಗಿದ್ದಾರೆ. ಕೊಂಚಾಡಿ ರಾಧಾ ಶೆಣೈ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 4 ನೆ ತರಗತಿಯ ವಿಧ್ಯಾರ್ಥಿಯಾಗಿರುವ ಸಂಜಿತ್ ಆಯ್ಕೆಗೆ ಶಾಲೆಯ ಭೋಧಕ ವ್ರoದ ಹಾಗೂ ಶಾಲಾ ಆಡಳಿತ ಮಂಡಳಿ ಅಭಿನಂಧನೆ ಸಲ್ಲಿಸಿದ್ದಾರೆ.
ಗಂಗೊಳ್ಳಿ:ಮರಣಿ ಮಾಂಟೆ ನಾಟಕ ಪ್ರದರ್ಶನ
ಗಂಗೊಳ್ಳಿ(ಡಿ.18): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ಇಲ್ಲಿನ ವಿದ್ಯಾರ್ಥಿಗಳು ಮರಣಿ ಮಾಂಟೆ ಎನ್ನುವ ಭಿನ್ನ ಶೈಲಿಯ ನಾಟಕ ಇತ್ತೀಚೆಗೆ ಪ್ರದರ್ಶನಗೊಂಡಿತು . ಸಾವಿನ ದೇವತೆಯೊಂದಿಗೆ ಹೋರಾಡುವ ಕುತೂಹಲಕಾರಿ ಕಥಾನಕವನ್ನು ಮರಣಿ ಮಾಂಟೆ ನಾಟಕವು ಒಳಗೊಂಡಿದ್ದು ಇದನ್ನು ಇಲ್ಲಿನ ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ನರೇಂದ್ರ ಎಸ್ ಗಂಗೊಳ್ಳಿ ರಚಿಸಿ ನಿರ್ದೇಶಿಸಿದ್ದಾರೆ. ಶ್ರಾವ್ಯ ಎನ್, ನಿಶಾ ಬಿ ಪೂಜಾರಿ ಹೃತಿಕ, ದಿಯಾ, ಅಮೀಕ್ಷಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು ಒಟ್ಟು […]
ಗಂಗೊಳ್ಳಿ: ನಾಯಿ ನಾನು ಪುಸ್ತಕ ಬಿಡುಗಡೆ
ಗಂಗೊಳ್ಳಿ(ಡಿ.18): ಸಾಹಿತ್ಯ ಸೇರಿದಂತೆ ಎಲ್ಲ ರಂಗಗಳಲ್ಲಿನ ಪ್ರತಿಯೊಬ್ಬ ವ್ಯಕ್ತಿಯ ಯಶಸ್ಸಿನ ಹಿಂದೆಯೂ ಅಪಾರ ಪರಿಶ್ರಮ ಅಡಗಿರುತ್ತದೆ. ಅದನ್ನು ಮೆಚ್ಚಿ ಅಭಿನಂದಿಸುವ ಪರಸ್ಪರ ಸಹಕರಿಸುವ ಮನಸ್ಸುಗಳು ಸಮಾಜದಲ್ಲಿ ಹೆಚ್ಚಬೇಕು ಎಂದು ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ನ ಪ್ರವರ್ತಕರಾದ ಗೋವಿಂದ ಬಾಬು ಪೂಜಾರಿ ಯವರು ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಗಂಗೊಳ್ಳಿಯ ಸಂಜೀವ ಪಾರ್ವತಿ ಪ್ರಕಾಶನದ ಆಶ್ರಯದಲ್ಲಿ ಗಂಗೊಳ್ಳಿಯ ಬಿಲ್ಲವರ ಹಿತ ರಕ್ಷಣಾ ವೇದಿಕೆ ಮತ್ತು ರೋಟರಿ […]
ನಾವುಂದ: ಸರಕಾರಿ ಪಿ ಯು ಕಾಲೇಜಿನ ವಿದ್ಯಾರ್ಥಿನಿ ಪ್ರತಿಮಾ ದ್ವಿತೀಯ ಸ್ಥಾನ
ನಾವುಂದ( ಡಿ,6): ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ ಮತ್ತು ಶ್ರೀ ಸೋಂಧಾ ಸ್ವರ್ಣವಲ್ಲಿ ಮಹಾ ಸಂಸ್ಥಾನ ವತಿಯಿಂದ ನಡೆದ ಶ್ರೀ ಭಗವದ್ಗೀತಾ ಕಂಠಪಾಠ ಸ್ಪರ್ಧೆಯ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ವಿಭಾಗದಲ್ಲಿ ನಾವುಂದದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರತಿಮಾ ಇವರು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
ಸಂವಿಧಾನದ ಆಶಯವನ್ನು ಅರಿತು ಬಾಳೋಣ: ಪ್ರವೀಣ್ ಗಂಗೊಳ್ಳಿ
ಗಂಗೊಳ್ಳಿ(ನ,29): ಜಗತ್ತಿನಲ್ಲಿಯೇ ಅತಿ ಶ್ರೇಷ್ಠವಾದ ಮತ್ತು ಬ್ರಹತ್ ಗಾತ್ರದ ಸಂವಿಧಾನವನ್ನು ಹೊಂದಿರುವ ದೇಶ ನಮ್ಮದು.ಸಂವಿಧಾನ ರಚನಾ ಸಮಿತಿಯವರು ಬಲಿಷ್ಠ ಭಾರತದ ನಿರ್ಮಾಣದ ಕನಸ್ಸನ್ನು ಹೊತ್ತು 1949 ರ ನವೆಂಬರ್,26 ರಂದು ಸಂವಿಧಾನವನ್ನು ಶಾಸನಬದ್ದವಾಗಿ ದೇಶದ ಜನರ ಹೆಸರಿನಲ್ಲಿ ಅರ್ಪಿಸಿದ್ದಾರೆ. ಆ ನಿಟ್ಟಿನಲ್ಲಿ ಸಂವಿಧಾನದ ಆಶಯಗಳನ್ನು ಅರಿತು ಬಾಳುವುದರೊಂದಿಗೆ ಬಲಿಷ್ಠ ಭಾರತದ ನಿರ್ಮಾಣ ನಮ್ಮ ಜವಾಬ್ದಾರಿಯಾಗಿದೆ ಎಂದು ಕುಂದಾಪುರದ ಡಾ|ಬಿ.ಬಿ.ಹೆಗ್ಡೆ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಪ್ರವೀಣ್ ಮೊಗವೀರ ಗಂಗೊಳ್ಳಿ ಹೇಳಿದರು.ಅವರು ನ.29 […]
ಗಂಗೊಳ್ಳಿ: ಸರಸ್ವತಿ ವಿದ್ಯಾಲಯದಲ್ಲಿ ಸ್ವಯಂ ಅರಿವಿನ ಕಾರ್ಯಗಾರ
ಗಂಗೊಳ್ಳಿ( ನ,21): ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳುವ ಮೊದಲು ಆ ಬಗೆಗೆ ನಿರ್ದಿಷ್ಟವಾದ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳಬೇಕು. ಗುರಿಯ ದಿಕ್ಕಿನಲ್ಲಿ ಶ್ರಮವಹಿಸಿದರೆ ಮಾತ್ರ ಯಶಸ್ಸು ನಮ್ಮದಾಗುತ್ತದೆ ಎಂದು ಯುವ ಉದ್ಯಮಿ ಶಾರ್ಲೆಟ್ ಲೋಬೊ ಹೇಳಿದರು. ಅವರು ಇತ್ತೀಚಿಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ಇಂಟರಾಕ್ಟ್ ಕ್ಲಬ್ ಇವರ ಸಹಯೋಗದಲ್ಲಿ ಇಲ್ಲಿನ ಪ್ರೌಢಶಾಲಾ ವಿಭಾಗದ ಮಕ್ಕಳಿಗಾಗಿ ನಡೆದ ಸ್ವಯಂ ಅರಿವಿನ ವ್ಯಕ್ತಿತ್ವ ವಿಕಸನ ಕಾರ್ಯಗಾರದಲ್ಲಿ ಸಂಪನ್ಮೂಲ […]
ಸರಸ್ವತಿ ವಿದ್ಯಾಲಯದಲ್ಲಿ ಮಹಿಳಾ ಸ್ವರಕ್ಷಣ ತರಬೇತಿ ಕಾರ್ಯಗಾರ
ಗಂಗೊಳ್ಳಿ ( ನ,18): ಇಂದಿನ ಕಾಲಘಟ್ಟದಲ್ಲಿ ಮಹಿಳೆಯರು ಸ್ವರಕ್ಷಣಾ ತಂತ್ರಗಳನ್ನು ಕಲಿತುಕೊಳ್ಳಬೇಕು. ಇದು ಮಹಿಳೆಯರ ಆತ್ಮವಿಶ್ವಾಸವನ್ನು ಹೆಚ್ಚಿಸಿ ಆಪತ್ತಿನ ಕಾಲದಲ್ಲಿ ಬಹಳಷ್ಟು ಸಹಾಯ ಮಾಡುತ್ತದೆ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕವಿತಾ ಎಂ.ಸಿ ಹೇಳಿದರು. ಅವರು ಇಲ್ಲಿನ ಗುಜ್ಜಾಡಿ ಗೋಪಾಲ್ ನಾಯಕ್ ರೋಟರಿ ಸಭಾಂಗಣದಲ್ಲಿ ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ ,ರೋಟರಿ ಕ್ಲಬ್ ಗಂಗೊಳ್ಳಿ, ವೆಂಕಟೇಶ ಕೃಪ ಟ್ರೇಡರ್ಸ್ ಗಂಗೊಳ್ಳಿ ಸುರಭಿ ಡಿಜಿಟಲ್ ಸ್ಟುಡಿಯೋ […]










