ಗಂಗೊಳ್ಳಿ (ಜು, 29) : ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ತಮ್ಮ ವೈವಿಧ್ಯಮಯ ಬರಹಗಳ ಮೂಲಕ ಪರಿಚಿತರಾಗಿರುವ ಯುವ ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಅವರ ಚೊಚ್ಚಲ ಕೃತಿ ‘ಹೇಳದೆ ಹೋದ ಮಗಳಿಗೆ’ ಪುಸ್ತಕಕ್ಕೆ ತುಮಕೂರಿನ ಪ್ರತಿಷ್ಠಿತ ಸಂಸ್ಥೆ ಗುರುಕುಲ ಕಲಾ ಪ್ರತಿಷ್ಠಾನ(ರಿ)ದ ವತಿಯಿಂದ ಕೊಡಮಾಡುವ ಗುರುಕುಲ ಸಾಹಿತ್ಯ ಶರಭ ಪ್ರಶಸ್ತಿ ಲಭಿಸಿದೆ. ವೈವಿಧ್ಯಮಯವಾದ ಪ್ರೇರಣಾತ್ಮಕ ಅಂಕಣ ಬರಹಗಳನ್ನು ಒಳಗೊಂಡಿರುವ ಈ ಕೃತಿ […]
Tag: narendra gangolli
ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ :ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ
ಗಂಗೊಳ್ಳಿ: (ಜು,24): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 182 ವಿದ್ಯಾರ್ಥಿಗಳಲ್ಲಿ 31 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 106 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಮತ್ತು 45 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಪ್ರಸನ್ನಾ ಪೈ 600ಕ್ಕೆ 600 ಅಂಕಗಳನ್ನು ಪಡೆದು ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ರಿಫ್ಜಾ (597) ಮತ್ತು […]
ಕವಿ ಕೆ.ವಿ.ತಿರುಮಲೇಶ್ ಕವಿತೆಗಳು ಮಲೆಯಾಳಕ್ಕೆ ಅನುವಾದ
ಬ್ರಹ್ಮಾವರ(ಜು,18): ಮಲೆಯಾಳದ ಮಹಾಕವಿ ಚಙ್ಙಪ್ಪುಳ ಕೃಷ್ಣ ಪಿಳ್ಳೆಯವರು ಹೇಳಿದಂತೆ ಕಾವ್ಯವು ಒಬ್ಬ ನರ್ತಕಿ ಇದ್ದಂತೆ. ನರ್ತಕಿ ತನಗೆ ಹೇಳಬೇಕಾದ ವಿಚಾರಗಳನ್ನು ಸನ್ನೆ – ಸಂಕೇತಗಳ ಮೂಲಕವೇ ಸೂಚಿಸುತ್ತಾಳೆ. ಚಙ್ಙಪ್ಪುಳ, ವಳ್ಳತ್ತೋಳ್, ಉಳ್ಳೂರ್ ಮೊದಲಾದ ಮಹಾಕವಿಗಳು ಮಲೆಯಾಳ ಕಾವ್ಯದ ತೋರುಗಂಬಗಳಾಗಿ ಉತ್ಕೃಷ್ಟ ಕಾವ್ಯ ರಚನೆ ಮಾಡಿದರು. ವೇದ-ಉಪನಿಷತ್ತುಗಳು, ರಾಮಾಯಣ, ಮಹಾಭಾರತ, ಮೊದಲಾದ ಮಹಾಕಾವ್ಯಗಳು, ಭಗವದ್ಗೀತೆಯಂಥ ಅಮೂಲ್ಯ ಗ್ರಂಥ, ಕಾಳಿದಾಸ-ಭಾಸರಂಥ ಮಹಾಕವಿಗಳು ಸಾಹಿತ್ಯವನ್ನು ಶ್ರೀಮಂತವಾಗಿಸಿದಂತಹ ನಾಡು ನಮ್ಮದು. ಅವರ ಆದರ್ಶದಲ್ಲೇ ಮಲೆಯಾಳ ಕಾವ್ಯವು […]
ಕುಂದಾಪುರ : ‘ಸುರಗಂಗೆ’ ಪುಸ್ತಕ ಬಿಡುಗಡೆ
ಕುಂದಾಪುರ (ಜು, 11) : ಪಂಚಭಾಷಾ ಲೇಖಕಿ ಪಾರ್ವತಿ ಜಿ ಐತಾಳ್ ವಿಶೇಷವಾಗಿ ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿರುವ ಸೇವೆ ಅನುಪಮವಾದದ್ದು. ಅವರ ಸಾಧನೆ ಸದಾ ಕಾಲ ಪ್ರೇರಣೆ ನೀಡುವಂತದ್ದು. ಅವರಿಗೆ ಸಾಹಿತ್ಯ ಕ್ಷೇತ್ರದಲ್ಲಿ ಮತ್ತಷ್ಟು ಎತ್ತರದ ಮನ್ನಣೆ ಸಿಗಲೇ ಬೇಕಿದೆ ಎಂದು ಖ್ಯಾತ ಕಲಾವಿದೆ ಸಾಹಿತಿ ಪೂರ್ಣಿಮಾ ಸುರೇಶ್ ಅಭಿಪ್ರಾಯಪಟ್ಟರು. ಅವರು ಕುಂದಾಪುರದ ಜನಪ್ರತಿನಿಧಿ ಪ್ರಕಾಶನ ಹೊರತಂದಿರುವ ನರೇಂದ್ರ ಎಸ್ ಗಂಗೊಳ್ಳಿ ಸಂಪಾದಕತ್ವದ ಡಾ. ಪಾರ್ವತಿ ಜಿ ಐತಾಳ್ ಅವರ ಸಮಗ್ರ ಕೃತಿಗಳ […]
ಬಲವಂತದ ಬರವಣಿಗೆ ಸರಿಯಲ್ಲ – ನರೇಂದ್ರ ಎಸ್. ಗಂಗೊಳ್ಳಿ : ಪೂರ್ಣಪ್ರಜ್ಞ ಕಾಲೇಜಿನಲ್ಲಿ ಬದುಕಿಗೆ ಬರಹ ಆನ್ ಲೈನ್ ಉಪನ್ಯಾಸ ಕಾರ್ಯಕ್ರಮ
ಬಲವಂತದ ಬರವಣಿಗೆ ಸರಿಯಲ್ಲ. ಸೃಜನಶೀಲತೆಯಿಂದ ಬರಹಗಳು ಹುಟ್ಟಬೇಕು. ಹೆಚ್ಚಿನ ಓದು, ವಿಚಾರ ಮಂಥನ, ಚರ್ಚೆ ಇತ್ಯಾದಿ ಉತ್ತಮ ಬರಹಗಾರರನ್ನು ರೂಪಿಸುವಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತವೆ. ಆಸಕ್ತಿಯ ಕ್ಷೇತ್ರ ಯಾವುದೇ ಇದ್ದರೂ ಓದುವಿಕೆ ನಿರಂತರವಾಗಿರಲಿ ಎಂದು ಅವರು ಹೇಳಿದರು.
ಯೋಗ ನಮ್ಮದೆನ್ನಲು ಹೆಮ್ಮೆ ಪಡಿ – ನರೇಂದ್ರ ಎಸ್ ಗಂಗೊಳ್ಳಿ
ಕುಂದಾಪುರ (ಜು, 01) : ಯೋಗ ಎನ್ನುವುದು ಇಡೀ ವಿಶ್ವಕ್ಕೆ ಭಾರತ ನೀಡಿದ ಅದ್ಭುತವಾದ ಕೊಡುಗೆ. ಅದನ್ನು ನಮ್ಮದೆಂದು ಹೇಳಲು ಹೆಮ್ಮೆ ಪಡಬೇಕು ಮತ್ತು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಹೇಳಿದರು. ಅವರು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಕಾಪುವಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸ್ವಯಂ ಸೇವಾ ಯೋಜನೆ, ಯೂತ್ ರೆಡ್ ಕ್ರಾಸ್, ರೇಂಜರ್ಸ್, […]
ನರೇಂದ್ರ ಎಸ್ ಗಂಗೊಳ್ಳಿಗೆ ಶಿಕ್ಷಕ ರತ್ನ ಗೌರವ
ಗಂಗೊಳ್ಳಿ ( ಜೂ, 13): ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಉಪನ್ಯಾಸಕ, ಯುವ ಸಾಹಿತಿ ಹಾಗೂ ಅಂಕಣಕಾರರೂ ಆಗಿರುವ ಶ್ರೀ ನರೇಂದ್ರ ಎಸ್ ಗಂಗೊಳ್ಳಿ ಅವರ ವಿವಿಧ ಕ್ಷೇತ್ರಗಳಲ್ಲಿನ ಬಹುಮುಖ ಪ್ರತಿಭೆಯನ್ನು ಪರಿಗಣಿಸಿ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಮಂಗಳೂರು ವಿಭಾಗದ ವತಿಯಿಂದ ಶಿಕ್ಷಕ ರತ್ನ ಗೌರವವನ್ನು ನೀಡಿ ಪುರಸ್ಕರಿಸಲಾಗಿದೆ.
ಶ್ರೀ ನರೇಂದ್ರ ಎಸ್. ಗಂಗೊಳ್ಳಿ ಯವರಿಗೆ ಪ್ರತಿಭಾ ಚೂಡಾಮಣಿ ರತ್ನ ಪ್ರಶಸ್ತಿ ಪ್ರಧಾನ
ಬೈಂದೂರು (ಏ, 21): ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಬೀದರ್ ಹಾಗೂ ಮಂದಾರ ಕಲಾವಿದರ ವೇದಿಕೆ ಬೀದರ್ ವತಿಯಿಂದ ಸಾಹಿತ್ಯ ಮತ್ತು ಇತರ ಕ್ಷೇತ್ರಗಳ ಸಾಧಕರಿಗೆ ನೀಡುವ ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ಉಪ್ಪುಂದ- ಕಂಬದ ಕೋಣೆಯ ‘ರೈತಸಿರಿ’ ಸಭಾಭವನ, ಕೆ.ಆರ್.ಎಸ್.ಎಸ್. ಎಸ್. ನಿ.,ನಲ್ಲಿ ಎಪ್ರಿಲ್ 18 ರಂದು ನಡೆಯಿತು. ಈ ಸಂದರ್ಭದಲ್ಲಿ ಯುವ ಲೇಖಕ ಹಾಗೂ ಉಪನ್ಯಾಸಕರಾದ ಶ್ರೀ ನರೇಂದ್ರ ಎಸ್ ಗಂಗೊಳ್ಳಿ ಇವರಿಗೆ ಪ್ರತಿಭಾ […]
ಕಥಾಸ್ಪರ್ಧೆಯಲ್ಲಿ ನರೇಂದ್ರ ಎಸ್ ಗಂಗೊಳ್ಳಿ ಪ್ರಥಮ
ಉಡುಪಿ (ಮಾ. 26) ಅಬ್ಬಾಸ್ ಮೇಲಿನಮನಿ ಸ್ಮರಣಾರ್ಥ ಗ್ರಾಮೀಣ ಸಾಹಿತ್ಯ ವೇದಿಕೆ ಬಾಗಲಕೋಟೆ ಹಮ್ಮಿಕೊಂಡಿದ್ದ ಕಥಾ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಯುವ ಬರಹಗಾರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಇವರು ರಚಿಸಿರುವ ‘ಯಾವುದೀ ಪ್ರವಾಹವು..?’ ಕಥೆಗೆ ಮೊದಲ ಸ್ಥಾನ ಬಂದಿದ್ದು ಮೂರು ಸಾವಿರ ರೂಪಾಯಿ ನಗದು ಬಹುಮಾನವನ್ನು ಒಳಗೊಂಡಿದೆ.
ನರೇಂದ್ರ ಎಸ್ ಗಂಗೊಳ್ಳಿಗೆ ರಾಜ್ಯಮಟ್ಟದ ಪ್ರಶಸ್ತಿ
ಕುಂದಾಪುರ (ಫೆ – 15): ಬೀದರ್ ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ(ರಿ). ಬೀದರ್ ಮತ್ತು ಮಂದಾರ ಕಲಾವಿದರ ವೇದಿಕೆ ಬೀದರ್ ಜಿಲ್ಲೆ ಇವರು ಕೊಡಮಾಡುವ ರಾಜ್ಯ ಮಟ್ಟದ ಕರ್ನಾಟಕ ಪ್ರತಿಭಾ ಚೂಡಾಮಣಿ ರತ್ನ ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಬಹುಮುಖ ಪ್ರತಿಭಾನ್ವಿತ ಯುವ ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಆಯ್ಕೆಯಾಗಿದ್ದಾರೆ. ಈ ವರೆಗೆ ರಾಜ್ಯ ಮಟ್ಟದ ವಿವಿಧ ದಿನಪತ್ರಿಕೆಗಳಲ್ಲಿ ಸುಮಾರು ಒಂದು ಸಾವಿರದ ಐನೂರಕ್ಕೂ ಹೆಚ್ಚಿನ ಲೇಖನಗಳು ಕಥೆ-ಕವನಗಳನ್ನು ಬರೆದಿರುವ, […]