ಕುಂದಾಪುರ(ಆ,03): ವಿದ್ಯಾರ್ಥಿಗಳು ರೆಡ್ ಕ್ರಾಸ್ ಘಟಕದ ತತ್ವಗಳ ಬಗ್ಗೆ ಸರಿಯಾದ ತಿಳುವಳಿಕೆ ಪಡೆದು ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಮನೋಪ್ರವೃತ್ತಿ ಬೆಳೆಸಿಕೊಳ್ಳಬೇಕು. ಪ್ರಾಕೃತಿಕ ವಿಕೋಪಗಳಲ್ಲಿ ಸಂತ್ರಸ್ತರಿಗೆ ಸ್ವಯಂ ಪ್ರೇರಿತರಾಗಿ ನಿಸ್ವಾರ್ಥ ನೆರವು ನೀಡಲು ಮುಂದಾಗಬೇಕು ಎಂದು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇದರ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಹೇಳಿದರು. ಅವರು ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಜ್ಯೂನಿಯರ್ ರೆಡ್ ಕ್ರಾಸ್ ಘಟಕವನ್ನು ಉದ್ಘಾಟಿಸುವುದರ ಮೂಲಕ ಕರೆ ನೀಡಿದರು. […]
Tag: r n shetty pu college
ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು,ಕುಂದಾಪುರ: ಮಾದಕ ವಸ್ತು- ವ್ಯಸನದ ದುಷ್ಪರಿಣಾಮಗಳ ಕುರಿತು ಉಪನ್ಯಾಸ
Views: 211
ಕುಂದಾಪುರ(ಜೂ,27): ಮಾದಕವಸ್ತು ಸೇವನೆಯು ಯುವಜನತೆಯ ಭವಿಷ್ಯಕ್ಕೆ ಮಾರಕವಾಗಿದೆ.ಈ ವ್ಯಸನದಿಂದ ಸಂಪೂರ್ಣ ದೂರವಿರುವ ಜೊತೆಗೆ ಮಾದಕ ವ್ಯಸನ ಸಂಬಂಧಿತ ಪ್ರಬಲ ಕಾನೂನುಗಳ ಕುರಿತು ಅರಿವು ಹೊಂದಿರಬೇಕು ಎಂದು ಕುಂದಾಪುರದ ಪೋಲಿಸ್ ಠಾಣಾಧಿಕಾರಿ ಶ್ರೀ ಸದಾಶಿವ ಗವರೋಜಿ ಹೇಳಿದರು. ಅವರು ಕುಂದಾಪುರದ ಆರ್. ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಅಂತರರಾಷ್ಟ್ರೀಯ ಮಾದಕವ್ಯಸನ ವಿರೋಧಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕರೆ ನೀಡಿದರು. ಕಾರ್ಯಕ್ರಮದ […]