ಶಿರ್ವ(ಜ.29): ಸಂತ ಮೇರಿ ಮಹಾವಿದ್ಯಾಲಯದ 73ನೆ ಗಣರಾಜ್ಯೋತ್ಸವ ದಿನಾಚರಣೆ ಕಾಲೇಜಿನ ಎನ್.ಸಿ.ಸಿಯ ಭೂಯುವ ಸೇನಾದಳ ನೇತೃತ್ವದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಪ್ರೌಢಶಾಲೆಯ ಮುಖೋಪಾಧ್ಯಾಯರಾದ ಶ್ರೀ ಗಿಲ್ಬರ್ಟ್ ಪಿಂಟೋರವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ಇಂದು ಈ ಗಣರಾಜ್ಯೋತ್ಸವ ದಿನಾಚರಣೆಯನ್ನು 75ನೇ ಸ್ವಾತಂತ್ರ್ಯ ಅಮೃತಮಹೋತ್ಸವ ಪ್ರಯುಕ್ತ ಸರ್ಕಾರದ ಆದೇಶದಂತೆ ಶಾಲಾ-ಕಾಲೇಜಿನಲ್ಲಿ ಕೋವಿಡ್ 19 ರ ಮಾರ್ಗಸೂಚಿ ಅನ್ವಯ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರವರ ಭಾವಚಿತ್ರದೊಂದಿಗೆ ಆಚರಿಸುತ್ತಿದ್ದೇವೆ. ಇಂದು ನಮ್ಮ ರಾಷ್ಟ್ರ […]
Tag: shirva
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಸ್ವಚ್ಛತಾ ಅಭಿಯಾನ
ಶಿರ್ವ(ಜ.29):73 ನೇ ಗಣರಾಜ್ಯೋತ್ಸವ ದಿನದಂದು ಶಿರ್ವ-ಮಂಚಕಲ್ ಲಯನ್ಸ್ ಕ್ಲಬ್ ಹಾಗೂ ಶಿರ್ವ ಸಂತ ಮೇರಿ ಕಾಲೇಜಿನ ಎನ್ ಸಿ ಸಿ, ಎನ್ ಎಸ್ ಎಸ್, ರೆಂಜರ್ಸ್ ಮತ್ತು ರೋವರ್ಸ್ ಘಟಕಗಳ ಜಂಟಿ ಆಶ್ರಯದಲ್ಲಿ ಶಿರ್ವದ ಪ್ರವಾಸಿ ಮಂದಿರ ವಠಾರವನ್ನು ಸ್ವಚ್ಛಗೊಳಿಸುವ “ಶ್ರಮದಾನ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಡಾ.ಹೆರಾಲ್ಡ್ ಐವನ್ ಮೋನಿಸ್,ಅಲ್ಲದೆ ಪ್ರಾದ್ಯಾಪಕರುಗಳಾದ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ.ಪ್ರವೀಣ್ಕುಮಾರ್,ಎನ್ ಎಸ್ ಎಸ್ ಯೋಜನಾಧಿಕಾರಿ ಶ್ರೀ ಪ್ರೇಮನಾಥ್, […]
ಸಂತ ಮೇರಿ ಕಾಲೇಜು ಶಿರ್ವ: ಎನ್.ಎಸ್.ಎಸ್ ಮಾಹಿತಿ ಕಾರ್ಯಕ್ರಮ
ಶಿರ್ವ(ಜ.23):ಇಲ್ಲಿನ ಸಂತ ಮೇರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಪ್ರಥಮ ವರ್ಷದ ಸ್ವಯಂ ಸೇವಕರಿಗೆ ಮಾಹಿತಿ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಕಾಲೇಜಿನ ಎನ್.ಎಸ್.ಎಸ್ ಸಹ ಯೋಜನಾಧಿಕಾರಿ ಹಾಗೂ ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ಸ್ಯಾಮ್ಜೋಯಲ್ ಡಯಾಸ್ರವರು ಎನ್.ಎಸ್.ಎಸ್. ಸ್ವಯಂ ಸೇವಕರು ಸದಾ ಕಾರ್ಯ ಪ್ರವೃತ್ತವಾಗುವುದರೊಂದಿಗೆ ಸಮಾಜಕ್ಕಾಗಿ ಅರ್ಪಣಾ ಮನೋಭಾವನೆಯನ್ನು ಹೊಂದಿರಬೇಕು ಎಂದು ಹೇಳುತ್ತಾ ಎನ್,ಎಸ್.ಎಸ್ನ ಧ್ಯೇಯ, ವ್ಯಾಪ್ತಿ ಹಾಗೂ ವಿದ್ಯಾರ್ಥಿ ಜೀವನದಲ್ಲಿ ಎನ್.ಎಸ್.ಎಸ್ನ […]
ಸಂತ ಮೇರಿ ಕಾಲೇಜು ಶಿರ್ವ: ರಾಷ್ಟ್ರೀಯ ಯುವ ಸಪ್ತಾಹ 2022 -ವಿಶೇಷ ಕಾರ್ಯಕ್ರಮ
ಶಿರ್ವ(ಜ.23): ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ ಮಂಗಳೂರು, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಹಾಗೂ ಸಂತ ಮೇರಿ ಕಾಲೇಜು ಶಿರ್ವ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಾಮೀ ವಿವೇಕಾನಂದರ 159 ನೇ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಯುವ ಸಪ್ತಾಹ-2022 ವಿಶೇಷ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಮಾತನಾಡಿದ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಕೆ. ಆರ್ ಪಾಟ್ಕರ್ರವರು ಯುವಕರು ಸ್ವಾಮಿ ವಿವೇಕಾನಂದರ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕ್ಯಾಂಪಸ್ ಸಂದರ್ಶನ
ಶಿರ್ವ(ಜ.17): ಮಂಗಳೂರಿನ ಪ್ರತಿಷ್ಠಿತ ದಿಯಾ ಸಿಸ್ಟಮ್ ಸಂಸ್ಥೆ(ಗ್ಲೋಟಚ್ ಟೆಕ್ನಾಲಜೀಸ್) ಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನ ಈಗಾಗಲೇ ಬಿಸಿಎ, ಬಿಎಸ್ಸಿ (ಸಿ.ಎಸ್),ಬಿಇ(ಸಿವಿಲ್ ಮತ್ತು ಮೆಕಾನಿಕಲ್ ಹೊರತುಪಡಿಸಿ), ಬಿಕಾಂ( ಕಂಪ್ಯೂಟರ್ ಅಪ್ಲಿಕೇಶನ್), ಡಿಪ್ಲೋಮಾ(ಸಿಎಸ್),ಎಂಎಸ್ಸಿ (ಸಿಎಸ್), ಎಂಸಿಎ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಶಿರ್ವ ಸಂತ ಮೇರಿ ಕಾಲೇಜಿನ ಗಣಕ ವಿಜ್ಞಾನ ವಿಭಾಗ,ವೃತ್ತಿ ಸಮಾಲೋಚನೆ ಮತ್ತು ನಿಯೋಜನೆ ಕೋಶ ವತಿಯಿಂದ ಜನವರಿ 13 ರಂದು ಕಾಲೇಜಿನ ಫಾ. ಹೆನ್ರಿ ಕ್ಯಾಸ್ಟಲಿನೊ ಸಭಾಂಗಣದಲ್ಲಿ ನಡೆಯಿತು. ಇದು ಸ್ಪರ್ಧಾತ್ಮಕ ಯುಗ […]
ಶಿರ್ವ ಸಂತ ಮೇರಿ ಕಾಲೇಜಿನಲ್ಲಿ 74ನೇ ಸೇನಾ ದಿನಾಚರಣೆ
ಶಿರ್ವ(ಜ.17): ರಾಷ್ಟ್ರದ ಭದ್ರತೆಯನ್ನು ಕಾಪಾಡುವುದು ಪ್ರತಿಯೊಬ್ಬ ಯುವ ನಾಗರಿಕನ ಕರ್ತವ್ಯವಾಗಿದೆ. ರಾಷ್ಟ್ರೀಯ ಆಸ್ತಿಗಳು, ನೈಸರ್ಗಿಕ ಸಂಪನ್ಮೂಲಗಳು, ಕಾನೂನು ಮತ್ತು ಸುವ್ಯವಸ್ಥೆಯನ್ನು ರಕ್ಷಿಸಲು ಇಂದು ನಾವು ಸಶಸ್ತ್ರ ಪಡೆಗಳನ್ನು ಹೆಚ್ಚಿಸಬೇಕಾಗಿದೆ. ಸೇನೆ ತನ್ನ ನೆಲೆಯಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಪ್ರಜೆಗಳು ಮತ್ತು ಸರ್ಕಾರ ತಮ್ಮ ಸಂಪೂರ್ಣ ಸಹಕಾರವನ್ನು ನೀಡಿ ರಾಷ್ಟ್ರದ ಪ್ರಗತಿಗೆ ಕೈಜೋಡಿಸಬೇಕಾಗಿರುವುದು ಇಂದು ಅತಿ ಅಗತ್ಯವಾಗಿದೆ ಎಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕಾಲೇಜಿನ ಎನ್.ಸಿ.ಸಿ ಭೂಯುವ ಸೇನಾ ದಳದಿಂದ […]
ಸಂತ ಮೇರಿ ಕಾಲೇಜು ಶಿರ್ವ: ರಾಷ್ಟ್ರೀಯ ಯುವ ದಿನಾಚರಣೆ
ಶಿರ್ವ(ಜ.13): ಇಲ್ಲಿನ ಸಂತ ಮೇರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ರೋವರ್- ರೇಂಜರ್ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದರ 159 ನೇ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಜ.12 ರಂದು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀ ರವಿನಂದನ್ ಭಟ್ ರವರು ಮಾತನಾಡಿ ಸ್ವಾಮಿ ವಿವೇಕಾನಂದರು ಯುವ ಸಮುದಾಯದ ಆದರ್ಶ, ಅವರ […]
ಜ.13 ರಂದು ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕ್ಯಾಂಪಸ್ ಸಂದರ್ಶನ
ಶಿರ್ವ( ಜ.8): ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ಜನವರಿ 13ರಂದು ಮಂಗಳೂರಿನ ಪ್ರತಿಷ್ಠಿತ ದಿಯಾ ಸಿಸ್ಟಮ್ ಸಂಸ್ಥೆ(ಗ್ಲೋಟಚ್ ಟೆಕ್ನಾಲಜೀಸ್) ಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ. ಈಗಾಗಲೇ ಬಿಸಿಎ, ಬಿಎಸ್ಸಿ (ಸಿ. ಎಸ್),ಬಿಇ( ಸಿವಿಲ್ ಮತ್ತು ಮೆಕಾನಿಕಲ್ ಹೊರತುಪಡಿಸಿ), ಬಿಕಾಂ( ಕಂಪ್ಯೂಟರ್ ಅಪ್ಲಿಕೇಶನ್), ಡಿಪ್ಲೋಮಾ( ಸಿ ಎಸ್),ಎಂಎಸ್ಸಿ, ಎಂಸಿಎ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಪೂರ್ವಹ್ನ 9.00 ಗಂಟೆಗೆ ಕಾಲೇಜಿನ ಫಾ. ಹೆನ್ರಿ ಕ್ಯಾಸ್ಟಲಿನೊ ಸಭಾಂಗಣದಲ್ಲಿ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು ಆಧಾರ್ ಕಾರ್ಡ್, […]
ಸಂತ ಮೇರಿ ಮಹಾವಿದ್ಯಾಲಯದಲ್ಲಿ ಲಸಿಕಾ ಅಭಿಯಾನ
ಶಿರ್ವ(ಜ.8): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿವಿಧ ಘಟಕಗಳಾದ ಎನ್ಸಿಸಿ, ಎನ್ಎಸ್ಎಸ್, ಯೂತ್ ರೆಡ್ ಕ್ರಾಸ್, ರೋವರ್ಸ-ರೇಂಜರ್ಸ್, ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಜಂಟಿಯಾಗಿ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಲಸಿಕಾ ಅಭಿಯಾನವನ್ನು ಕಾಲೇಜಿನ ದೃಶ್ಯ ಶ್ರವ್ಯ ಕೊಠಡಿದಲ್ಲಿ ಜನವರಿ 03 ರಿಂದ ಆಯೋಜಿಸಲಾಯಿತು. ಪದವಿ ಕಾಲೇಜುಗಳಲ್ಲಿ ಹೊಸತಾಗಿ ಸೇರ್ಪಡೆ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕೋವಿಡ್ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಉಚಿತ ಹೃದಯ ತಪಾಸಣಾ ಶಿಬಿರ
ಶಿರ್ವ(ಜ.1): ಆರೋಗ್ಯ ಸಂಬಂಧಿ ವಿಚಾರದಲ್ಲಿ ಸದಾ ಎಚ್ಚರಿಕೆಯಿಂದ ಇರುವ ಅನಿವಾರ್ಯತೆ ಮತ್ತು ಅಗತ್ಯತೆ ಇಂದು ನಮ್ಮ ಮುಂದಿದೆ. ಇಂದಿನ ಜೀವನ ಶೈಲಿ ಮತ್ತು ಆಹಾರ ಪದ್ಧತಿಯಿಂದ ಅಬಾಲ ವೃದ್ಧರಾದಿಯಾಗಿ ಸಾವು ಸಂಭವಿಸುತ್ತಿದೆ. ಈ ನಿಟ್ಟಿನಲ್ಲಿ ಸೂಕ್ತ ಸಮಯದಲ್ಲಿ ಆರೋಗ್ಯ ವಂತ ಜನರು ಕೂಡ ತಮ್ಮ ಆರೋಗ್ಯವನ್ನು ತಜ್ಞ ವೈದ್ಯರಿಂದ ಸಕಾಲದಲ್ಲಿ ಪರೀಕ್ಷಿಸಿ ಹೃದಯದ ರೋಗಗಳಿಂದ ತಮ್ಮನ್ನು ರಕ್ಷಣೆ ಮಾಡಿಸಿಕೊಳ್ಳುವುದು ಬಹಳ ಮಹತ್ವದ ವಿಚಾರವಾಗಿದೆ ಎಂದು ಸಂತ ಮೇರಿ ಸಮೂಹ ಸಂಸ್ಥೆಗಳ ಸಂಚಾಲಕರಾದ ಅತೀ […]