ಗಂಗೊಳ್ಳಿ(ಜು,21): ಇಲ್ಲಿನ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ ಮತ್ತು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇತಿಹಾಸ ವಿಭಾಗದ ಉಪನ್ಯಾಸಕರಾಗಿ 34 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ ವಯೋನಿವೃತ್ತಿ ಹೊಂದಿದ ಹೆಚ್ ಭಾಸ್ಕರ ಶೆಟ್ಟಿ ಮತ್ತು ನಿವೃತ್ತಿಯ ಬಳಿಕ ಎರಡು ವರ್ಷಗಳ ಕಾಲ ದೈಹಿಕ ಶಿಕ್ಷಣ ಉಪನ್ಯಾಸಕರಾಗಿ ವಿಶೇಷ ಸೇವೆಯನ್ನು ಸಲ್ಲಿಸಿದ ನಾಗರಾಜ ಶೆಟ್ಟಿ ಅವರ ಬೀಳ್ಕೊಡುಗೆ ಸಮಾರಂಭವು ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ […]
Tag: narendra gangolli
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ಆರಂಭೋತ್ಸವ
ಗಂಗೊಳ್ಳಿ(ಜು,17): ಯಾವುದೇ ವ್ಯಕ್ತಿ ಯಶಸ್ಸನ್ನು ಕಾಣಲು ಪರಿಶ್ರಮ ಮತ್ತು ಶಿಸ್ತು ಬಹಳ ಮುಖ್ಯ. ವಿದ್ಯಾರ್ಥಿಗಳು ಶಾಲೆಯ ಕಲಿಕೆಯ ಜೊತೆಯಲ್ಲಿ ಸ್ವಯಂ ಪರಿಶ್ರಮದಿಂದ ಜ್ಞಾನವನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕು ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಕಾರ್ಯದರ್ಶಿ ಸದಾಶಿವ ನಾಯಕ್ ಎನ್ ಅಭಿಪ್ರಾಯಪಟ್ಟರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಕನ್ನಡ ಉಪನ್ಯಾಸಕ ಹೆಚ್ ಸುಜಯೀoದ್ರ ಹಂದೆ […]
ಗಂಗೊಳ್ಳಿ: ರಕ್ತದಾನ ಶಿಬಿರ
ಗಂಗೊಳ್ಳಿ (ಜು,14): ಇಲ್ಲಿನ ಯಕ್ಷಭಿಮಾನಿ ರಕ್ತದಾನಿ ಬಳಗ ಗಂಗೊಳ್ಳಿ, ಮೀನುಗಾರರ ಸಂಘ ರಿ. ಗಂಗೊಳ್ಳಿ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.), ಉಡುಪಿ ,ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ರಿ. ಕುಂದಾಪುರ ಇವರ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ಜೂನ್ .11 ರಂದು ವಿಜಯ ವಿಠಲ ಸಭಾಭವನದಲ್ಲಿ ನಡೆಯಿತು. ಶಿಬಿರದಲ್ಲಿ 69 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಗಂಗೊಳ್ಳಿ: ಸರಸ್ವತಿ ವಿದ್ಯಾಲಯಕ್ಕೆ ಮತ್ತೆ ಎರಡು ರ್ಯಾಂಕ್
ಗಂಗೊಳ್ಳಿ(ಮೇ,26): ಪಿಯುಸಿ ಎರಡನೇ ಹಂತದ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಅಗ್ರ 10 ರ್ಯಾಂಕ್ ಗಳಲ್ಲಿ ಸ್ಥಾನ ಪಡೆಯುವ ಮುಖೇನ ಒಟ್ಟಾರೆ ಮೂರು ರ್ಯಾಂಕ್ಗಳನ್ನು ಕಾಲೇಜು ಗಳಿಸಿಕೊಂಡಿದೆ. ವಿಜ್ಞಾನ ವಿಭಾಗದಲ್ಲಿ 600ರಲ್ಲಿ 591 ಅಂಕಗಳನ್ನು ಪಡೆದ ಹರ್ಷಿತಾ ಎಸ್ ಪೂಜಾರಿ ಎಂಟನೇ ರ್ಯಾಂಕ್ ಗಳಿಸಿದರೆ ಇಂಚರ ಆರ್ ದೇವಾಡಿಗ 600 ರಲ್ಲಿ 589 ಅಂಕಗಳನ್ನು ಪಡೆದು ರಾಜ್ಯಮಟ್ಟದಲ್ಲಿ ಹತ್ತನೇ […]
ಬಿಲ್ಲವರ ಹಿತರಕ್ಷಣಾ ವೇದಿಕೆ ಗಂಗೊಳ್ಳಿ:ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಗಂಗೊಳ್ಳಿ(ಮೇ,23):ಗಂಗೊಳ್ಳಿಯಲ್ಲಿ ವಾಸ್ತವ್ಯವಿರುವ ಮತ್ತು ಗಂಗೊಳ್ಳಿಯ ಪ್ರೌಢ ಶಾಲೆಯಲ್ಲಿ ಕಲಿತು 2023-24 ನೇ ಸಾಲಿನ ಎಸ್ಸೆಸ್ಸೆಲ್ಸಿ ಪ್ರಥಮ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 70 ಕ್ಕೂ ಅಧಿಕ ಅಂಕ ಗಳಿಸಿರುವ ಬಿಲ್ಲವ ಸಮುದಾಯದ ವಿದ್ಯಾರ್ಥಿಗಳು ಮತ್ತು ಪ್ರಸ್ತುತ ಗಂಗೊಳ್ಳಿಯ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿರುವ 2023-24 ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 70 ಕ್ಕೂ ಅಧಿಕ ಅಂಕ ಗಳಿಸಿರುವ ಬಿಲ್ಲವ ಸಮುದಾಯದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ […]
ಪಂಚ ಗಂಗಾವಳಿ ಬಳಗ ಗಂಗೊಳ್ಳಿ: 30ನೇ ವಾರ್ಷಿಕೋತ್ಸವ ಸಮಾರಂಭ
ಗಂಗೊಳ್ಳಿ( ಜ,30): : ಉತ್ತಮ ವಿಚಾರಗಳನ್ನು ಪ್ರೋತ್ಸಾಹಿಸಲು ನಾವು ಸದಾ ಸಿದ್ಧರಿರಬೇಕು. ಆಗ ಮಾತ್ರ ಉತ್ತಮ ಸಮಾಜದ ನಿರ್ಮಾಣವಾಗಲು ಸಾಧ್ಯ ಎಂದು ಉಡುಪಿ ಕರ್ನಾಟಕ ಬ್ಯಾಂಕ್ ಶಾಖೆಯ ಸೀನಿಯರ್ ಮ್ಯಾನೇಜರ್ ರವೀಂದ್ರ ಶ್ಯಾನುಭಾಗ್ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ ಗಂಗೊಳ್ಳಿಯಲ್ಲಿ ನಡೆದ ಪಂಚಗಂಗಾವಳಿ ಬಳಗದ 30ನೇ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಮಾತನಾಡಿ ಸಾಂಸ್ಕೃತಿಕ […]
ಗಂಗೊಳ್ಳಿ: ಶಿಕ್ಷಕ ಉಮೇಶ್ ಕರ್ಣಿಕ್ ಬೀಳ್ಕೊಡುಗೆ ಸಮಾರಂಭ
ಗಂಗೊಳ್ಳಿ( ಜ.08): ಇಲ್ಲಿನ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ 24 ವರ್ಷ ಹಾಗೂ ಉಪ ಪ್ರಾಂಶುಪಾಲರಾಗಿ ಆರು ವರ್ಷ ಸೇವೆ ಸಲ್ಲಿಸಿದ್ದು ಮಾತ್ರವಲ್ಲದೆ 20 ವರ್ಷಗಳ ಕಾಲ ಎನ್ ಸಿ ಸಿ ಅಧಿಕಾರಿಯಾಗಿ ಕಾರ್ಯವನ್ನು ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಉಮೇಶ್ ಕರ್ಣಿಕ್ ಎಸ್ ಅವರ ಬೀಳ್ಕೊಡುಗೆ ಸಮಾರಂಭವು ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು. ಜಿಎಸ್ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ […]
ಗಂಗೊಳ್ಳಿಯಲ್ಲಿ ಮನ ಸೆಳೆದ ಮೃಡ ನಾಟಕ
ಗಂಗೊಳ್ಳಿ(ಡಿ.22): ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದ ಅಂಗವಾಗಿ ಇಲ್ಲಿನ ವಿದ್ಯಾರ್ಥಿಗಳು ಅಭಿನಯಿಸಿದ “ಮೃಡ” – ಒಂದು ಸತ್ಯದ ಕಥೆ ನಾಟಕ ತನ್ನ ಭಿನ್ನವೆನಿಸುವ ಕಥಾ ವಸ್ತು ಮತ್ತು ವಿಶೇಷ ಪ್ರಸ್ತುತಿಯಿಂದ ಗಮನ ಸೆಳೆಯಿತು. ಮರಣ ಹೊಂದುವ ಮೊದಲು ಶಿವನನ್ನು ನೋಡಬೇಕು ಆ ಮೂಲಕ ಜನರ ಕಣ್ಣಲ್ಲಿ ಆರಾಧಿಸಲ್ಪಡಬೇಕು ಎನ್ನುವ ಬಯಕೆಯೊಂದಿಗೆ ಶಿವನನ್ನು ನೋಡ ಹೊರಟ ಚಾರುಕೀರ್ತಿ ಎನ್ನುವ ಧನಿಕ ಅಂತಿಮವಾಗಿ ತನ್ನ ತಪ್ಪುಗಳಿಗೆ ಅಹಂಕಾರಕ್ಕೆ ಬಲಿಯಾಗುವ […]
ಕುಂದಾಪುರ: ಗಮಕ ವಾಚನ ವ್ಯಾಖ್ಯಾನ
ಕುಂದಾಪುರ( ಡಿ,4): ಪುರಾಣ ಹಾಗೂ ಆಧುನಿಕ ಕಾವ್ಯಗಳ ಸುಲಭ ಅರ್ಥೈಸುವಿಕೆಗೆ ಗಮಕ ಕಲೆ ಪೂರಕವಾದುದು. ಕಾವ್ಯಗಳಲ್ಲಿನ ಸಾಂದರ್ಭಿಕವಾದ ಸಾಹಿತ್ಯ ಶ್ರೀಮಂತಿಕೆಗೆ ರಸಬದ್ಧವಾದ ರಾಗಗಳ ಸಂಯೋಜನೆಯಿಂದ ಶೋತೃಗಳಿಗೆ ಹೃದ್ಯವಾಗುತ್ತದೆ. ಮನೆಮನೆಗಳಲ್ಲಿ ಗಮಕ ಕಲೆ ಪ್ರಸ್ತುತಗೊಳ್ಳಬೇಕು ಯುವ ಮನಸುಗಳನ್ನು ಅರಳಿಸಬೇಕು ಎಂದು ಕುಂದಾಪುರದ ಖ್ಯಾತ ನ್ಯಾಯವಾದಿ ಎ ಎಸ್ ಎನ್ ಹೆಬ್ಬಾರ್ ಅಭಿಪ್ರಾಯಪಟ್ಟರು. ಅವರು ಕುಂದಾಪುರದ ‘ನುಡಿ’ ಯಲ್ಲಿ ಕರ್ನಾಟಕ ಗಮಕ ಕಲಾ ಪರಿಷತ್ತು ಉಡುಪಿ ಜಿಲ್ಲೆ ಮತ್ತು ಕರ್ನಾಟಕ ಗಮಕ ಕಲಾ […]
ವೈಷ್ಣವಿ ಖಾರ್ವಿಗೆ ರಾಷ್ಟ್ರ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ
ಕುಂದಾಪುರ ( ನ.29): ಬೆಂಗಳೂರಿನಲ್ಲಿ ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಷನ್ ಆಶ್ರಯದಲ್ಲಿ ನಡೆದ ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್ ಇಕ್ಯುಪ್ಡ್ ಬೆಂಚ್ ಪ್ರೆಸ್ ಸ್ಪರ್ಧೆಯ 69 ಕೆಜಿ ಸಬ್ ಜೂನಿಯರ್ ವಿಭಾಗದಲ್ಲಿ ಗಂಗೊಳ್ಳಿಯ ವೈಷ್ಣವಿ ಖಾರ್ವಿ ಗಂಗೊಳ್ಳಿ ಇವರು ತೃತೀಯ ಸ್ಥಾನವನ್ನು ಪಡೆದು ಕಂಚಿನ ಪದಕವನ್ನು ಗಳಿಸಿರುತ್ತಾರೆ. ಈಕೆ ಕುಂದಾಪುರದ ನ್ಯೂ ಹರ್ಕ್ಯುಲೆಸ್ ಜಿಮ್ (ರಿ )ಹಾಗೂ ಕಿಂಗ್ ಫಿಷರ್ ಸ್ಪೋರ್ಟ್ಸ್ ಕ್ಲಬ್( ರಿ ) ಈ ಸಂಸ್ಥೆಯ ಸದಸ್ಯರಾಗಿದ್ದು ಗಂಗೊಳ್ಳಿಯ […]










