ಕುಂದಾಪುರ:(ಜು,19): ವೃತ್ತಿಪರ ವಿದ್ಯೆಯಲ್ಲಿ ಪರಿಣತಿಯನ್ನು ಪಡೆದು ತನ್ನ ಬೆಳವಣಿಗೆಯ ಮೂಲಕ ಇತರರ ಯಶಸ್ಸಿಗೂ ಸಹಕಾರಿಯಾಗಬೇಕು. ಈ ರೀತಿಯಲ್ಲಿ ವಿದ್ಯಾರ್ಥಿಗಳು ಎಳೆ ಪ್ರಾಯದಿಂದಲೇ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಜೆ.ಸಿ. ಐ ಉಪ್ಪುಂದ ಇದರ ವತಿಯಿಂದ ಕುಂದಾಪುರದ ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜೆ.ಸಿ ವಲಯ XV ರ ತರಬೇತುದಾರರಾದ ಡಾ. ಜಗದೀಶ್ ಜೋಗಿ ಇವರು ಕರೆ ನೀಡಿದರು. […]
Tag: rns pu
ಆರ್.ಎನ್.ಶೆಟ್ಟಿ ಪಿ. ಯು ಕಾಲೇಜು ಕುಂದಾಪುರ : ಶಾಸ್ತ್ರೀಯ ನೃತ್ಯದಲ್ಲಿ ರಾಷ್ಟ್ರಮಟ್ಟದ ಸಾಧನೆ
ಕುಂದಾಪುರ(ಜು,3): ಇಲ್ಲಿನ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿರುವ ಕುಮಾರಿ ಪೂರ್ವಿಕಾ ಇವರು ಪ್ರಭಾತ್ ಕಲಾವಿದರ ತಂಡ ಗೋಪಿನಾಥ್ ನ್ಯಾಸ-2023 ವತಿಯಿಂದ ಬೆಂಗಳೂರಿನಲ್ಲಿಆಯೋಜಿಸಲ್ಪಟ್ಟ ರಾಷ್ಟ್ರ ಮಟ್ಟದ ಶಾಸ್ತ್ರೀಯ ನೃತ್ಯ ಮತ್ತು ಸಂಗೀತ ಸ್ಪರ್ಧೆಗಳ ಭರತನಾಟ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಪರ್ಯಾಯ ಪಾರಿತೋಷಕವನ್ನು ಗಳಿಸಿರುತ್ತಾರೆ. ಕು.ಪೂರ್ವಿಕಾ ಇವರು ವಿದುಷಿ ಪ್ರವಿತ ಮತ್ತು ಅಶೋಕ್ ಕುಮಾರ್ ರವರ ಪುತ್ರಿ. ಪೂರ್ವಿಕಾಳ ಈ ಅಮೋಘ ನೃತ್ಯಸಾಧನೆಯನ್ನು ಮೆಚ್ಚಿ, […]
ಕುಂದಾಪುರ : ಉಚಿತ ಮೂಳೆ ಸಾಂದ್ರತೆ ಹಾಗೂ ವೈದ್ಯಕೀಯ ತಪಾಸಣೆ ಶಿಬಿರ
ಕುಂದಾಪುರ(ಮಾ.06): ಶಿವಾನಿ ಡಯಾಗ್ನೋಸ್ಟಿಕ್ & ರಿಸರ್ಚ್ ಸೆಂಟರ್, ನವ್ಯ ಚೇತನ ಶಿಕ್ಷಣ ಸಂಶೋಧನೆ ಮತ್ತು ಕಲ್ಯಾಣ ಟ್ರಸ್ಟ್, ಲಯನ್ಸ್ ಕ್ಲಬ್ ಕುಂದಾಪುರ ಮತ್ತು ಫಾರ್ಮೆಡ್ ಲಿಮಿಟೆಡ್ ಬೆಂಗಳೂರು, ಇವರ ಜಂಟಿ ಆಶ್ರಯದಲ್ಲಿ ಉಚಿತ ಮೂಳೆ ಸಾಂದ್ರತೆ ಮತ್ತು ವೈದ್ಯಕೀಯ ತಪಾಸಣೆ ಶಿಬಿರ ಇಂದು ಕುಂದಾಪುರದ ಶಿವಾನಿ ಡಯಾಗ್ನೋಸ್ಟಿಕ್ ಆವರಣದಲ್ಲಿ ನಡೆಯಿತು. ಶ್ರೀದೇವಿ ನರ್ಸಿಂಗ್ ಹೋಮ್ ಕುಂದಾಪುರದ ರ್ದೇಶಕರಾದ ಡಾ. ರವೀಂದ್ರ ರಾವ್ ರವರು ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಇಂತಹ ಆರೋಗ್ಯ […]
ಆರ್. ಎನ್. ಶೆಟ್ಟಿ ಪಿ ಯು ಕಾಲೇಜು: ಭರತನಾಟ್ಯದಲ್ಲಿ ರಾಜ್ಯಮಟ್ಟದ ಸಾಧನೆ
ಕುಂದಾಪುರ( ಜ,01): ಇಲ್ಲಿನ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪೂರ್ವಿಕಾ ರಾಜ್ಯಮಟ್ಟದ ಕಲೋತ್ಸವ 2022 ಸ್ಪರ್ಧೆಯ ಭರತನಾಟ್ಯ ವಿಭಾಗದಲ್ಲಿ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನಗಳಿಸಿರುತ್ತಾಳೆ. ಪೂರ್ವಿಕಾಳ ಈ ಕಲಾಸಾಧನೆಗೆ ಕಾಲೇಜಿನ ಸಂಚಾಲಕರಾದ ಶ್ರೀ ಬಿ.ಎಮ್. ಸುಕುಮಾರ್ ಶೆಟ್ಟಿ ಯವರು, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ್ ಶೆಟ್ಟಿಯವರು ಹಾಗೂ ಬೋಧಕ- ಬೋಧಕೇತರ ಸಿಬ್ಬಂಧಿಗಳು ಅಭಿನಂದಿಸಿದ್ದಾರೆ.
ಆರ್.ಎನ್.ಶೆಟ್ಟಿ ಪಿ ಯು ಕಾಲೇಜಿನ ವಿದ್ಯಾರ್ಥಿನಿಯರು ಫೀಲ್ಡ್ ಇವೆಂಟ್ ಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಕುಂದಾಪುರ(ಡಿ,4): ಇಲ್ಲಿನ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ವಿವಿಧ ಕ್ಷೇತ್ರ ಕ್ರೀಡೆ( ಫೀಲ್ಡ್ ಇವೆಂಟ್) ಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಶೆರಿಲ್ ಡಿಸೋಜಾ ಇವರು ಶಾಟ್ ಪುಟ್ ತ್ರೋ ನಲ್ಲಿ, ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಶ್ರಾವ್ಯ ಜ್ಯಾವೆಲಿನ್ ತ್ರೋನಲ್ಲಿ ಹಾಗೂ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ಸಂಹಿತಾ. ಕೆ. ಶೆಟ್ಟಿ ಹ್ಯಾಮರ್ ತ್ರೋ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ […]
ಆರ್. ಎನ್. ಶೆಟ್ಟಿ ಪಿ ಯು ಕಾಲೇಜಿನ ಪೂರ್ವಿಕಾ ಪ್ರತಿಭಾ ಕಾರಂಜಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಕುಂದಾಪುರ(ಡಿ,4): ಇಲ್ಲಿನ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪೂರ್ವಿಕಾ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಭರತನಾಟ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಭರತನಾಟ್ಯ ಕಲಾವಿದೆ ಪೂರ್ವಿಕಾಳ ಈ ಸಾಧನೆಯನ್ನು ಮೆಚ್ಚಿ ಕಾಲೇಜಿನ ಸಂಚಾಲಕರಾದ ಶ್ರೀ ಬಿ. ಎಮ್. ಸುಕುಮಾರ್ ಶೆಟ್ಟಿಯವರು, ಆಡಳಿತ ಮಂಡಳಿ ಸದಸ್ಯರು […]
ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು: ಉಪನ್ಯಾಸ ಕಾರ್ಯಕ್ರಮ
ಕುಂದಾಪುರ(ನ,24): ಇಲ್ಲಿನ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಬಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ ಚಾರ್ಟರ್ಡ್ ಎಕೌಟಂಟ್ ಚಿತ್ತೂರು ಶ್ರೀ ಗುರುರಾಜ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ಮುಂದಿನ ವ್ಯಾಸಂಗದಲ್ಲಿ ಮತ್ತು ಔದ್ಯೋಗಿಕ ವಲಯಗಳಲ್ಲಿರುವ ವಿಫುಲವಾದ ಅವಕಾಶಗಳು ಮತ್ತು ಅವುಗಳನ್ನು ಲಭಿಸಿಕೊಳ್ಳುವುದರ ವಿವಿಧ ವಿಧಾನಗಳ ಬಗ್ಗೆ ಸವಿವರವಾದ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ಸ್ವಾಗತಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ದೀಪಾ […]
ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು ಕುಂದಾಪುರ: ವಾರ್ಷಿಕ ಕ್ರೀಡಾಕೂಟ
ಕುಂದಾಪುರ (ನ,15): ಇವತ್ತಿನ ನಮ್ಮ ದೈನಂದಿನ ಜೀವನದಲ್ಲಿ ದೇಹದಂಡನೆ ಕಡಿಮೆಯಾಗಿರುವುದರಿಂದ ವ್ಯವಸ್ಥಿತವಾದ ತರಬೇತಿ ಆಧರಿತ ಕ್ರೀಡೆಯ ಅಗತ್ಯವಿದೆ. ದಿನ ನಿತ್ಯವೂ ಅಲ್ಪ ಸಮಯವನ್ನಾದರೂ ನಾವು ದೇಹಬಲವನ್ನು ಹೆಚ್ಚಿಸುವಂಥ ಕಾರ್ಯಗಳಿಗೆ ನೀಡಬೇಕು” ಎಂದು ಕುಂದಾಪುರ ತಾಲೂಕು ಯುವಸಬಲೀಕರಣ ಮತ್ತು ಕ್ರೀಡಾಧಿಕಾರಿಯವರಾದ ಶ್ರೀ ಕುಸುಮಾಕರ ಶೆಟ್ಟಿಯವರು ಹೇಳಿದರು . ಅವರು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ […]
ಕುಂದಾಪುರ: ಆರ್. ಎನ್.ಶೆಟ್ಟಿ ಪಿ ಯು ಕಾಲೇಜಿಗೆ ಶ್ರೀ ಸುನೀಲ್ ಆರ್ .ಎನ್ ಶೆಟ್ಟಿ ಭೇಟಿ
ಕುಂದಾಪುರ( ನ,4): ಇಲ್ಲಿನ ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ಮಹಾಪೋಷಕರಾದ ದಿ. ಆರ್. ಎನ್. ಶೆಟ್ಟಿಯವರ ಪುತ್ರ ಶ್ರೀ ಸುನೀಲ್ ಶೆಟ್ಟಿಯವರು ನ.04 ರಂದು ಕಾಲೇಜಿಗೆ ಭೇಟಿ ನೀಡಿದರು. ಸಂಸ್ಥೆಯ ಸಂಚಾಲಕರಾದ ಶ್ರೀ ಬಿ.ಎಮ್. ಸುಕುಮಾರ್ ಶೆಟ್ಟಿಯವರು ಶ್ರೀ ಸುನೀಲ್ ಶೆಟ್ಟಿಯವರನ್ನು ಪುಷ್ಪಗುಚ್ಛ ನೀಡಿ ಸ್ವಾಗತಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ಉಪಸ್ಥಿತರಿದ್ದರು.
ಕುಂದಾಪುರ: ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ತಂಬಾಕು ಸೇವನೆ ನಿಯಂತ್ರಣಾ ಮಾಹಿತಿ ಕಾರ್ಯಕ್ರಮ
ಕುಂದಾಪುರ(ಸೆ,23): ಹದಿಹರೆಯವೆನ್ನುವುದು ತಂಬಾಕು ಸೇವಿಸಬೇಕೆನ್ನುವ ಆಮಿಷಗಳಿಗೆ ಒಳಗಾಗುವ ಆರಂಭಿಕ ಹಂತ. ವೈಯುಕ್ತಿಕ ಆರೋಗ್ಯದ ಮೇಲೆ ತಂಬಾಕು ಸೇವನೆ ಬೀರುವ ಅಪಾಯಕಾರಿ ಪರಿಣಾಮಗಳ ಬಗ್ಗೆ ಯುವಜನರು ಗಂಭೀರವಾಗಿ ಯೋಚಿಸಿ, ಆರೋಗ್ಯ ಇಲಾಖೆ ಹೊರಡಿಸುವ ಮುನ್ನೆಚ್ಚರಿಕಾ ಮಾಹಿತಿಗಳು ಸಂದೇಶಗಳನ್ನು ಚೆನ್ನಾಗಿ ಮನಗಂಡು ತಂಬಾಕು- ಮುಕ್ತ ಸಮಾಜ ಸೃಷ್ಟಿಯಾಗಬೇಕು” ಎಂದು ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಅಂಗವಾಗಿ ಉಡುಪಿ ಜಿಲ್ಲಾ ತಂಬಾಕು ನಿಯಂತ್ರಣ ಸೆಲ್ […]