ಗಂಗೊಳ್ಳಿ( ನ.02): ನಮ್ಮ ಮಾತೃಭಾಷೆಯಾದ ಕನ್ನಡದ ಬಗೆಗೆ ನಿರಂತರವಾದ ಪ್ರೀತಿ ಕಾಳಜಿಯನ್ನು ಇಟ್ಟುಕೊಂಡು ಅದನ್ನು ನಿತ್ಯದ ಜೀವನದಲ್ಲಿ ಹೆಚ್ಚು ಬಳಸೋಣ ಎಂದು ನಿವೃತ್ತ ಪೋಸ್ಟ್ ಮಾಸ್ಟರ್ ಸೀತಾರಾಮ ಗಾಣಿಗ ಅಭಿಪ್ರಾಯಪಟ್ಟರು ಅವರು ಬೆಂಗಳೂರು ಹೋಟೆಲ್ ನ್ಯೂಸ್ ಮಾಸಪತ್ರಿಕೆ ಮತ್ತು ಕರ್ನಾಟಕ ಕರಾವಳಿ ನಾಗರಿಕ ಹಿತರಕ್ಷಣಾ ವೇದಿಕೆಯ ವತಿಯಿಂದ ಗಂಗೊಳ್ಳಿಯಲ್ಲಿ ನಡೆದ 68ನೇ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಂದು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಂಕರ ಜಿ.ಭಾಸ್ಕರ, ಲಕ್ಷ್ಮಣ, ಗುರು ಪಟೇಲ್, […]
Tag: narendra gangolli
ಗಂಗೊಳ್ಳಿ ಶಾರದೋತ್ಸವದಲ್ಲಿ ಸಂಜಿತ್ ಎಮ್ ದೇವಾಡಿಗರಿಂದ ಸ್ಯಾಕ್ಸೋಫೋನ್ ವಾದನ ಸೇವೆ
ಗಂಗೊಳ್ಳಿ(ಆ,27): ಸೇವಾ ಸಂಘ(ರಿ.) ಗಂಗೊಳ್ಳಿಯ 49 ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ವೇದಿಕೆಯಲ್ಲಿ ಗಂಗೊಳ್ಳಿಯ ಸ್ಯಾಕ್ಸೋಫೋನ್ ವಾದನದ ಬಹುಮುಖ ಬಾಲ ಪ್ರತಿಭೆ ಸಂಜಿತ್ ಎಮ್ ದೇವಾಡಿಗ ತಮ್ಮ ತಂಡದೊಂದಿಗೆ ಸ್ಯಾಕ್ಸೋಫೋನ್ ವಾದನ ಸೇವೆಯನ್ನು ಸಲ್ಲಿಸಿದರು. ಶಾರದೆ ದಯೆ ತೋರಿದೆ, ಡೀ ಡೀ ಆಡ್ಯಾನೇ ರಂಗ , ಆವ ಕುಲವೋ ರಂಗ, ಕಣ್ಣುಗಳೆರಡು ಸಾಲದಮ್ಮ, ಕಮಲದ ಮೊಗದೋಳೆ, ತುಳುವನಾಡ ಧರ್ಮ ತುಡರ್, ಎಂಥ ಅಂದ ಎಂಥ ಚಂದ, ತಂಬೂರಿ ಮೀಟಿದವ […]
ಪವರ್ ಲಿಫ್ಟಿಂಗ್ ನಲ್ಲಿ ವೈಷ್ಣವಿಗೆ ಎರಡು ಚಿನ್ನ
ಕುಂದಾಪುರ( ಆ,06): ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ಆಶ್ರಯದಲ್ಲಿ ಮಂಗಳೂರಿನಲ್ಲಿ ನಡೆದ ಪವರ್ ಲಿಫ್ಟಿಂಗ್ ಪಂದ್ಯಕೂಟದಲ್ಲಿ 69 ಕೆ.ಜಿ. ಸಬ್ ಜೂನಿಯರ್ ಬೆಂಚ್ ಪ್ರೆಸ್ ಕ್ಲಾಸಿಕ್ ಮತ್ತು ಇಕ್ವಿಪ್ದ್ ವಿಭಾಗದಲ್ಲಿ ಗಂಗೊಳ್ಳಿಯ ವೈಷ್ಣವಿ ಖಾರ್ವಿ ಅವರು ಪ್ರಥಮ ಸ್ಥಾನ ಪಡೆದು ಎರಡು ಚಿನ್ನದ ಪದಕಗಳನ್ನು ಗಳಿಸಿರುತ್ತಾರೆ. ಈಕೆ ಕುಂದಾಪುರದ ನ್ಯೂ ಹರ್ಕುಲಸ್ ಜಿಮ್ ನ ಸದಸ್ಯೆ. ತರಬೇತುದಾರ ಸತೀಶ್ ಖಾರ್ವಿ ಮತ್ತು ಕಾರ್ತಿಕ್ ಪೂಜಾರಿ ತರಬೇತಿ ನೀಡಿರುತ್ತಾರೆ. ಈಕೆ ಗಂಗೊಳ್ಳಿಯ […]
ಉಡುಪಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ : ಗಂಗೊಳ್ಳಿಯ ಸರಸ್ವತಿ ವಿದ್ಯಾಲಯಕ್ಕೆ ಅವಳಿ ಪ್ರಶಸ್ತಿ
ಗಂಗೊಳ್ಳಿ(ಸೆ,28): ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಮತ್ತು ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಬಾಲಕರ ಬಾಲ್ ಬ್ಯಾಡ್ಮಿಂಟನ್ ಮತ್ತು ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರ ಮತ್ತು ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ತಂಡಗಳು ಪ್ರಥಮ ಸ್ಥಾನಿಯಾಗಿ ಮೂಡಿಬಂದು ಅವಳಿ ಪ್ರಶಸ್ತಿಯನ್ನು ಗೆದ್ದುಕೊಂದಿದೆ. […]
ಉಡುಪಿ ಜಿಲ್ಲಾ ಮಟ್ಟದ ನೆಟ್ ಬಾಲ್ ಪಂದ್ಯಾಟ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ದ್ವಿತೀಯ
ಗಂಗೊಳ್ಳಿ(ಸೆ,28): ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪದವಿಪೂರ್ವ ಕಾಲೇಜು ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲಕರ ನೆಟ್ ಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಬಾಲಕರ ತಂಡದಲ್ಲಿ ವೀರೇಶ್, ಚರಣ್, ನಾಗರಾಜ್, ಆದಿತ್ಯ, ಶಮಿತ್, ಯುವರಾಜ್, ರಿತೇಶ್, ನವೀನ್ ಶರಣ್ ಮತ್ತು […]
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಹಿಂದಿ ದಿನಾಚರಣೆ
ಗಂಗೊಳ್ಳಿ( ಸೆ.16): ಭಾರತದಲ್ಲಿ ಅತಿ ಹೆಚ್ಚು ಜನರು ಮಾತನಾಡುವ ಭಾಷೆ ಹಿಂದಿ ಯಾಗಿದೆ. ಅದನ್ನು ನಮ್ಮ ರಾಷ್ಟ್ರಭಾಷೆ ಎನ್ನಲು ನಾವು ಹೆಮ್ಮೆ ಪಡಬೇಕು. ಹೊಸ ಭಾಷೆಗಳನ್ನು ಕಲಿಯುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಹಿರಿಯಡಕ ಸರಕಾರಿ ಪದವಿ ಪೂರ್ವ ಕಾಲೇಜಿನ ಹಿಂದಿ ಭಾಷಾ ಉಪನ್ಯಾಸಕರಾದ ಅನಂತರಾಮ ನಾಯಕ್ ಅಭಿಪ್ರಾಯ ಪಟ್ಟರು. ಅವರು ಕಳೆದ ಗುರುವಾರ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ […]
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಸಂವಿಧಾನ ಪೀಠಿಕೆ ಓದು
ಗಂಗೊಳ್ಳಿ(ಸೆ.15): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು, ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆ ಮತ್ತು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿನಿ ನಿಶಾ ಬಿ ಪೂಜಾರಿ ಪೀಠಿಕೆಯನ್ನು ವಾಚಿಸಿದರು. ಪ್ರಾಂಶುಪಾಲರು ಮುಖ್ಯೋಪಾ ದ್ಯಾಯರು ಉಪನ್ಯಾಸಕರು ಶಿಕ್ಷಕರು ಮತ್ತು ವಿದ್ಯಾರ್ಥಿ ವೃಂದ ಮತ್ತು ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸುನಿಧಿ ಜಿಲ್ಲಾಮಟ್ಟಕ್ಕೆ ಆಯ್ಕೆ
ಗಂಗೊಳ್ಳಿ(ಸೆ,14): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಸುನಿಧಿ ಇವರು ಕುಂದಾಪುರ ತಾಲೂಕು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರ ಕಬಡ್ಡಿ ತಂಡವನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಲು ಆಯ್ಕೆಯಾಗಿರುತ್ತಾರೆ. ಈಕೆ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಉಪ ಪ್ರಾಂಶುಪಾಲರಾದ ಉಮೇಶ್ ಕರಣಿಕ್ ಮತ್ತು ಸುಮನ ದಂಪತಿಯ ಪುತ್ರಿ .
ಶ್ರೇಯಾ ಮೇಸ್ತ ಜಿಲ್ಲಾಮಟ್ಟಕ್ಕೆ ಆಯ್ಕೆ
ಗಂಗೊಳ್ಳಿ( ಸೆ,14): ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಶ್ರೇಯಾ ಮೇಸ್ತ ಇವರು ಕುಂದಾಪುರ ತಾಲೂಕು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿಯರ ತ್ರೋಬಾಲ್ ತಂಡವನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಲು ಆಯ್ಕೆಯಾಗಿರುತ್ತಾರೆ. ಈಕೆ ನಾಗರಾಜ ಮೇಸ್ತ ಮತ್ತು ನಯನ ದಂಪತಿಯ ಪುತ್ರಿ.
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ನರೇಂದ್ರ ಎಸ್ ಗಂಗೊಳ್ಳಿಗೆ ಸನ್ಮಾನ
ಕುಂದಾಪುರ(ಸೆ.14): ತಮ್ಮ ಒಳಗಡೆ ಎಷ್ಟೇ ನೋವುಗಳಿದ್ದರೂ ಅದನ್ನು ತೋರಿಸಿಕೊಳ್ಳದೆ ಸದಾ ಜನರಲ್ಲಿ ನಗು ತುಂಬುವ ಛಾಯಾಚಿತ್ರಗ್ರಾಹಕರು ನಿಜವಾದ ಬದುಕಿನ ಸಾರ್ಥಕತೆಯ ಸಂದೇಶವನ್ನು ಜಗತ್ತಿಗೆ ತಿಳಿಸುವಂಥವರು. ಈ ಸ್ಪರ್ಧಾತ್ಮಕ ಯುಗದಲ್ಲಿಯೂ ಪರಿಣತಿ ಮತ್ತು ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಂಡು ಗ್ರಾಹಕರ ಮನ ಗೆಲ್ಲುವ ಮೂಲಕ ಅಡೆತಡೆಗಳನ್ನು ಮೀರಿ ಬೆಳೆದು ನಿಲ್ಲುವ ಸಾಮರ್ಥ್ಯವನ್ನು ತೋರಿರುವ ಛಾಯಾಗ್ರಾಹಕರ ನಡೆ ಅಭಿನಂದನೀಯ ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು ಯುವ ಬರಹಗಾರ […]