ಕುಂದಾಪುರ ( ಜ,02): ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿ ಕಲಾಂ ಜೀವನ ಧರ್ಮ ಮತ್ತು ಮಿಷನ್ ಇಂಡಿಯಾ 2020 ರ ಕುರಿತಾಗಿ ಹಿರಿಯ ಸಾಹಿತಿ DRDO ಕೇಂದ್ರ ರಕ್ಷಣಾ ಸಂಶೋಧನಾ ಇಲಾಖೆಯಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಅಬ್ದುಲ್ ಕಲಾಂ ಒಡನಾಡಿನಾಗಿದ್ದ ಶ್ರೀ ಜಯಪ್ರಕಾಶ ಪುತ್ತೂರುವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು. ಹಿರಿಯ ಉಪನ್ಯಾಸಕರಾದ ಶ್ರೀ ಭುಜಂಗ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪ್ರಾಂಶುಪಾಲರಾದ ಶ್ರೀರಾಮಕೃಷ್ಣ […]
Tag: uday kumar shetty
ವಕ್ವಾಡಿ: ಉಚಿತ ನೇತ್ರ ತಪಾಸಣಾ ಶಿಬಿರ ಸಂಪನ್ನ
ವಕ್ವಾಡಿ( ಆ,31): ಕರ್ನಾಟಕ ಸರಕಾರ , ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ,ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕೊರ್ಗಿ ಮತ್ತು ಉಪಕೇಂದ್ರ ವಕ್ವಾಡಿ , ಗ್ರಾಮಪಂಚಾಯತ್ ಕಾಳಾವರ, ಯುವಶಕ್ತಿ ಮಿತ್ರ ಮಂಡಳಿ (ರಿ) ಹೆಗ್ಗಾರ್ ಬೈಲ್ ವಕ್ವಾಡಿ ಹಾಗೂ ಕೆ.ಎಂ.ಸಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 31 ರಂದು ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 […]
ಕುಂದಾಪುರ: ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಏಕತಾ ದಿವಸ ಆಚರಣೆ
ಕುಂದಾಪುರ(ಆ,31) :ದೇಶದ ಮೊದಲ ಗ್ರಹ ಮಂತ್ರಿ, ಉಕ್ಕಿನ ಮನುಷ್ಯ ಶ್ರೀ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನದ ಪ್ರಯುಕ್ತ, ಅಕ್ಟೋಬರ್ 31 ರಂದು ರಾಷ್ಟ್ರೀಯ ಏಕತಾ ದಿವಸ ವನ್ನು ಆಚರಿಸಲಾಯಿತು. ಸಂಸ್ಥೆಯ ಪ್ರಭಾರ ಪ್ರಾಂಶುಪಾಲರಾದ ಶ್ರೀ ಭುಜಂಗ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಎನ್.ಎಸ್.ಎಸ್ಕಾರ್ಯಕ್ರಮಾಧಿಕಾರಿಗಳಾದ ಶ್ರೀಮತಿ ವನಿತಾ ನಾಯ್ಕ ಪ್ರಾಸ್ತಾವಿಕ ಮಾತುಗಳನ್ನಾಡಿ ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆʼಯನ್ನು ಬೋಧಿಸಿದರು. ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ:ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಕುಂದಾಪುರ (ಅ.15): ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ 07 ದಿನಗಳ ವಾರ್ಷಿಕ ವಿಶೇಷ ಶಿಬಿರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೆದೂರು ಇಲ್ಲಿ ಉದ್ಘಾಟನೆಗೊಂಡಿತು. ಕೆದೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಉದ್ಯಮಿಗಳಾದ ಶಾನಾಡಿ ಶ್ರೀ ಸಂಪತ್ ಕುಮಾರ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕೆದೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಈ ಶಿಬಿರದ ನೇತೃತ್ವ ವಹಿಸಿರುವ […]
ಸರ್ಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ರಾಜ್ಯಮಟ್ಟದ ಕಬ್ಬಡ್ಡಿ ಮತ್ತು ಕೋ ಕೋ ಪಂದ್ಯಾಟಕ್ಕೆ ಆಯ್ಕೆ
ಕುಂದಾಪುರ (ಆ,12): ಜನತ ಪದವಿ ಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ರಿಷಿಕ್,ಸುಜಯ್ ಹಾಗೂ ಪ್ರವೀಕ್ಷಾ ಶೆಟ್ಟಿ ಆಯ್ಕೆಯಾಗಿದ್ದಾರೆ. ಹಾಗೆಯೇ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು ಮುಂದಾರ್ತಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕೋ ಕೋ ಪಂದ್ಯಾಟದಲ್ಲಿ ದರ್ಶನ್ ಮತ್ತು ಸಹನಾ ಆಯ್ಕೆಯಾಗಿದ್ದಾರೆ. ಕಾಲೇಜಿನ ಪ್ರಾಂಶುಪಾಲರು, ಬೋಧಕ -ಬೋಧಕೇತರ ವ್ರಂದ ವಿದ್ಯಾರ್ಥಿಗಳಿಗೆ ಶುಭಹಾರೈಸಿದ್ದಾರೆ.
ಕೂಕನಾಡು ಪುಟ್ಟಮ್ಮ ಶೆಡ್ತಿ ನಿಧನ
ಹೆಮ್ಮಾಡಿ (ಆ.03): ಇಲ್ಲಿನ ದೇವಲ್ಕುಂದ ಗ್ರಾಮದ ಸಾಲಗದ್ದೆ ದಿ.ಶಿವರಾಮ ಶೆಟ್ರ ಪತ್ನಿ ಕೂಕನಾಡು ಪುಟ್ಟಮ್ಮ ಶೆಡ್ತಿ (93) ಅಕ್ಟೋಬರ್ 03 ರಂದು ನಿಧನ ಹೊಂದಿದ್ದಾರೆ. ಇವರು ಕೂಕನಾಡು ಅರಣ್ಯ ಗುತ್ತಿಗೆದಾರ ರಾಜರಾಮ ಶೆಟ್ಟಿ ಸೇರಿ ಮೂವರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ಎನ್.ಎಸ್.ಎಸ್ ಘಟಕದ ವತಿಯಿಂದ ಸಭಾ ನಿರ್ವಹಣೆ ಕುರಿತಾದ ಮಾಹಿತಿ ಕಾರ್ಯಕ್ರಮ
ಕುಂದಾಪುರ(ಸೆ,25): ಸರಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕವತಿಯಿಂದ “ಸಭಾ ನಿರ್ವಹಣೆ ಕುರಿತಾದ ಮಾಹಿತಿ” ಕಾರ್ಯಕ್ರಮವನ್ನು ಸೆಪ್ಟೆಂಬರ್ 21ರಂದು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರಕಾರಿ ಪದವಿ ಕಾಲೇಜು ತೆಂಕನಿಡಿಯೂರುಇದರ ಉಪನ್ಯಾಸಕರಾದ ಶ್ರೀ ಪಾಂಡುರoಗ ರವರು ಸಭಾ ಕಂಪನ, ನಿರೂಪಣೆ, ಸ್ವಾಗತ, ಧನ್ಯವಾದ ಸಮರ್ಪಣೆ ಹಾಗೂ ಸಂವಹನ ಕೌಶಲ್ಯ ಮುಂತಾದವುಗಳ ನಿರ್ವಹಣೆಯ ಕುರಿತಾಗಿ ಎನ್.ಎಸ್.ಎಸ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ […]
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ:ಭಾರತದ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ
ಕುಂದಾಪುರ(ಸೆ,17): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ 1864 ವಿದ್ಯಾರ್ಥಿಗಳು ಮತ್ತು ಉಪಪ್ರಾಂಶುಪಾಲರಾದ ಶ್ರೀ ಕಿರಣ ಹೆಗ್ಡೆ, ಉಪನ್ಯಾಸಕರು, ಅಧ್ಯಾಪಕರು ಭಾಗವಹಿಸಿದರು. ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಸಂವಿಧಾನದ ಪ್ರತಿಜ್ಞಾ ವಿಧಿಯನ್ನು ಉಪನ್ಯಾಸಕರಾದ ಶ್ರೀ ಉದಯ ಕುಮಾರ ಶೆಟ್ಟಿ ಬೋಧಿಸಿದರು.
ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ: ಬೀಳ್ಕೊಡುಗೆ ಕಾರ್ಯಕ್ರಮ
ಕುಂದಾಪುರ(ಆ,26): ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸುಮಾರು ಎಂಟು ವರ್ಷಗಳಿಂದ ಆಂಗ್ಲಭಾಷಾ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿದ್ದ ಶ್ರೀಮತಿ ಮೇರಿ ಅಶ್ವಿನಿ ವಿ ಅವರ ಸ್ವಂತ ಊರು ಮೈಸೂರಿಗೆ ವರ್ಗಾವಣೆ ಹೊಂದಿದ್ದು, ಆ ಪ್ರಯುಕ್ತ ಅವರಿಗೆ ಕಾಲೇಜಿನಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಾಮಕೃಷ್ಣ ಬಿ ಜಿ ಅಧ್ಯಕ್ಷತೆ ವಹಿಸಿ ಶ್ರೀಮತಿ ಮೇರಿ ಅಶ್ವಿನಿ ವಿ ರವರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಹಿರಿಯ ಉಪನ್ಯಾಸಕರಾದ ಶ್ರೀ ಭುಜಂಗ […]
ಉಡುಪಿ ಜಿಲ್ಲಾ ಕನ್ನಡ ಉಪನ್ಯಾಸಕ ಸಂಘದ ಅಧ್ಯಕ್ಷರಾಗಿ ಉದಯ ಕುಮಾರ್ ಶೆಟ್ಟಿ ಆಯ್ಕೆ
ಕುಂದಾಪುರ (ಜು,28): 2022-24 ಸಾಲಿನ ಉಡುಪಿ ಜಿಲ್ಲಾ ಕನ್ನಡ ಉಪನ್ಯಾಸಕ ಸಂಘದ ಅಧ್ಯಕ್ಷರಾಗಿ ಕುಂದಾಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಉದಯ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಇವರಿಗೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಭೋಧಕ & ಭೋಧಕೇತರ ಸಿಬ್ಬಂದಿಗಳು ಅಭಿನಂದನೆ ಕೋರಿದ್ದಾರೆ.










