ಉಡುಪಿ (ಮೇ, 27): ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಮೇ 16 ರಿಂದ 25 ರವರೆಗೆ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ 10 ದಿನಗಳ “ಆನ್ಲೈನ್ ಬೇಸಿಗೆ ಶಿಬಿರ” ಸಂಪನ್ನಗೊಂಡಿದೆ. ಈ ಹತ್ತು ದಿನಗಳ ಶಿಬಿರದಲ್ಲಿ ಕಾಲೇಜಿನ 9 ತಂಡಗಳು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳನ್ನು ವಿಂಗಡನೆ ಮಾಡಿ ಅವರಿಗೆ ವಿವಿಧ […]
Tag: smvitm
ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯ : ರಾಷ್ಟ್ರೀಯ ತಂತ್ರಜ್ಞಾನ ದಿನಾಚರಣೆ
ಉಡುಪಿ (ಮೇ. 12): ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ IEEE ವಿದ್ಯಾರ್ಥಿ ಶಾಖೆಯ ಆಶ್ರಯದಲ್ಲಿ ಮೇ 11ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಗಮನ ಸೆಳೆದ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯಿಂದ ಆರ್ಥಿಕವಾಗಿ ಪ್ರಾಯೋಜಿಸಲ್ಪಟ್ಟ ವಿವಿಧ ಪ್ರಾಜೆಕ್ಟ್ ಮಾದರಿಗಳನ್ನು ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದರು. ವಿದ್ಯಾರ್ಥಿಶಾಖೆಯ ಅಧ್ಯಕ್ಷರಾದ ಶ್ರೀ ಅಶುತೋಷ್ ಕುಮಾರ್ ಕಾರ್ಯಕ್ರಮವನ್ನು ಸಂಯೋಜಿಸಿ […]
ಬಂಟಕಲ್ ಕಾಲೇಜು : ವಿದ್ಯಾರ್ಥಿಗಳಿಂದ ಕೋವಿಡ್ ಲಸಿಕಾ ಮಾಹಿತಿ ಅಭಿಯಾನ
ಉಡುಪಿ (ಏ, 15): ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸುಮಾರು 500 ಕ್ಕೂ ಹೆಚ್ಚು ವಿದ್ಯಾರ್ಥಿ ಸ್ವಯಂಸೇವಕರು ಕೋವಿಡ್ ಲಸಿಕಾ ಮಾಹಿತಿ ಅಭಿಯಾನದಲ್ಲಿ ಪಾಲ್ಗೊಂಡರು. ಸಂಸ್ಥೆಯ ವಿದ್ಯಾರ್ಥಿಗಳು ಬಂಟಿಕಲ್ ಕಾಲೇಜಿನ ಆಸುಪಾಸು, ಹಾಗೂ ಉಡುಪಿ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ತೆರಳಿ 45ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ತೆಗೆದುಕೊಳ್ಳುವುದರಿಂದ ಆಗುವ ಉಪಯೋಗಗಳನ್ನು ವಿವರಿಸಿ, ಅವರುಗಳಲ್ಲಿ ಜಾಗೃತಿಯನ್ನು ಮೂಡಿಸಿ, ಲಸಿಕೆ ಪಡೆಯಲು ಜನರಲ್ಲಿ ಇರುವ […]
ಬಂಟಕಲ್ ಇಂಜಿನಿಯರಿಂಗ್ ಕಾಲೇಜು : ಹಳೆ ವಿದ್ಯಾರ್ಥಿಗಳಿಂದ ಯಕ್ಷಗಾನ ಬಯಲಾಟ
ಉಡುಪಿ (ಏ, 7) : ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಹಳೆ ವಿದ್ಯಾರ್ಥಿಗಳು “ಯಕ್ಷಸಿರಿ ಶಾಶ್ವತ ಬಳಗ” ಎಂಬ ಹೆಸರಿನಲ್ಲಿ ಸಂಘಟನೆಯನ್ನು ಹುಟ್ಟು ಹಾಕಿದ್ದು, ಇದರ ವತಿಯಿಂದ ಶ್ರೀ ಕೃಷ್ಣ ಲೀಲಾರ್ಣವ’ ಎಂಬ ಯಕ್ಷಗಾನ ಬಯಲಾಟ ಕಾರ್ಯಕ್ರಮವನ್ನು ಎರ್ಮಾಳಿನ ಶ್ರೀ ಲಕ್ಷ್ಮೀ ಜನಾರ್ಧನ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿತ್ತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿಯ ಶ್ರೀ ಸೋದೆ ವಾದಿರಾಜ ಮಠದ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ವಹಿಸಿದ್ದರು. […]
ಬಂಟಕಲ್ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯ : ಮಾಹಿತಿ ಕಾರ್ಯಾಗಾರ
ಉಡುಪಿ (ಮಾ. 31) : ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಸಮಾಲೋಚನಾ (ಕೌನ್ಸೆಲಿಂಗ್) ಘಟಕವು ದಿನಾಂಕ 30 ಮಾರ್ಚ್2021ರಂದು “ಕೌನ್ಸೆಲಿಂಗ್ ಸ್ಟ್ರಾಟಜಿಸ್” ಎಂಬ ವಿಷಯದ ಕುರಿತು ಕಾರ್ಯಗಾರವನ್ನು ಆಯೋಜಿಸಿತ್ತು. ಕಾರ್ಯಗಾರದಲ್ಲಿ ರೋಶನಿ ನಿಲಯ, ಮಂಗಳೂರು ಇದರ ಉಪಪ್ರಾಂಶುಪಾಲರಾದ ಡಾ.ಜೆನಿಸ್ ಮೇರಿ ಯವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ವ್ಯಕ್ತಿಯ ದೇಹ ಮತ್ತು ಮನಸ್ಸು ನಡುವಿನ ಸಮತೋಲನ ಹಾಗೂ ವೈಯಕ್ತಿಕ ಮತ್ತು ವೃತ್ತಿಪರ ಜೀವನದ ನಡುವಿನ ಸಂವಹನ, ವ್ಯಕ್ತಿಯ ಸಮಸ್ಯೆಗಳನ್ನು ಗುರುತಿಸುವುದು ಮತ್ತು […]
ಬಂಟಕಲ್ ಕಾಲೇಜಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ – 2020 ಕುರಿತಾದ ಉಪನ್ಯಾಸ
ಉಡುಪಿ (ಮಾ. 30): ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಖಾತ್ರಿ ಘಟಕವು ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತಿನ ಸಹಯೋಗದೊಂದಿಗೆ “ಉನ್ನತ ಶಿಕ್ಷಣ ರಂಗದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ -2020ರ ಪರಿಣಾಮಗಳು” ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಸಿ. ಕೆ. ಮಂಜುನಾಥ್ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಇವರು ತಮ್ಮ ಉಪನ್ಯಾಸದಲ್ಲಿ ಭಾರತದಲ್ಲಿ ರಾಷ್ಟ್ರೀಯ ಶಿಕ್ಷಣ […]
ಮ್ಯಾಪಥಾನ್ 2021 ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದ ಚಾಂಪಿಯನ್ ಪ್ರಶಸ್ತಿ
ಉಡುಪಿ (ಮಾ.23): ಶ್ರೀ ಮಧ್ವ ವಾದಿರಾಜ ತಾಂತ್ರಿಕ ವಿದ್ಯಾಲಯದ ಡಾ. ನಾಗರಾಜ ಭಟ್ ಹಾಗೂ ಡಾ. ಸಚಿನ್ ಭಟ್ ಇವರು ಇಸ್ರೋ-ಐ.ಐ.ಟಿ ಬಾಂಬೆ ವಿ.ಐ.ಸಿ.ಟಿ.ಇ ಇವರ ಜಂಟಿ ಸಹಭಾಗಿತ್ವದಲ್ಲಿ ಆಯೋಜನೆಗೊಂಡ ಮ್ಯಾಪಥಾನ್- 2021 ರ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಇವರ ತಂಡದ ‘ಸಮುದ್ರಸೀಮಾ ಕೋಸ್ಟಲ್ ಕರ್ನಾಟಕ ಶೋಲೈನ್ ಡೈನಮಿಕ್ಸ್’ ಎಂಬ ಸಂಶೋಧನೆಗೆ ಈ ಪುರಸ್ಕಾರ ಲಭಿಸಿದೆ. ಡಾ. ನಾಗರಾಜ ಭಟ್ ಉಡುಪಿಯ ಶ್ರೀ ಮಧ್ವ ವಾದಿರಾಜ ತಾಂತ್ರಿಕ […]
ವಿಶ್ವ ಜಲ ದಿನಾಚರಣೆಯ ಅಂಗವಾಗಿ ಮಾಹಿತಿ ಕಾರ್ಯಗಾರ
ಉಡುಪಿ (ಮಾ. 23) : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಪರಿಸರ ಕ್ಲಬ್ ಮತ್ತು ಸಂಸ್ಥೆಯ ಸಿವಿಲ್ ವಿಭಾಗದ ಸ್ಥಪತಿ ಘಟಕದ ಸಹಯೋಗದೊಂದಿಗೆ ವಿಶ್ವ ಜಲದಿನಾಚರಣೆಯ ಅಂಗವಾಗಿ 22 ಮಾರ್ಚ್ 2021 ರಂದು “ಮಾನವನ ಆಧುನಿಕ ಚಟುವಟಿಕೆಗಳು ನೀರಿನ ಕೊರತಗೆ ಕಾರಣವಾಗಿವೆಯೇ” ಎಂಬ ವಿಷಯದ ಕುರಿತು ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಗಾರದಲ್ಲಿ ಜಿಲ್ಲಾ ಜಲಸಂಪನ್ಮೂಲ ವ್ಯಕ್ತಿ ಶ್ರೀ ಜೋಸೆಫ್ ರೆಬೆಲ್ಲೊ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಜಗತ್ತು ಎದುರಿಸುತ್ತಿರುವ ಪ್ರಸ್ತುತ […]
ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ “ಮಹಿಳಾ ದಿನಾಚರಣೆ”
ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಮಹಿಳಾ ಸಬಲೀಕರಣ ಘಟಕದ ವತಿಯಿಂದ ಮಾರ್ಚ್ 8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಂಸ್ಥೆಯ ಆವರಣದಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಯಿತು.
ಶಿರ್ವ ಸಂತ ಮೇರಿ ಮಹಾವಿದ್ಯಾಲಯ – ಮಿನಿ ಪ್ರಾಜೆಕ್ಟ್ ಅಭಿವೃದ್ದಿ ಕಾರ್ಯಗಾರ
ಉಡುಪಿ (ಮಾ.6): ಇಂದು ಆಧುನಿಕ ಜಗತ್ತು ಸಂಪೂರ್ಣವಾಗಿ ಡಿಜಿಟಲೀಕರಣವಾಗುತ್ತಿದೆ. ತಂತ್ರಜ್ಞಾನದ ಅಭಿವೃದ್ದಿಯು ಹೊಸ ಆಲೋಚನೆಗಳ ಆವಿಷ್ಕಾರಗಳು, ಉತ್ತಮ ಸೌಲಭ್ಯಗಳು ಐಷಾರಾಮಿ ಜೀವನ ಶೈಲಿಗಳಿಗೆ ಕಾರಣವಾಗಿದೆ. ಇಂಟರ್ನೆಟ್ಗೆ ಸಂಪರ್ಕ ಹೊಂದಿದ ಅನೇಕ ಸಾಧನೆಗಳು ಜೀವನದ ವಿಧಾನವನ್ನು ಬದಲಾಯಿಸಿದೆ ಹಾಗು ಇಂತಹ ತಂತ್ರಜ್ಞಾನದ ಕಲಿಕೆಯು ವಿದ್ಯಾರ್ಥಿ ದೆಸೆಯಲ್ಲಿ ರೂಢಿಸಿಕೊಳುವ ಮೂಲಕ ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವನೆ ಹೆಚ್ಚಲು ಪೂರಕ ಎಂದು ಬಂಟಕಲ್ ಕಾಲೇಜಿನ ಡಾ| ರಾಘವೇಂದ್ರ ಎಸ್. ರವರು ಹೇಳಿದರು. ಅವರು ಶಿರ್ವ ಸಂತಮೇರಿ […]










