ಬೈಂದೂರು(ಸೆ,17): ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಹಿಂದುಳಿದ ವರ್ಗಗಳ ಮೋರ್ಚ ನಾರಾಯಣ ಗುರುಗಳ 170ನೇ ಜನ್ಮದಿನಾಚರಣೆ ಅಂಗವಾಗಿ ನಾಗೂರಿನಲ್ಲಿ ಏರ್ಪಡಿಸಿದ್ದ ನಾರಾಯಣ ಗುರುಗಳ ಚಿತ್ರ ಬಿಡಿಸುವ ಸ್ಪರ್ಧೆಯ ಆರು ಮತ್ತು ಏಳನೇ ತರಗತಿಯ ವಿಭಾಗದಲ್ಲಿ ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಮ್ ದೇವಾಡಿಗ ಪ್ರಥಮ ಸ್ಥಾನ ಗಳಿಸಿದ್ದಾರೆ. ಇವರು ಸ್ಯಾಕ್ಸೋಫೋನ್ ಕಲಾವಿದ ಮಾದವ ದೇವಾಡಿಗ ಮತ್ತು ಉಪನ್ಯಾಸಕಿ […]
Tag: narendra gangolli
ತ್ರೋ ಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪ್ರಥಮ
ಗಂಗೊಳ್ಳಿ(ಸೆ,15):ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಕೆಪಿಎಸ್ ಬಿದ್ಕಲ್ ಕಟ್ಟೆ ಇವರ ಜಂಟಿ ಆಶ್ರಯದಲ್ಲಿ ಬಿದ್ಕಲ್ ಕಟ್ಟೆಯಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತ್ರೋಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ವೀರೇಶ್ ಖಾರ್ವಿ ಶಮಿತ್ ಖಾರ್ವಿ, ಶರಣ್ ಎಸ್ ಪೂಜಾರಿ, ಯುವರಾಜ್ ಖಾರ್ವಿ, ಪ್ರೀತೇಶ್ ಖಾರ್ವಿ, ಕಾರ್ತಿಕ್ […]
ಭಾಷೆ ಭಾಂದವ್ಯ ಬೆಸೆಯುತ್ತದೆ- ಜಿ . ಎಮ್. ಗೊಂಡ
ಗಂಗೊಳ್ಳಿ ( ಸೆ.15): ಭಾಷೆ ನಮ್ಮ ನಡುವೆ ಭಾಂದವ್ಯ ಬೆಸೆಯುತ್ತದೆ. ದೇಶದ ಜನರ ಮನಸ್ಸುಗಳನ್ನು ಒಗ್ಗೂಡಿಸುವಲ್ಲಿ ಹಿಂದಿ ಭಾಷೆಯ ಪಾತ್ರ ಬಹಳ ಮಹತ್ವದ್ದಾಗಿದೆ ಎಂದು ಕುಂದಾಪುರದ ಭಂಡಾರಕರ್ಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗೋವಿಂದ ಗೊಂಡ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಹಿಂದಿ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಯ್ಯಫ್, ಸಂಜನಾ, ಲೇಖಾ, ಪ್ರಥ್ವಿ, ಝುವೈನ ಮತ್ತು ಮೆಹಕ್ […]
ತಾಲೂಕು ಮಟ್ಟದ ಕಬಡ್ಡಿಯಲ್ಲಿ ಸರಸ್ವತಿ ವಿದ್ಯಾಲಯಕ್ಕೆ ದ್ವಿತೀಯ ಸ್ಥಾನ
ಹೆಮ್ಮಾಡಿ(ಸೆ.07): ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಜನತಾ ಸ್ವತಂತ್ರ್ಯ ಪದವಿಪೂರ್ವ ಕಾಲೇಜು ಹೆಮ್ಮಾಡಿ ಇವರ ಜಂಟಿ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ. ಸಂಜನಾ ಖಾರ್ವಿ , ಸಹನಾ ಖಾರ್ವಿ, ಸುನಿಧಿ ಕರ್ಣಿಕ್, ಭೂಮಿಕಾ ಖಾರ್ವಿ , ಪೂಜಾ ಪೂಜಾರಿ, ನವ್ಯಶ್ರೀ ಕೋಟೆಗಾರ್, ಸನ್ನಿಧಿ […]
ಸರಸ್ವತಿ ವಿದ್ಯಾಲಯದಲ್ಲಿ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
ಕುಂದಾಪುರ ( ಆ,05): ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ಜರಗಿತು. ಉದ್ಘಾಟಕರಾಗಿ ಆಗಮಿಸಿದ ಉಡುಪಿ ಜಿಲ್ಲಾ ಎನ್ಎಸ್ಎಸ್ ಘಟಕದ ನೋಡಲ್ ಆಫೀಸರ್ ಡಾ. ಜಯಶಂಕರ ಕಂಗನಾರು ಮಾತನಾಡಿ ನಿಸ್ವಾರ್ಥ ಬದುಕು ಪ್ರತಿಯೊಬ್ಬರ ವ್ಯಕ್ತಿತ್ವಕ್ಕೂ ಮೆರುಗನ್ನು ನೀಡಿ ಹೆಚ್ಚಿನ ಸಂತೋಷವನ್ನು ನೀಡುತ್ತದೆ. ಹಾಗಾಗಿ ನಿಸ್ವಾರ್ಥಿಗಳಾಗಿ ಬದುಕಲು ಕಲಿಯಬೇಕು ಎಂದು ಅಭಿಪ್ರಾಯ ಪಟ್ಟರು. ಈ ಸಂದರ್ಭದಲ್ಲಿ ಕಳೆದ […]
ಹಿಂದಿ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ನಾರಾಯಣ ಈ ನಾಯ್ಕ್ ಆಯ್ಕೆ
ಉಡುಪಿ ( ಆ,26): ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಹಿಂದಿ ಉಪನ್ಯಾಸಕರ ಸಂಘದ 2024 -25 ನೇ ಶೈಕ್ಷಣಿಕ ಸಾಲಿನ ಅಧ್ಯಕ್ಷರಾಗಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರಾದ ನಾರಾಯಣ .ಇ . ನಾಯ್ಕ್ ಆಯ್ಕೆ ಆಗಿರುತ್ತಾರೆ. ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಭೋದಕ ಮತ್ತು ಬೋಧಕೇತರ ವರ್ಗ ಅವರನ್ನು ಅಭಿನಂದಿಸಿದೆ.
ಗಂಗೊಳ್ಳಿ : ಟೇಬಲ್ ಟೆನ್ನಿಸ್ ಆರ್ಯನ್ ವಿ ಕೆ ರಾಜ್ಯಮಟ್ಟಕ್ಕೆ ಆಯ್ಕೆ
ಉಡುಪಿ (ಆ,17): ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪೇರ್ವಾಜೆ ಕಾರ್ಕಳದಲ್ಲಿ ಇತ್ತೀಚೆಗೆ ನಡೆದ ಅಂಡರ್ 14 ವಯೋಮಾನದ ಪ್ರಾಥಮಿಕ ಶಾಲಾ ಬಾಲಕರ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಆರ್ಯನ್ ವಿ ಕೆ ದ್ವಿತೀಯ ಸ್ಥಾನವನ್ನು ಗಳಿಸುವ ಮೂಲಕ ಬೀದರ್ ನಲ್ಲಿ ನಡೆಯಲಿರುವ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾನೆ. ಇವನು ಉಪನ್ಯಾಸಕಿ ಸುಗುಣ ಆರ್ ಕೆ ಮತ್ತು ಪಶು […]
ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದ: ರೋವರ್ಸ್ & ರೇಂಜರ್ಸ್ ಘಟಕ ಉದ್ಘಾಟನೆ
ನಾವುಂದ (ಆ,19): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 15 ರಂದು ರೇಂಜರ್ಸ್ ರೋವರ್ಸ್ ಘಟಕವನ್ನು ಸ್ಕೌಟ್ ಗೈಡ್ಸ್ ಜಿಲ್ಲಾ ಸಂಸ್ಥೆಯ ಕಾರ್ಯದರ್ಶಿಯಾಗಿರುವ ಆನಂದ್ ಅಡಿಗ ಉದ್ಘಾಟಿಸಿದರು. ಸ್ಕೌಟ್ ಗೈಡ್ಸ್ ಬೈಂದೂರು ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ನರಸಿಂಹ ದೇವಾಡಿಗ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷರಾದ ಪ್ರವೀಣ್ ಪೂಜಾರಿ ಇವರು ಮುಖ್ಯ ಅತಿಥಿಗಳಾಗಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಎಂ ಮತ್ತು ಉಪ ಪ್ರಾಂಶುಪಾಲೆ ಶಶಿಕಲಾ […]
ಸರಕಾರಿ ಪದವಿ ಪೂರ್ವ ಕಾಲೇಜು ನಾವುಂದ:ಅಗ್ರಸ್ಥಾನಿಗೆ ನಗದು ಬಹುಮಾನ
ನಾವುಂದ(ಆ,13): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2023-24ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಾಲೇಜಿಗೆ ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದ ವಿದ್ಯಾರ್ಥಿನಿ ಕ್ಷಮಿತಾ ಜಿ ದೇವಾಡಿಗ ಅವರಿಗೆ 1995 -96ನೇ ಸಾಲಿನ ಕಾಲೇಜಿನ ವಿಜ್ಞಾನ ವಿಭಾಗದ ಹಳೆಯ ವಿದ್ಯಾರ್ಥಿಗಳು ನೀಡಿದ 15000 ರೂಪಾಯಿ ಪ್ರೋತ್ಸಾಹ ಧನವನ್ನು ಕಾಲೇಜಿನಲ್ಲಿ ವಿತರಿಸಲಾಯಿತು. ಹಳೆ ವಿದ್ಯಾರ್ಥಿಗಳ ಪರವಾಗಿ ಮಣಿಪಾಲದ ನವಿತಾಸ್ ಲೈಫ್ ಸೈನ್ಸ್ ನಲ್ಲಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯ ಹಳೆ ವಿದ್ಯಾರ್ಥಿ […]
ಗಂಗೊಳ್ಳಿ: ಬಿಲ್ಲವರ ಹಿತರಕ್ಷಣಾ ವೇದಿಕೆ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ
ಗಂಗೊಳ್ಳಿ (ಜು,27): ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಲಿಕೆಯ ಜೊತೆ ಜೊತೆಗೆ ಮಕ್ಕಳನ್ನು ಸಂಸ್ಕಾರದ ಮೌಲ್ಯಗಳೊಂದಿಗೆ ಬೆಳೆಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಹೆತ್ತವರು ಮತ್ತು ಶಿಕ್ಷಕರ ಜವಾಬ್ದಾರಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕುಂದಾಪುರದ ಡಾ. ಬಿ ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ .ಕೆ. ಉಮೇಶ್ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ಮೂರನೇ ವಾರ್ಷಿಕ […]










