ಗಂಗೊಳ್ಳಿ(ಆ,23) : ತಂತ್ರಜ್ಞಾನ, ವೈದ್ಯಕೀಯ, ಮೆಕ್ಯಾನಿಕ್, ಬೋಧನೆ ಸೇರಿದಂತೆ ಹತ್ತಾರು ರೀತಿಯ ಉದ್ಯೋಗದ ಅವಕಾಶಗಳು ಸೇನೆಯಲ್ಲಿ ಇವೆ. ಅದನ್ನು ಅರಿತುಕೊಂಡು ಸದ್ಬಳಕೆ ಮಾಡಿಕೊಳ್ಳುವಲ್ಲಿ ಇಂದಿನ ಯುವ ಪೀಳಿಗೆ ತಮ್ಮನ್ನು ತೊಡಗಿಸಿಕೊಳ್ಳಬೇಕು. ಎಂದು ಮಾಜಿ ಸೈನಿಕರು ಲೇಖಕರು ಆಗಿರುವ ಬೈಂದೂರು ಚಂದ್ರಶೇಖರ ನಾವುಡ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ, ಎಸ್. ವಿ ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಹಾಗು ಶ್ರೀ ನಾರಾಯಣ […]
Tag: narendra gangolli
ಸರಸ್ವತಿ ವಿದ್ಯಾಲಯದಲ್ಲಿ ಶೈಕ್ಷಣಿಕ ಮಾರ್ಗದರ್ಶನ ಕಾರ್ಯಕ್ರಮ
ಗಂಗೊಳ್ಳಿ(ಆ,10): ವಿದ್ಯಾರ್ಥಿಗಳು ಪಿಯುಸಿ ನಂತರದ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳುವಾಗ ಬಹಳ ಎಚ್ಚರಿಕೆಯಿಂದ ಇರಬೇಕು. ಯಾವುದೇ ಕೋರ್ಸ್ ಗಳನ್ನು ಸೇರುವ ಮುನ್ನ ಅದರ ಸಾಧಕ ಬಾದಕಗಳನ್ನು ತಿಳಿದುಕೊಂಡು ಸ್ವಯಂ ಆಸಕ್ತಿಯಿಂದ ಸೇರಿದಾಗಲೇ ಯಶಸ್ಸು ಸಾಧ್ಯವಾಗುತ್ತದೆ ಎಂದು ತ್ರಿಷಾ ವಿದ್ಯಾ ಕಾಲೇಜಿನ ಕನ್ನಡ ಉಪನ್ಯಾಸಕ ಧೀರಜ್ ಬೆಳ್ಳಾರೆ ಅಭಿಪ್ರಾಯ ಪಟ್ಟರು. ಅವರು ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ, ಎಸ್ ವಿ ಕಾಮರ್ಸ್ ಕ್ಲಬ್ ಗಂಗೊಳ್ಳಿ ಮತ್ತು ರಾಷ್ಟ್ರೀಯ ಸೇವಾ […]
ಸರಸ್ವತಿ ವಿದ್ಯಾಲಯದಲ್ಲಿ ಎಸ್. ವಿ. ಕಾಮರ್ಸ್ ಕ್ಲಬ್ ಉದ್ಘಾಟನೆ
ಗಂಗೊಳ್ಳಿ (ಸೆ .15): ವಿದ್ಯಾರ್ಥಿಗಳು ಪಠ್ಯದ ಜೊತೆ ವ್ಯವಹಾರ ಜ್ಞಾನ ಮತ್ತು ಸಂವಹನ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು. ಬದುಕಿನಲ್ಲಿ ಯಶಸ್ಸನ್ನು ಕಂಡುಕೊಳ್ಳಲು ಇದು ಅತಿ ಮುಖ್ಯವಾಗುತ್ತದೆ ಎಂದು ಉದ್ಯಮಿ ವಿಠ್ಠಲ ಬಿ ಶಣೈ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಎಸ್.ವಿ. ಕಾಮರ್ಸ್ ಕ್ಲಬ್ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಗಂಗೊಳ್ಳಿಯ ಉದ್ಯಮಿ ರೋಷನ್ ಖಾರ್ವಿ ಎಸ್. ವಿ ಕಾಮರ್ಸ್ ಕ್ಲಬ್ ಲಾಂಛನವನ್ನು […]
ಹೇರಂಜಾಲು: 10ನೇ ಆಯುರ್ವೇದ ದಿನಾಚರಣೆ- ಪೌಷ್ಟಿಕ ಮಾಸಾಚರಣೆ
ಹೇರಂಜಾಲು( ಸೆ.15): ಆಯುರ್ವೇದದಲ್ಲಿ ತಿಳಿಸಿರುವ ದಿನಚರ್ಯೆ, ಋತುಚರ್ಯೆ, ಸದ್ವೃತ್ತ ಪಾಲನೆ ಮಾಡುವುದರಿಂದ ಆರೋಗ್ಯವಂತನು ರೋಗ ಬಾರದಂತೆ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಜೊತೆಯಲ್ಲಿ ರೋಗಿಯ ರೋಗವನ್ನು ಕೂಡ ಗುಣಪಡಿಸಬಹುದು. ನಮ್ಮ ಮನೆಯಂಗಳದಲ್ಲಿ ಇರುವಂತಹ ಅನೇಕ ಸಸ್ಯಗಳನ್ನ ಆಹಾರವಾಗಿ ಉಪಯೋಗಿಸುವುದರಿಂದ ನಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು ಜೊತೆಯಲ್ಲಿ ಅವುಗಳಿಂದಲೇ ಪೌಷ್ಟಿಕ ಆಹಾರವನ್ನು ಕೂಡ ನಾವು ಹೇಗೆ ತಯಾರಿಸಿ ಸೇವಿಸಬಹುದು ಎಂದು ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – […]
ಸರಸ್ವತಿ ವಿದ್ಯಾಲಯ ಗಂಗೊಳ್ಳಿ: ಶಟಲ್ ಬ್ಯಾಡ್ಮಿಂಟನ್ ನಲ್ಲಿ ಪ್ರಜ್ವಲ್ ಪೈ ರಾಜ್ಯಮಟ್ಟಕ್ಕೆ
ಉಡುಪಿ( ಸೆ .02): ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಭಂಡಾರ್ಕರ್ಸ್ ಪದವಿ ಪೂರ್ವ ಕಾಲೇಜು ಕುಂದಾಪುರ ರೋಟರಿ ಕ್ಲಬ್ ಕುಂದಾಪುರ ಸನ್ ರೈಸ್ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಶಟಲ್ ಬ್ಯಾಡ್ಮಿಂಟನ್ 2025ರ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಪೈ ಎಂ ಇವರು ಜಿಲ್ಲಾಮಟ್ಟದಲ್ಲೂ ಅತ್ಯುತ್ತಮ ಪ್ರದರ್ಶನದೊಂದಿಗೆ ರಾಜ್ಯಮಟ್ಟದಲ್ಲಿ ನಡೆಯುವ ಪಂದ್ಯ ಕೂಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಗೈದ ವಿದ್ಯಾರ್ಥಿಗೆ ಸಂಸ್ಥೆಯ ಆಡಳಿತ ಮಂಡಳಿಯವರು, […]
ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಎಸ್ .ವಿ ಗಂಗೊಳ್ಳಿ ಪ್ರಥಮ ಸ್ಥಾನ
ಗಂಗೊಳ್ಳಿ (ಆ ,21): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಅಂಗವಾಗಿ ನಡೆದ ಮಹಿಳೆಯರ ತ್ರೋಬಾಲ್ ನಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಕ್ತನ ಮತ್ತು ಪ್ರಸ್ತುತ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನವನ್ನು ಗಳಿಸಿದೆ. ವಿಜೇತರಿಗೆ ಸಂಸ್ಥೆ ಅಭಿನಂದನೆ ಕೋರಿದೆ.
ಎಸ್ .ವಿ. ಕಾಲೇಜು ಗಂಗೊಳ್ಳಿ : ನಶಾ ಮುಕ್ತ ಭಾರತ ಅಭಿಯಾನ
ಗಂಗೊಳ್ಳಿ( ಆ,19): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ನಶಾ ಮುಕ್ತ ಭಾರತ ಅಭಿಯಾನದ ಪ್ರತಿಜ್ಞಾವಿಧಿ ಕಾರ್ಯಕ್ರಮ ಕಾಲೇಜಿನ ರೋಟರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಗಂಗೊಳ್ಳಿ ಆರಕ್ಷಕ ಠಾಣೆಯ ಎ.ಎಸ್.ಐ ಆನಂದ ಬಿ ಅವರು ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಗಂಗೊಳ್ಳಿ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಜು ನಾಯ್ಕ್, ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ವಿದ್ಯಾರ್ಥಿ ಪ್ರತಿನಿಧಿಗಳು ಮತ್ತು ಬೋಧಕರು ಉಪಸ್ಥಿತರಿದ್ದರು. ವಾಣಿಜ್ಯಶಾಸ್ತ್ರ […]
ಗಂಗೊಳ್ಳಿ : ಸರಸ್ವತಿ ವಿದ್ಯಾಲಯದಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಗಂಗೊಳ್ಳಿ(ಆ,09): ನಿಸ್ವಾರ್ಥ ಮನೋಭಾವದ ಸೇವೆಯೇ ನಿಜವಾದ ಧರ್ಮ. ಅಂತಹ ಸೇವಾ ಮನೋಭಾವನೆಯನ್ನು ಬೆಳೆಸುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯು ಮಹತರವಾದ ಪಾತ್ರವನ್ನು ವಹಿಸುತ್ತದೆ ಎಂದು ಸೀನಿಯರ್ ಟ್ಯಾಕ್ಸ್ ಕನ್ಸಲ್ಟೆಂಟ್ ಜತಿಂದ್ರ ಮರವಂತೆ ಅವರು ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಅವರ ಸಹಾಯದೊಂದಿಗೆ ನಡೆದ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಗಂಗೊಳ್ಳಿಯ ರೋಟರಿ ಕ್ಲಬ್ […]
ಗಂಗೊಳ್ಳಿ : ಧ್ವನಿಬೆಳಕು ಸಂಯೋಜಕರ ಸಂಘಟನೆ ನಾರಾಯಣ ಖಾರ್ವಿ ಆಯ್ಕೆ
ಗಂಗೊಳ್ಳಿ(ಜು ,27): ಧ್ವನಿಬೆಳಕು ಸಂಯೋಜಕರ ಸಂಘಟನೆ ಉಡುಪಿ ಜಿಲ್ಲೆ ಇದರ ಕುಂದಾಪುರ ವಲಯದ 2025-26ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ ಖಾರ್ವಿ ಗಂಗೊಳ್ಳಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.
ಗಂಗೊಳ್ಳಿ : ಸರಸ್ವತಿ ವಿದ್ಯಾಲಯದಲ್ಲಿ ಮ್ಯೂಚುಯಲ್ ಫಂಡ್ ಹೂಡಿಕೆ ಮತ್ತು ಉಳಿತಾಯ ಮಾಹಿತಿ ಕಾರ್ಯಕ್ರಮ
ಗಂಗೊಳ್ಳಿ(ಜು.23): ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು, ಗಂಗೊಳ್ಳಿ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಇಂಟೆಗ್ರೇಟೆಡ್ ಎಂಟರ್ಪ್ರೈಸಸ್ ಉಡುಪಿ ಇವರ ಜಂಟಿ ಆಶ್ರಯದಲ್ಲಿ ಸರಸ್ವತಿ ವಿದ್ಯಾಲಯದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಮ್ಯೂಚುಯಲ್ ಫಂಡ್ ಹೂಡಿಕೆ ಮತ್ತು ಉಳಿತಾಯದ ಕುರಿತಾದ ಮಾಹಿತಿ ಕಾರ್ಯಕ್ರಮವು ಇಲ್ಲಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನೆರವೇರಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಎಚ್ ಡಿ ಎಫ್ ಸಿ ಮ್ಯೂಚುಯಲ್ ಫಂಡ್ ರಿಲೇಷನ್ಶಿಪ್ ಮ್ಯಾನೇಜರ್ ಸುದೀಪ್ […]










