ಗಂಗೊಳ್ಳಿ (ಫೆ.18): “ ಬಾಲ್ಯದಿಂದಲೂ ನಮ್ಮನ್ನೆಲ್ಲ ಆಕರ್ಷಿಸಿದ ಕಲೆ ಯಕ್ಷಗಾನ. ಅಲ್ಲಿಯ ವೈವಿಧ್ಯಮಯವಾದ ವೇಷಭೂಷಣ ಮನಸ್ಸಿಗೆ ಬೆರಗು ಮತ್ತು ಅಚ್ಚರಿ ಹುಟ್ಟಿಸಿದ ಅಂಶ. ಯಾವುದೇ ಆಧುನಿಕ ಸೌಲಭ್ಯವಿಲ್ಲದ ಆ ಕಾಲದಲ್ಲಿ ಗ್ಯಾಸ್ ಲೈಟ್ ಗಳ ನೆರಳು ಬೆಳಕಿನಲ್ಲಿ ಕಲಾವಿದರು ಧರಿಸುತ್ತಿದ್ದ ಉಡುಗೆತೊಡುಗೆಗಳು, ಮುಖವರ್ಣಿಕೆ, ಕಿರೀಟ ಮೊದಲಾದವು ಪೌರಾಣಿಕ ಲೋಕವನ್ನೇ ಸೃಷ್ಟಿಸುತ್ತಿದ್ದವು. ಇಂದು ಕಾಲ ಬದಲಾಗಿದೆ. ಆದರೂ ಅಂದಿನ ಅದೇ ಆಕರ್ಷಣೆ ಯಕ್ಷಗಾನಕ್ಕಿದೆ. ಐವತ್ತರ ಸಂಭ್ರಮವನ್ನು ಆಚರಿಸುತ್ತಿರುವ ಸಾಲಿಗ್ರಾಮ ಮಕ್ಕಳ ಮೇಳವು […]
Tag: sujayendra hande
ಕೋಟದಲ್ಲಿ ಕಲೋತ್ಸವ ಉದ್ಘಾಟನೆ
ಕೋಟ (ಜ,31): “ಇಂದಿನ ಕಾಲ ಘಟ್ಟದಲ್ಲಿ ಯುವ ಜನತೆ ಕಲೆ ಸಾಹಿತ್ಯದತ್ತ ಆಸಕ್ತಿವಹಿಸಬೇಕಾದ ಅಗತ್ಯವಿದೆ. ಮಕ್ಕಳಲ್ಲಿ ಬಿತ್ತಿದ ಬೀಜ ಮುಂದೆ ಒಳ್ಳೆಯ ಬೆಳೆಯಾಗಿ ಬೆಳೆಯಲಿದೆ. ಸಾಲಿಗ್ರಾಮ ಮಕ್ಕಳ ಮೇಳ ಸುಮಾರು ಐವತ್ತು ವರ್ಷಗಳಿಂದ ಕೋಟ ಪರಿಸರದ ಮಕ್ಕಳಿಗೆ ಒಳ್ಳೆಯ ವೇದಿಕೆಯನ್ನು ಒದಗಿಸಿಕೊಟ್ಟಿರುವುದು ಅಭಿನಂದನೀಯ. ಎರಡು ದಿನಗಳ ಕಲೋತ್ಸವ ಯಶಸ್ವಿಯಾಗಲಿ” ಎಂದು ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾ ಕುಮಾರಿಯವರು ಹೇಳಿದರು. ಕೋಟ ಪಟೇಲರ ಮನೆಯಲ್ಲಿ ಆಯೋಜಿಸಿದ ಐವತ್ತರ ಸಂಭ್ರಮವನ್ನು ಆಚರಿಸುತ್ತಿರುವ […]
ಎಂ. ಎನ್. ಮಧ್ಯಸ್ಥರಿಗೆ ಸುವರ್ಣ ಪರ್ವ ಪುರಸ್ಕಾರ
ಕೋಟ (ನ,21): ಕೋಟದ ಸಾಲಿಗ್ರಾಮ ಮಕ್ಕಳ ಮೇಳವು ತನ್ನ ಐವತ್ತರ ಸಂಭ್ರಮಾಚರಣೆಯ ಸುವರ್ಣ ಪರ್ವದ ಮೂರನೆಯ ಕಾರ್ಯಕ್ರಮವನ್ನು ಗಿರಿಜಾ ಶಂಕರನಾರಾಯಣ ಮಧ್ಯಸ್ಥ ಚಾರಿಟೇಬಲ್ ಟ್ರಸ್ಟ್ (ರಿ) ಪಾರಂಪಳ್ಳಿ, ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿ ಮತ್ತು ಕಾರ್ಕಡ ಗೆಳೆಯರ ಬಳಗದ ಜಂಟಿ ನೆರವಿನೊಂದಿಗೆ ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಪ್ರಾಂಗಣದಲ್ಲಿ ನವಂಬರ್ 23, ಶನಿವಾರದಂದು ಆಯೋಜಿಸಿದೆ. ಮಕ್ಕಳ ಕ್ಷೇತ್ರದಲ್ಲಿ ಅನುಪಮವಾದ ಕೃಷಿ ಮಾಡಿದ ನಿವೃತ್ತ ಅಧ್ಯಾಪಕ, ಯಕ್ಷ ಗುರು, ಲೇಖಕ, ಹವ್ಯಾಸಿ ಯಕ್ಷಗಾನ […]
ಕೋಟ ಸುಜಯೀಂದ್ರ ಹಂದೆಯವರಿಗೆ ಯಕ್ಷಗಾನ ಅಕಾಡೆಮಿ ಪುರಸ್ಕಾರ
ಮಂಗಳೂರು ( ನ .22): 2023 ರ ಸಾಲಿನ ಯಕ್ಷಗಾನ ಅಕಾಡೆಮಿ ಕೊಡಮಾಡುವ ಪುಸ್ತಕ ಬಹುಮಾನ ಪ್ರಶಸ್ತಿಯನ್ನು ಉಪನ್ಯಾಸಕ, ಲೇಖಕ, ಸಾಲಿಗ್ರಾಮ ಮಕ್ಕಳ ಮೇಳದ ನಿರ್ದೇಶಕ ಕೋಟದ ಎಚ್. ಸುಜಯೀಂದ್ರ ಹಂದೆಯವರಿಗೆ ಮಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಹಂದೆಯವರ ‘ಯಕ್ಷ ದೀವಟಿಕೆ’ ಕೃತಿ ಬಹುಮಾನಕ್ಕೆ ಆಯ್ಕೆಯಾಗಿತ್ತು. ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು. ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ […]
ಅ . 20 ರಂದು ಮಂಗಳೂರಿನಲ್ಲಿ ಸಾಲಿಗ್ರಾಮ ಮಕ್ಕಳ ಮೇಳದ ‘ಸುವರ್ಣ ಪರ್ವ- 2’
ಕೋಟ (ಅ,13) : ವಿಶ್ವ ವಿಖ್ಯಾತ ಸಾಲಿಗ್ರಾಮ ಮಕ್ಕಳ ಮೇಳ-50 ರ ಸುವರ್ಣ ಪರ್ವದ ಎರಡನೆ ಕಾಯಕ್ರಮವು ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ಆಶ್ರಯದಲ್ಲಿ ಮಂಗಳೂರಿನ ಡಾನ್ ಬಾಸ್ಕೋ ಸಭಾಂಗಣದಲ್ಲಿ ಅಕ್ಟೋಬರ್ 20 ರ ಆದಿತ್ಯವಾರ ಸಂಜೆ 4.30 ಕ್ಕೆ ನಡೆಯಲಿದೆ. ಅಂದಿನ ಸಭೆಯಲ್ಲಿ ಮಕ್ಕಳ ಯಕ್ಷಗಾನ ಕ್ಷೇತ್ರದಲ್ಲಿ ಸಾಕಷ್ಟು ಕೃಷಿ ಮಾಡಿದ ಮಂಗಳೂರು ಕೋಡಿಕಲ್ನ ಸರಯೂ ಬಾಲ ಯಕ್ಷವೃಂದ(ರಿ) ಮಕ್ಕಳ ಮೇಳದ ನಿರ್ದೇಶಕ ರವಿ ಅಲೆವೂರಾಯ ವರ್ಕಾಡಿ ಅವರಿಗೆ ಸುವರ್ಣ […]
ಸುವರ್ಣ ಯಕ್ಷ ರಥ ಶತಕದತ್ತ ಸಾಗಲಿ : ರಾಜರ್ಷಿ ಡಾ. ಡಿ ವೀರೇಂದ್ರ ಹೆಗ್ಗಡೆ
ಕೋಟ(ಅ,10): “ಮಕ್ಕಳ ಮನಸ್ಸಿನಲ್ಲಿ ಕಲೆಯ ಬೀಜವನ್ನು ಬಿತ್ತಿದಾಗ ಅದು ಸಾರ್ಥಕವಾಗಿ ಮುಂದೆ ಕಲಾ ಶ್ರೀಮಂತಿಕೆಯನ್ನು ಮೆರೆಯುವುದುಕ್ಕೆ ಸಾಧ್ಯವಾಗುತ್ತದೆ. ಆದಷ್ಟು ಹೆಚ್ಚು ಹೆಚ್ಚು ಮಕ್ಕಳನ್ನು ಕಲಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಬೇಕು. ಆ ನಿಟ್ಟಿನಲ್ಲಿ ಚಾರಿತ್ರಿಕ ದಾಖಲೆಯನ್ನು ನಿರ್ಮಿಸಿ, ಸಾಲಿಗ್ರಾಮ ಮಕ್ಕಳ ಮೇಳವನ್ನು ಕಟ್ಟಿ ಬೆಳೆಸಿ, ಸಾಂಪ್ರದಾಯಿಕ ರಂಗ ಪ್ರದರ್ಶನದೊಂದಿಗೆ ಐವತ್ತು ವರ್ಷಗಳ ಕಾಲ ಮುನ್ನೆಡಿಸಿದ ಕಾರ್ಕಡ ಶ್ರೀನಿವಾಸ ಉಡುಪ ಮತ್ತು ಶ್ರೀಧರ ಹಂದೆಯವರ ಸಾಧನೆ ಅಪೂರ್ವವಾದುದು. ಅದೆಷ್ಟೋ ಮಕ್ಕಳು ಈ ತಂಡದಿಂದ […]
ಸಾಲಿಗ್ರಾಮ ಮಕ್ಕಳ ಮೇಳಕ್ಕೆ ’50’ ರ ಸುವರ್ಣ ಪರ್ವ
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ದ್ವಯರಾದ ದಿವಂಗತ ಕಾರ್ಕಡ ಶ್ರೀನಿವಾಸ ಉಡುಪ ಹಾಗೂ ಎಚ್. ಶ್ರೀಧರ ಹಂದೆಯವರ ಕನಸಿನ ಕೂಸು ಸಾಲಿಗ್ರಾಮ ಮಕ್ಕಳ ಮೇಳ. ಯಕ್ಷಗಾನದ ಇತಿಹಾಸದಲ್ಲಿ 1975 ರ ಅಕ್ಟೋಬರ್ 10 ನೇ ತಾರೀಖು ಮಕ್ಕಳ ಮೇಳ ಉದಯವಾದದ್ದು ಒಂದು ಮೈಲಿಗಲ್ಲು. ಯಕ್ಷಗಾನದ ಬಡಗುತಿಟ್ಟಿನ ಹಾರಾಡಿ, ಮಟಪಾಡಿ ತಿಟ್ಟುಗಳ ಶ್ರೀಮಂತ ಪರಂಪರೆ ಮತ್ತು ಸಂಪ್ರದಾಯದ ಕುಣಿತ, ವೇಷಭೂಷಣಗಳ ಅನನ್ಯತೆಯನ್ನು ಉಳಿಸಿ ಬೆಳೆಸುವಲ್ಲಿ ಸಾಲಿಗ್ರಾಮ ಮಕ್ಕಳ ಮೇಳದ್ದು ದೇಶದ ಉದ್ದಗಲಕ್ಕೂ […]