ಶಿರ್ವ(ಡಿ.28): ನಮ್ಮ ಪರಿಸರ ಸ್ವಚ್ಛವಾಗಿದ್ದರೆ ಎಷ್ಟೋ ರೋಗಗಳನ್ನು ಮದ್ದಿಲ್ಲದೇ ದೂರವಾಗಿಸಲು ಸಾಧ್ಯ. ನಮಗೆ ಶಿಕ್ಷಣ ಎಷ್ಟು ಮುಖ್ಯವೋ ಪರಿಸರ ಕಾಳಜಿ ಅಷ್ಟೇ ಮುಖ್ಯ. ಅ ನಿಟ್ಟಿನಲ್ಲಿ ಕಾಲೇಜಿನ ಎನ್ ಸಿ ಸಿ ಘಟಕದ ವಿದ್ಯಾರ್ಥಿಗಳು ಕಾಪು ಬೀಚ್ ಸ್ವಚ್ಛಗೊಳಿಸುವ ಮೂಲಕ ಸರಕಾರದ ಕೆಲಸ ಮಾತ್ರವಲ್ಲ ಪ್ರಜ್ಞಾ ವಂತ ನಾಗರಿಕರೆಲ್ಲರ ಕರ್ತವ್ಯವೆಂದು ಸಾಬೀತು ಪಡಿಸಿದರು. ಕಡಲ ಕಿನಾರೆಯ ವ್ಯಾಪಾರಸ್ಥರು ಸ್ವಚ್ಛತೆಯ ಬಗ್ಗೆ ತಾವೇ ಮುತುವಜಿ೯ ವಹಿಸಿ ಸ್ವಚ್ಛತೆ ಕಾಪಾಡಿಕೊಳ್ಳುವುದು ಮತ್ತು ಪ್ರವಾಸಿಗರಿಗೆ ಸ್ವಚ್ಛತೆಯ […]
Tag: shirva
ಶಿರ್ವ ಸಂತ ಮೇರಿ ಮಹಾವಿದ್ಯಾಲಯ: ಬೀಳ್ಕೊಡುಗೆ ಸಮಾರಂಭ
ಶಿರ್ವ(ಡಿ.5): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ 36 ವರ್ಷ ಅಧಿಕ ಕಾಲ ಕಾಲೇಜಿನ ಕಚೇರಿ ಸಹಾಯಕ ಸಿಬ್ಬಂದಿಯಾಗಿ ಸೇವೆಸಲ್ಲಿಸಿದ ಶ್ರೀರಂಗ ರವರಿಗೆ ಬಿಳ್ಕೊಡುಗೆ ಕಾರ್ಯಕ್ರಮವನ್ನು ಡಿ,04 ಹಮ್ಮಿಕೊಳ್ಳಲಾಯಿತು. ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ಜೊತೆಗೆ ಕಚೇರಿ ಸಿಬ್ಬಂದಿ ವರ್ಗದವರು ಪ್ರಮುಖ ಪಾತ್ರವನ್ನು ವಹಿಸಲಿದ್ದಾರೆ. ಕಾಲೇಜಿನ ಸ್ವಚ್ಛತೆ ಮತ್ತು ಶುಚಿತ್ವವನ್ನು ಕಾಪಾಡುವುದರಲ್ಲಿ ಸಹಾಯಕ ಸಿಬ್ಬಂದಿ ಪಾತ್ರ ಮಹತ್ವದ್ದು. ಶ್ರೀರಂಗ ರವರು ನಮ್ಮ ಸಂಸ್ಥೆಯಲ್ಲಿ ಅಚ್ಚುಕಟ್ಟಾಗಿ ಅವರ ಕಾರ್ಯ ದಕ್ಷತೆಯನ್ನು ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದರು ಹಾಗೂ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಬೇಸಿಕ್ ಅಕೌಂಟಿಂಗ್ ಕುರಿತು ವಿಶೇಷ ಉಪನ್ಯಾಸ
ಶಿರ್ವ(ಡಿ,5): ಇಂದಿನ ವಾಣಿಜ್ಯ ಕ್ಷೇತ್ರಗಳಲ್ಲಿ ಲೆಕ್ಕಪತ್ರಗಳ ಲೆಕ್ಕಚಾರ ಮಾಡಲು ಬೇಸಿಕ್ ಅಕೌಂಟಿಂಗ್ ಬಗ್ಗೆ ಯುವಕರಲ್ಲಿ ಜ್ಞಾನದ ಅರಿವು ಇರಬೇಕೆಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ವತಿಯಿಂದ ಏರ್ಪಡಿಸಿದ್ದ ಬೇಸಿಕ್ ಅಕೌಂಟಿಂಗ್ ಕುರಿತು ವಿಶೇಷ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀ ಸ್ಯಾಮ್ ಜೋಯಲ್ ಡೈಸ್ ರವರು ಪ್ರಾಯೋಗಿಕವಾಗಿ ವಿವರಿಸಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಾಣಿಜ್ಯ ಉದ್ಯೋಗ ಕ್ಷೇತ್ರದಲ್ಲಿ ಅಕೌಂಟಿಂಗ್ ಎಕ್ಸ್ಪರ್ಟ್ ಗಳಿಗೆ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿಶ್ವ ಕಂಪ್ಯೂಟರ್ ಸಾಕ್ಷರತೆ ದಿನಾಚರಣೆ
ಶಿರ್ವ(ಡಿ,5): ಕಂಪ್ಯೂಟರ್ ಜ್ಞಾನ ಇಂದಿನ ಯುವಕರಲ್ಲಿ ಅತ್ಯಂತ ಅವಶ್ಯಕವಾಗಿದೆ. ಕಲಿಕೆಯ ಜೊತೆಗೆ ಉದ್ಯೋಗ ಕ್ಷೇತ್ರದಲ್ಲಿ ಕಂಪ್ಯೂಟರ್ ಜ್ಞಾನವನ್ನು ಸಮರ್ಪಕವಾಗಿ ಅಳವಡಿಸಿಕೊಂಡದಲ್ಲಿ ಉತ್ತಮ ರೀತಿಯ ಬೆಳವಣಿಗೆ ಕಾಣಬಹುದೆಂದು ಕಾಲೇಜಿನ ಕಚೇರಿ ಅಧೀಕ್ಷಕಿ ಶ್ರೀಮತಿ ಡೊರಿಯನ್ ಡಿಸಿಲ್ವಾ ಹೇಳಿದರು. ಅವರು ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗ ಹಾಗೂ ಕಂಪ್ಯೂಟರ್ ಸಾಕ್ಷರತ ಕೋಶ ಜಂಟಿಯಾಗಿ ಏರ್ಪಡಿಸಿದ ವಿಶ್ವ ಕಂಪ್ಯೂಟರ್ ಸಾಕ್ಷರತೆ ದಿನಾಚರಣೆ ದಲ್ಲಿ ಮುಖ್ಯ ಅತಿಥಿಗಳಾಗಿ ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಯೋಗ ತರಬೇತಿ ಶಿಬಿರ
ಶಿರ್ವ(ನ,30):ಯೋಗದಿಂದ ದೇಹ ಮತ್ತು ಮನಸ್ಸನ್ನು ನಿಯಂತ್ರಿಸಲು ಸಾಧ್ಯ, ಜೊತೆಗೆ ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಬಹುದೆಂದು ಶಿರ್ವ ವಲಯ ಪತಂಜಲಿ ಯೋಗ ಸಮಿತಿಯ ಯೋಗ ಗುರುಗಳಾದ ಶ್ರೀ ರಂಜಿತ್ ಪುನರ್ ರವರು ಹೇಳಿದರು. ಅವರು ಸಂತ ಮೇರಿ ಮಹಾವಿದ್ಯಾಲಯದಲ್ಲಿ ಯೋಗ ಮತ್ತು ಫಿಟ್ನೆಸ್ ಸೆಲ್ ಹಾಗೂ ಎನ್.ಸಿ.ಸಿ ಸಂಯುಕ್ತವಾಗಿ ಏರ್ಪಡಿಸಿದ ಯೋಗ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉದ್ಘಾಟಿಸಿ ಮಾತನಾಡಿದರು. ಇಂದು ಸ್ಪರ್ಧಾತ್ಮಕ ಯುಗದಲ್ಲಿ ಯುವಜನರು ತಮ್ಮ ದೈನಂದಿನ ಜೀವನದಲ್ಲಿ ದೈಹಿಕ […]
ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ಎನ್.ಸಿ.ಸಿ ದಿನಾಚರಣೆ
ಶಿರ್ವ(ನ,29): ಇಂದು ಯುವಜನರಲ್ಲಿ ದೇಶಭಕ್ತಿ, ಶಿಸ್ತು, ಸಮಯ ಪ್ರಜ್ಞೆ ಮೂಡಿಸುವ ಸಂಘಟನೆಗಳಲ್ಲಿ ವಿಶ್ವದ ಅತಿ ದೊಡ್ಡ ಯುವ ಸಂಘಟನೆಯಾದ ನ್ಯಾಷನಲ್ ಕೆಡೆಟ್ ಕಾರ್ಪ್ಸ್(ಎನ್.ಸಿ.ಸಿ) ಒಂದಾಗಿದ್ದು,ಯುವಜನರಲ್ಲಿ ರಾಷ್ಟ್ರಪ್ರೇಮ,ಸಮಾಜ ಸೇವಾಗುಣಗಳನ್ನು, ತಮ್ಮ ವ್ಯಕ್ತಿತ್ವ ವಿಕಸನ,ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಮಾತ್ರವಲ್ಲದೆ ಉತ್ತಮ ಉದ್ಯೋಗ ಅವಕಾಶಗಳನ್ನು ಪಡೆದುಕೊಳ್ಳಲು ಎನ್.ಸಿ.ಸಿ ಸಹಾಯಕಾರಿ ಎಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕಾಲೇಜಿನ ಭೂಯುವ ಸೇನಾ ದಳದಿಂದ ಏರ್ಪಡಿಸಿದ 73ನೇ ಎನ್.ಸಿ.ಸಿಯ ದಿನಾಚರಣೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| […]
ಭ್ರಷ್ಟಾಚಾರ ನಿರ್ಮೂಲನೆಗೆ ಯುವಕರು ಕೈಜೋಡಿಸಬೇಕು -ಡಾ| ಹೆರಾಲ್ಡ್ ಐವನ್ ಮೋನಿಸ್ (ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ಜಾಗೃತಿ ಸಪ್ತಾಹ -2021)
ಶಿರ್ವ(ಅ,29): ಇಂದು ದೇಶದಲ್ಲಿ ಕಾಡುತ್ತಿರುವ ದೊಡ್ಡ ಸಮಸ್ಯೆಯೆಂದರೆ ಭ್ರಷ್ಟಾಚಾರ.ಸಾರ್ವಜನಿಕ ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿ ಭ್ರಷ್ಟಾಚಾರವನ್ನು ತೊಲಗಿಸಿ, ಉತ್ತಮ ಆಡಳಿತಕ್ಕಾಗಿ ಪಾರದರ್ಶಕ ನೀತಿಗಳನ್ನು ರೂಪಿಸಿ ಅವುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಇಂದಿನ ವ್ಯವಸ್ಥೆಯನ್ನು ಸುಧಾರಿಸುವ ಸಲುವಾಗಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ‘ ಜಾಗೃತಿ ಅರಿವು ಸಪ್ತಾಹ-2021’ಏರ್ಪಡಿಸಲಾಯಿತು. ಪ್ರತಿಯೊಬ್ಬ ಪ್ರಜೆಯೂ ಯಾವುದೇ ಭ್ರಷ್ಟಾಚಾರಕ್ಕೆ ಒಳಪಡದೆ, ಭ್ರಷ್ಟಾಚಾರಿಗಳವಿರುದ್ಧ ಹೋರಾಡಲು ಸೂಕ್ತ ಅಧಿಕಾರಿಗಳಿಗೆ ಮಾಹಿತಿ ನೀಡಿ ಕಾನೂನು ರಕ್ಷಣೆ – […]
ಶಿರ್ವ: ಡಂಪಿಂಗ್ ಯಾರ್ಡ್ ಆಗುತ್ತಿದೆ ಶಾಂತಿಗುಡ್ಡೆ
ಶಿರ್ವ(ಅ,21): ಕಾಪು-ಶಿರ್ವ ರಸ್ತೆಯ ಶಾಂತಿಗುಡ್ಡೆ ಎಂಬಲ್ಲಿ ಸಾರ್ವಜನಿಕರು ಘನ ಮತ್ತು ದ್ರವ ತ್ಯಾಜ್ಯಗಳು ಹಾಗು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಮನ ಬಂದಂತೆ ರಸ್ತೆ ಬದಿಗೆ ಎಸೆಯುವುದರಿಂದ ಪರಿಸರದ ದನಕರುಗಳಿಗೆ ಮತ್ತು ಜನರಿಗೆ ತೊಂದರೆ ಉಂಟಾಗುವುದರೊಂದಿಗೆ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳಿವೆ. ಸುತ್ತ-ಮುತ್ತ ದಿನನಿತ್ಯ ಒಡಾಡುವ ನಾಗರಿಕರಿಗೆ ಕೆಟ್ಟ ವಾಸನೆಯಿಂದಾಗಿ ಮೂಗು ಮುಚ್ಚಿಕೊಂಡೇ ಹೋಗ ಬೇಕಾದ ಪರಿಸ್ಥಿತಿ ಬಂದೊದಗಿದೆ. ಸುತ್ತಲ ಫಲಪತ್ತೆಯ ಭೂಮಿ ತ್ಯಾಜ ಮತ್ತು ಪ್ಲಾಸ್ಟಿಕ್ ನಿಂದ ತುಂಬಿದೆ. ಇದಕ್ಕೆ ಸಂಬಂದ […]
ಶಿರ್ವ ಸಂತ ಮೇರಿ ಮಹಾವಿದ್ಯಾಲಯ : ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ ಹಾಗೂ ಬಹುಮಾನ ವಿತರಣೆ
ಶಿರ್ವ (ಅ, 04) : ಇದು ಸ್ಪರ್ಧಾತ್ಮಕ ಜಗತ್ತು ಎಂದು ನಮಗೆಲ್ಲರಿಗೂ ತಿಳಿದಿದೆ. ಇಂದಿನ ಯುವಪೀಳಿಗೆ ಗಳು ಬದಲಾಗುತ್ತಿರುವ ಜೀವನಶೈಲಿಯನ್ನು ಅಳವಡಿಸಿಕೊಳ್ಳುತ್ತಾ ಗತಕಾಲದ ವೈಭವಗಳ ಮೌಲ್ಯಗಳನ್ನು, ಜೀವನದ ಪಾಠಗಳನ್ನು ತಿಳಿದು ಮುಂದಿನ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಹಾಗೆ ವಿದ್ಯೆ ಕಲಿಸಿದ ಗುರುಗಳಿಗೆ ಮತ್ತು ಸಂಸ್ಥೆಗಳಿಗೆ ತಮ್ಮ ಅಮೂಲ್ಯವಾದ ಕೊಡುಗೆಗಳನ್ನು ನೀಡಬೇಕೆಂದು ಸಂತ ಮೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹಾಗೂ ಸಂತ ಮೇರಿ ಪದವಿ ಕಾಲೇಜಿನ ಪ್ರಥಮ […]
ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ
ಶಿರ್ವ(ಸೆ,28): ಇಲ್ಲಿನ ಸಂತ ಮೇರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನಾ ದಿನವನ್ನು ಕಾಲೇಜಿನ ದೃಶ್ಯ-ಶ್ರಾವ್ಯ ಕೊಠಡಿಯಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿ ಉಡುಪಿಯ ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಶ್ರೀಯುತ ಸುಚಿತ್ ಕೋಟ್ಯಾನ್ ರವರು ಮಾತನಾಡಿ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು ಜೀವನದಲ್ಲಿ ಶಿಸ್ತು ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಸೇವಾ ಮನೋಭಾವನೆಯಿಂದ ಸಮಾಜಕ್ಕೆ ಮಾದರಿ ಪ್ರಜೆಗಳಾಗಬೇಕು. […]