ಗಂಗೊಳ್ಳಿ( ಆ,19): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ನಶಾ ಮುಕ್ತ ಭಾರತ ಅಭಿಯಾನದ ಪ್ರತಿಜ್ಞಾವಿಧಿ ಕಾರ್ಯಕ್ರಮ ಕಾಲೇಜಿನ ರೋಟರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಗಂಗೊಳ್ಳಿ ಆರಕ್ಷಕ ಠಾಣೆಯ ಎ.ಎಸ್.ಐ ಆನಂದ ಬಿ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಗಂಗೊಳ್ಳಿ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಜು ನಾಯ್ಕ್, ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ವಿದ್ಯಾರ್ಥಿ ಪ್ರತಿನಿಧಿಗಳು ಮತ್ತು ಬೋಧಕರು ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ […]
Tag: narendra gangolli
ಗಂಗೊಳ್ಳಿ : ಸರಸ್ವತಿ ವಿದ್ಯಾಲಯದಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಗಂಗೊಳ್ಳಿ(ಆ,09): ನಿಸ್ವಾರ್ಥ ಮನೋಭಾವದ ಸೇವೆಯೇ ನಿಜವಾದ ಧರ್ಮ. ಅಂತಹ ಸೇವಾ ಮನೋಭಾವನೆಯನ್ನು ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ಮಹತರವಾದ ಪಾತ್ರವನ್ನು ವಹಿಸುತ್ತದೆ ಎಂದು ಸೀನಿಯರ್ ಟ್ಯಾಕ್ಸ್ ಕನ್ಸಲ್ಟೆಂಟ್ ಜತಿಂದ್ರ ಮರವಂತೆ ಅವರು ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಅವರ ಸಹಾಯದೊಂದಿಗೆ ನಡೆದ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಗಂಗೊಳ್ಳಿಯ ರೋಟರಿ ಕ್ಲಬ್ […]
ಗಂಗೊಳ್ಳಿ : ಧ್ವನಿಬೆಳಕು ಸಂಯೋಜಕರ ಸಂಘಟನೆ ನಾರಾಯಣ ಖಾರ್ವಿ ಆಯ್ಕೆ
ಗಂಗೊಳ್ಳಿ(ಜು ,27): ಧ್ವನಿಬೆಳಕು ಸಂಯೋಜಕರ ಸಂಘಟನೆ ಉಡುಪಿ ಜಿಲ್ಲೆ ಇದರ ಕುಂದಾಪುರ ವಲಯದ 2025-26ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ ಖಾರ್ವಿ ಗಂಗೊಳ್ಳಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.
ಗಂಗೊಳ್ಳಿ : ಸರಸ್ವತಿ ವಿದ್ಯಾಲಯದಲ್ಲಿ ಮ್ಯೂಚುಯಲ್ ಫಂಡ್ ಹೂಡಿಕೆ ಮತ್ತು ಉಳಿತಾಯ ಮಾಹಿತಿ ಕಾರ್ಯಕ್ರಮ
ಗಂಗೊಳ್ಳಿ(ಜು.23): ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು, ಗಂಗೊಳ್ಳಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಇಂಟೆಗ್ರೇಟೆಡ್ ಎಂಟರ್ಪ್ರೈಸಸ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಮ್ಯೂಚುಯಲ್ ಫಂಡ್ ಹೂಡಿಕೆ ಮತ್ತು ಉಳಿತಾಯದ ಕುರಿತಾದ ಮಾಹಿತಿ ಕಾರ್ಯಕ್ರಮವು ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಎಚ್ ಡಿ ಎಫ್ ಸಿ ಮ್ಯೂಚುಯಲ್ ಫಂಡ್ ರಿಲೇಷನ್ಶಿಪ್ ಮ್ಯಾನೇಜರ್ ಸುದೀಪ್ […]
ಉಡುಪಿಯ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಕಾರ್ಯಗಾರ
ಉಡುಪಿ(ಜು ,4):ಉಡುಪಿ ಜಿಲ್ಲಾ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಸಂಘದ ವತಿಯಿಂದ ಉಡುಪಿಯ ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನಲ್ಲಿ ಕಳೆದ ಬುಧವಾರ ವಾಣಿಜ್ಯಶಾಸ್ತ್ರ ಉಪನ್ಯಾಸಕರಿಗಾಗಿ ವಿಷಯಾಧಾರಿತ ಕಾರ್ಯಗಾರವು ನಡೆಯಿತು. ಉಡುಪಿ ಜಿಲ್ಲಾ ಪದವಿಪೂರ್ವ ವಿಭಾಗದ ಡೆಪ್ಯುಟಿ ಡೈರೆಕ್ಟರ್ ಮಾರುತಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಶೇಷ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ರೊಟೇರಿಯನ್ ಸತೀಶ್ ಶೆಟ್ಟಿ ಹದಿಹರೆಯದ ಸವಾಲುಗಳು ಮತ್ತು ಎದುರಿಸಬೇಕಾದ ವಿಧಾನಗಳ ಬಗ್ಗೆ ವಿಚಾರಗಳನ್ನು ಹಂಚಿಕೊಂಡರು. ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಕುಮಾರ್ ಅಧ್ಯಕ್ಷತೆ […]
ಕೆಂಪೇಗೌಡ ದಿನಾಚರಣೆ ಸ್ಪರ್ಧೆ ನಾವುಂದ ಕಾಲೇಜಿನ ಮೂರು ವಿದ್ಯಾರ್ಥಿಗಳಿಗೆ ಬಹುಮಾನ
ನಾವುoದ(ಜು ,4): ಕೆಂಪೇಗೌಡ ದಿನಾಚರಣೆಯ ಅಂಗವಾಗಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು ಆಯೋಜಿಸಿದ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ನಾವುಂದದ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸಿಂಚನ ಕೆ.ಪ್ರಥಮ ಸ್ಥಾನವನ್ನು, ವಿದ್ಯಾರ್ಥಿನಿ ತ್ರಿಶಾ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಮನ್ವಿತ ತೃತೀಯ ಸ್ಥಾನ ಗಳಿಸಿರುತ್ತಾರೆ. ಪ್ರಾಂಶುಪಾಲರು ಭೋದಕ ಮತ್ತು ಬೋಧಕೇತರ ವೃಂದದವರು ವಿದ್ಯಾರ್ಥಿಗಳಿಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ
ಗಂಗೊಳ್ಳಿ : ಸಾಧಕ ವಿದ್ಯಾರ್ಥಿನಿ ಮನಾಲಿಗೆ ಸನ್ಮಾನ
ಗಂಗೊಳ್ಳಿ(ಜೂ ,20) : ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ, ವೈಷ್ಣವಿ ಇವೆಂಟ್ಸ್ ಗಂಗೊಳ್ಳಿ ಮತ್ತು ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿಯ ವತಿಯಿಂದ ಕಳೆದ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ರಾಂಕ್ ಪಡೆದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಮನಾಲಿ ಎಂ ಇವರನ್ನು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಸಭಾಂಗಣದಲ್ಲಿ ಅಭಿನಂದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವೈಷ್ಣವಿ ಇವೆಂಟ್ಸ್ ಮಾಲೀಕರಾದ ಗೋಪಾಲ ಚಂದನ್, […]
ಗಂಗೊಳ್ಳಿ : ನಿವೃತ್ತ ಮುಖ್ಯೋಪಾಧ್ಯಾಯ ಜಿ. ವಿಶ್ವನಾಥ್ ಭಟ್ ಅವರಿಗೆ ಸನ್ಮಾನ
ಗಂಗೊಳ್ಳಿ(ಜು ,16) : ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ, ವೈಷ್ಣವಿ ಇವೆಂಟ್ಸ್ ಗಂಗೊಳ್ಳಿ ಮತ್ತು ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿಯ ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿ ಮತ್ತು ಮುಖ್ಯೋಪಾಧ್ಯಾಯರಾಗಿ ಸುಮಾರು 36 ವರ್ಷಗಳ ಕಾಲ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತಿ ಹೊಂದಿದ ಜಿ.ವಿಶ್ವನಾಥ ಭಟ್ ಅವರನ್ನು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಸಭಾಂಗಣದಲ್ಲಿ ಅಭಿನಂದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವೈಷ್ಣವಿ ಇವೆಂಟ್ಸ್ ಮಾಲೀಕರಾದ ಗೋಪಾಲ […]
ಗಂಗೊಳ್ಳಿ : ಸರಸ್ವತಿ ವಿದ್ಯಾಲಯದಲ್ಲಿ ದೃಷ್ಟಿ ಸಂಚಿಕೆ ಬಿಡುಗಡೆ
ಗಂಗೊಳ್ಳಿ(ಜೂ ,8): “ಸಾಹಿತ್ಯದ ಓದು ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆಯನ್ನು, ಜೀವನೋತ್ಸಾಹವನ್ನು ಹೆಚ್ಚಿಸುತ್ತದೆ. ಸಂಗೀತ, ಸಾಹಿತ್ಯ, ಕಲೆಗಳಲ್ಲಿ ಆಸಕ್ತಿಯಿಲ್ಲದವನು ಬಾಲವಿಲ್ಲದ ಪಶುವಿನಂತೆ. ಬದುಕನ್ನು ಹೊಸ ಬಗೆಯಲ್ಲಿ ಕಟ್ಟಿಕೊಳ್ಳುವಲ್ಲಿ ಬರವಣಿಗೆ ಪೂರಕವಾದದ್ದು. ವಾರ್ಷಿಕ ಸಂಚಿಕೆ ಎಂಬುದು ಒಂದು ವಿದ್ಯಾ ಸಂಸ್ಥೆಯ ಮುಖವಾಣಿಯಿದ್ದಂತೆ. ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕೆ ಒಳ್ಳೆಯ ವೇದಿಕೆ” ಎಂದು ಲೇಖಕಿ, ಕವಯಿತ್ರಿ ಸಾಲಿಗ್ರಾಮ ಚಿತ್ರಪಾಡಿ ಸುಮನಾ ಆರ್. ಹೇರ್ಳೆ ಹೇಳಿದರು. ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ವಾರ್ಷಿಕ […]
ಗಂಗೊಳ್ಳಿ : ಸರಸ್ವತಿ ವಿದ್ಯಾಲಯದಲ್ಲಿ ದೃಷ್ಟಿ ಸಂಚಿಕೆ ಬಿಡುಗಡೆ
ಗಂಗೊಳ್ಳಿ(ಜೂ ,09): “ಸಾಹಿತ್ಯದ ಓದು ವಿದ್ಯಾರ್ಥಿಗಳಲ್ಲಿ ಕ್ರಿಯಾಶೀಲತೆಯನ್ನು, ಜೀವನೋತ್ಸಾಹವನ್ನು ಹೆಚ್ಚಿಸುತ್ತದೆ. ಸಂಗೀತ, ಸಾಹಿತ್ಯ, ಕಲೆಗಳಲ್ಲಿ ಆಸಕ್ತಿಯಿಲ್ಲದವನು ಬಾಲವಿಲ್ಲದ ಪಶುವಿನಂತೆ. ಬದುಕನ್ನು ಹೊಸ ಬಗೆಯಲ್ಲಿ ಕಟ್ಟಿಕೊಳ್ಳುವಲ್ಲಿ ಬರವಣಿಗೆ ಪೂರಕವಾದದ್ದು. ವಾರ್ಷಿಕ ಸಂಚಿಕೆ ಎಂಬುದು ಒಂದು ವಿದ್ಯಾ ಸಂಸ್ಥೆಯ ಮುಖವಾಣಿಯಿದ್ದಂತೆ. ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕೆ ಒಳ್ಳೆಯ ವೇದಿಕೆ” ಎಂದು ಲೇಖಕಿ, ಕವಯಿತ್ರಿ ಸಾಲಿಗ್ರಾಮ ಚಿತ್ರಪಾಡಿ ಸುಮನಾ ಆರ್. ಹೇರ್ಳೆ ಹೇಳಿದರು. ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ವಾರ್ಷಿಕ […]










