ಗಂಗೊಳ್ಳಿ (ಜೂ ,2) : ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಜ್ಯ ಎನ್.ಎಸ್. ಎಸ್ ಕೋಶ ಹಾಗೂ ಯೇನಪೋಯ ವಿಶ್ವ ವಿದ್ಯಾಲಯದ ಸಹಯೋಗದೊಂದಿಗೆ ಮಂಗಳೂರು ದೇರಳಕಟ್ಟೆಯ ಯೇನಪೋಯ ವಿಶ್ವವಿದ್ಯಾಲಯ ದೀಮ್ದ್ ಕ್ಯಾಂಪಸ್ ನಲ್ಲಿ ಜೂನ್ 4 ರಿಂದ 7 ರವರೆಗೆ ನಡೆಯುವ ಜಾಗತಿಕ ಯುವಶೃಂಗ ಸಭೆಗೆ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಧನ್ಯ ಯು ಆಯ್ಕೆಯಾಗಿದ್ದಾರೆ. ಈಕೆ […]
Tag: narendra gangolli
ಗಂಗೊಳ್ಳಿ: ಪುಸ್ತಕ ವಿತರಣೆ ಕಾರ್ಯಕ್ರಮ
ಗಂಗೊಳ್ಳಿ (ಮೇ ,28) : ಸಮಾಜ ಸೇವಕ ಬೈಲುಮನೆ ಆನಂದ ಬಿಲ್ಲವ ಇವರ ವತಿಯಿಂದ ಗಂಗೊಳ್ಳಿಯ ಶ್ರೀ ಶಿರಸಿ ಅಮ್ಮನವರ ಸನ್ನಿಧಾನದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಆನಂದ ಬಿಲ್ಲವ ಅವರು ದೇವರಲ್ಲಿನ ನಂಬಿಕೆ ನಿಮ್ಮ ಆತ್ಮವಿಶ್ವಾಸವನ್ನು ವೃದ್ಧಿಸುತ್ತದೆ. ನಿಮ್ಮ ಕಲಿಕೆ ಉಳಿದವರಿಗೆ ಪ್ರೇರಣೆಯಾಗುವಂತಿರಲಿ ಎಂದು ಶುಭ ಹಾರೈಸಿದರು. ಬಿಲ್ಲವರ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ಜಿ ಗೋಪಾಲ ಪೂಜಾರಿ, […]
ಸರಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು: ಉಚಿತ ನೇತ್ರ ತಪಾಸಣೆ
ಕುಂದಾಪುರ(ಮೇ ,24): ಗ್ರಾಮೀಣ ಭಾಗದ ಜನರಿಗೆ ಆಸ್ಪತ್ರೆಗೆ ಹೋಗಲು ಕಷ್ಟ ಆಗುತ್ತದೆ ಹಾಗಾಗಿ ಸಾರ್ವಜನಿಕರಿಗೆ ಅನುಕೂಲವಾಗಲು ಸರ್ಕಾರವು ಉಚಿತ ಕ್ಯಾಂಪ್ ಗಳನ್ನು ನಡೆಸುತ್ತವೆ, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಆಯುಷ್ ಇಲಾಖೆ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಉಡುಪಿ, ಆಯುಷ್ ಇಲಾಖೆ ಉಡುಪಿ, ಗ್ರಾಮ ಪಂಚಾಯತ್ ಕಾಲ್ತೋಡು, ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ಕಾಲ್ತೋಡು, ಆಯುಷ್ಮಾನ್ ಆರೋಗ್ಯ ಮಂದಿರ (ಆಯುಷ್) ಕಾಲ್ತೋಡು, ಪ್ರಾಥಮಿಕ ಆರೋಗ್ಯ ಕೇಂದ್ರ ಕಿರಿಮಂಜೇಶ್ವರ, ಪಾರ್ವತಿ ಮಹಾಬಲ ಶೆಟ್ಟಿ […]
ಗಂಗೊಳ್ಳಿ : ಸುಶ್ಮಿತಾ ಎಸ್. ಗಾಣಿಗರಿಗೆ ಸನ್ಮಾನ
ಗಂಗೊಳ್ಳಿ(ಮೇ ,22): ವೈಷ್ಣವಿ ಇವೆಂಟ್ಸ್ ಗಂಗೊಳ್ಳಿ, ಸಂಜೀವ ಪಾರ್ವತಿ ಪ್ರಕಾಶನ ಗಂಗೊಳ್ಳಿ ಮತ್ತು ಬಿಲ್ಲವರ ಹಿತ ರಕ್ಷಣಾ ವೇದಿಕೆ ಗಂಗೊಳ್ಳಿಯ ವತಿಯಿಂದ 2025ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸುಶ್ಮಿತಾ ಎಸ್ ಗಾಣಿಗ ಅವರನ್ನು ಗಂಗೊಳ್ಳಿಯ ಶ್ರೀ ಸೀತಾಳಿ ನವದುರ್ಗೆ ದೇವಸ್ಥಾನದ ಆವರಣದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ವೈಷ್ಣವಿ ಇವೆಂಟ್ಸ್ […]
ಗಂಗೊಳ್ಳಿ : ಸಮಾಜ ಸೇವಕ ಈಶ್ವರ್ ಮಲ್ಪೆ ಅವರಿಗೆ ಸನ್ಮಾನ
ಗಂಗೊಳ್ಳಿ(ಮೇ, 12) : ಗಂಗೊಳ್ಳಿಯ ಡಾ. ಬಿ ಆರ್ ಅಂಬೇಡ್ಕರ್ ಯುವಕ ಮಂಡಲ ಇದರ 38ನೇ ವಾರ್ಷಿಕೋತ್ಸವ ಮತ್ತು ಅಮೃತ ಯುವತಿ ಮಂಡಲ ಹಾಗೂ ಅರ್ಚನಾ ಮಹಿಳಾ ಮಂಡಲ ಇವುಗಳ 32ನೇ ವಾರ್ಷಿಕೋತ್ಸವದ ಅಂಗವಾಗಿ ಖ್ಯಾತ ಸಮಾಜ ಸೇವಕ ಈಶ್ವರ್ ಮಲ್ಪೆ ಅವರನ್ನು ಅವರ ಸ್ವಗೃಹದಲ್ಲಿ ಭೇಟಿ ಮಾಡಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಯುವಕ ಮಂಡಲದ ಗೌರವಾಧ್ಯಕ್ಷರಾದ ಭಾಸ್ಕರ್ ಎಚ್ ಜಿ, ಅಧ್ಯಕ್ಷ […]
ಗಂಗೊಳ್ಳಿ: ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮ
ಗಂಗೊಳ್ಳಿ(ಮೇ ,12) : ಹಳೆಯ ಸೋಲುಗಳ ಬಗ್ಗೆ ಚಿಂತಿಸುತ್ತ ಕೂರುವುದರ ಬದಲು ಮುಂದಿನ ಗೆಲುವುಗಳ ಬಗ್ಗೆ ಯೋಜನೆಯನ್ನು ಹಾಕಿಕೊಳ್ಳಬೇಕು. ಛಲ ಬದ್ಧತೆ ಮತ್ತು ಪರಿಶ್ರಮದಿಂದ ಹೊಸ ಚರಿತ್ರೆ ಸೃಷ್ಟಿಸಲು ಸಾಧ್ಯ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ವತಿಯಿಂದ ಮೇಲ್ ಗಂಗೊಳ್ಳಿಯ ಅಂಬೇಡ್ಕರ್ ಭವನದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಪುಸ್ತಕ […]
ನರೇಂದ್ರ ಎಸ್. ಗಂಗೊಳ್ಳಿಗೆ ಬಹುಮಾನ
ಕುಂದಾಪುರ ( ಮೇ ,09): ನಾನು ಮತ್ತು ನನ್ನ ಗೀಚು ಸಾಹಿತ್ಯ ಬಳಗವು ಹಮ್ಮಿ ಕೊಂಡಿದ್ದ ಯುಗಾದಿ – ವಿಷು ಹಬ್ಬ ವಿಶೇಷ ಗೀಚು ಕಥಾ ಸ್ಪರ್ಧೆ 2025ರಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಮತ್ತು ಲೇಖಕ ನರೇಂದ್ರ ಎಸ್ ಗಂಗೊಳ್ಳಿ ಅವರ ಕಥೆ “ಯಾರು ಒಳ್ಳೆಯವರು?’ ಅತ್ಯುತ್ತಮ ಕಥಾ ಬಹುಮಾನಕ್ಕೆ ಪಾತ್ರವಾಗಿದೆ. ಒಂದು ಸಂಪಾದಿತ ಕೃತಿ ಸೇರಿದಂತೆ ಒಟ್ಟು ಐದು ಪುಸ್ತಕಗಳನ್ನು ಬರೆದಿರುವ ನರೇಂದ್ರ […]
ಅಂಬೇಡ್ಕರ್ ಬದುಕು ಮತ್ತು ಸಾಧನೆ ಎಲ್ಲರಿಗೂ ಪ್ರೇರಣೆ : ನರೇಂದ್ರ ಎಸ್ ಗಂಗೊಳ್ಳಿ
ಗಂಗೊಳ್ಳಿ(ಎ ,14): ಅಂಬೇಡ್ಕರ್ ಅವರ ಬದುಕು ಹೋರಾಟ ಮತ್ತು ಸಾಧನೆ ಜಗತ್ತಿನ ಪ್ರತಿಯೊಬ್ಬರಿಗೂ ಪ್ರೇರಣೆ ನೀಡುವಂತದ್ದು ಈ ನಿಟ್ಟಿನಲ್ಲಿ ಅವರ ಬದುಕನ್ನು ಪ್ರತಿಯೊಬ್ಬರು ಅಧ್ಯಯನ ಮಾಡುವ ಅಗತ್ಯವಿದೆ ಎಂದು ಲೇಖಕ ಮತ್ತು ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಅಭಿಪ್ರಾಯ ಪಟ್ಟರು. ಅವರು ಭಾರತ ಸರ್ಕಾರ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ್ ನೆಹರು ಯುವ ಕೇಂದ್ರ ಉಡುಪಿ, ಡಾ. ಬಿ. ಆರ್ ಅಂಬೇಡ್ಕರ್ ಯುವಕ ಮಂಡಲ, ಅಮೃತ […]
ಗಂಗೊಳ್ಳಿ : ಶಿರಸಿ ಶ್ರೀ ಅಮ್ಮನವರಿಗೆ ರಜತ ಕಿರೀಟ ಮತ್ತು ರಜತ ಪ್ರಭಾವಳಿ ಸಮರ್ಪಣೆ
ಗಂಗೊಳ್ಳಿ(ಏ,07): ಇಲ್ಲಿನ ಬೈಲು ಮನೆಯಲ್ಲಿರುವ ಶಿರಸಿ ಶ್ರೀ ಅಮ್ಮನವರ ಮತ್ತು ಸಪರಿವಾರ ದೇವರುಗಳ ಸನ್ನಿಧಿಯಲ್ಲಿ ಇತ್ತೀಚೆಗೆ ಶಿರಸಿ ಶ್ರೀ ಅಮ್ಮನವರಿಗೆ ರಜತ ಕಿರೀಟ ಮತ್ತು ರಜತ ಪ್ರಭಾವಳಿ ಸಮರ್ಪಣಾ ಕಾರ್ಯಕ್ರಮವು ನೆರವೇರಿತು. ಶ್ರೀ ವೀರೇಶ್ವರ ದೇವಸ್ಥಾನದಿಂದ ಸನ್ನಿಧಾನದವರಿಗೆ ಮೆರವಣಿಗೆಯಲ್ಲಿ ಪೂರ್ಣ ಕುಂಭ ಸ್ವಾಗತದೊಂದಿಗೆ ರಜದ ಕಿರೀಟ ಮತ್ತು ರಜದ ಪ್ರಭಾವಳಿಯನ್ನು ತರಲಾಯಿತು. ಅರ್ಚಕರಾದ ರವೀಶ ಮತ್ತು ಬಳಗ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಸನ್ನಿಧಾನದ ಅರ್ಚಕರಾದ ಆನಂದ ಬಿಲ್ಲವ ಅವರು […]
ಗಂಗೊಳ್ಳಿ: ಬೈಲುಮನೆ ಶಿರಸಿ ಶ್ರೀ ಅಮ್ಮನವರಿಗೆ ರಜತ ಕಿರೀಟ ಮತ್ತು ರಜತ ಪ್ರಭಾವಳಿ ಸಮರ್ಪಣೆ
ಗಂಗೊಳ್ಳಿ(ಮಾ .25): ಬೈಲುಮನೆಯಲ್ಲಿರುವ ಶಿರಸಿ ಶ್ರೀ ಅಮ್ಮನವರಿಗೆ ರಜತ ಕಿರೀಟ ಮತ್ತು ರಜತ ಪ್ರಭಾವಳಿ ಸಮರ್ಪಣೆಯ ಕಾರ್ಯಕ್ರಮವು ಮಾರ್ಚ್ 30 ರಂದು ನಡೆಯಲಿದೆ. ಆ ಪ್ರಯುಕ್ತ ಬೆಳಗ್ಗೆ ಗಂಟೆ ಒಂಬತ್ತರಿಂದ ಸಾಮೂಹಿಕ ಪ್ರಾರ್ಥನೆ,ಶ್ರೀ ಗುರು ಗಣಪತಿ ಪೂಜೆ, ಪುಣ್ಯಾಹವಾಚನ, ಕಲಾಭಿವೃದ್ಧಿ ಹೋಮ, ತತ್ವ ಹೋಮ ಮತ್ತು ಇತರ ಧಾರ್ಮಿಕ ಕಾರ್ಯಕ್ರಮಗಳ ಜೊತೆ ಅನ್ನಸಂತರ್ಪಣೆ ಕೂಡ ನಡೆಯಲಿರುವುದು. ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಲಾಗಿದೆ.










